Subscribe to Gizbot

ದೊಡ್ಡ ಸ್ಕ್ರಿನ್, ದೊಡ್ಡ ಬ್ಯಾಟರಿ, ದೊಡ್ಡ RAM ಇರುವ ಶಿಯೋಮಿ ಸ್ಮಾರ್ಟ್‌ಫೋನ್ ಬೆಲೆ ಮಾತ್ರ ತೀರಾ ಕಡಿಮೆ..!!

Written By:

ಭಾರತೀಯ ಮಾರುಕಟ್ಟೆಯಲ್ಲಿ ಇದೇ 14ನೇ ತಾರೀಖಿನಂದು ಶಿಯೋಮಿ ಬಿಡುಗಡೆ ಮಾಡಲಿರುವ ಸ್ಮಾರ್ಟ್‌ಫೋನ್‌ ಬಗ್ಗೆ ಕುತೂಹಲವು ಅಧಿಕವಾಗುತ್ತಿದ್ದು, ಈ ಸ್ಮಾರ್ಟ್‌ಫೋನ್ ಕುರಿತಂತೆ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿರುವ ಶಿಯೋಮಿ, ಈ ಸ್ಮಾರ್ಟ್‌ಫೋನಿನಲ್ಲಿ ದೊಡ್ಡ ಪರದೆ ಇರಲಿದೆ ಎನ್ನುವ ಸಣ್ಣ ಮಾಹಿತಿಯನ್ನು ಹರಿ ಬಿಟ್ಟಿದೆ. ಈ ಮೂಲಕ ತನ್ನ ಸ್ಮಾರ್ಟ್‌ಫೋನ್ ಕುರಿತ ಕುತೂಹಲವನ್ನು ಮತ್ತಷ್ಟು ಏರಿಕೆ ಮಾಡಲು ಮುಂದಾಗಿದೆ.

ದೊಡ್ಡ ಸ್ಕ್ರಿನ್, ದೊಡ್ಡ ಬ್ಯಾಟರಿ, ದೊಡ್ಡ RAM ಇರುವ ಶಿಯೋಮಿ ಸ್ಮಾರ್ಟ್‌ಫೋನ್..!

ಇದೇ ಕೆಲವು ದಿನಗಳ ಹಿಂದೆ ಕಾಂಪ್ಯಾಕ್ ಪವರ್ ಹೌಸ್ ಎನ್ನುವ ಸಣ್ಣ ಹಿಂಟ್ ವೊಂದನ್ನು ನೀಡಿದ್ದ ಶಿಯೋಮಿ, ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಹೊಸ ಹೊಸ ಮಾಹಿತಿಗಳನ್ನು ಬಿಡುಗಡೆ ಮಾಡುತ್ತಿದೆ. ಸದ್ಯ ಬಿಗ್ ಡಿಸ್‌ಪ್ಲೇಯ ಮಾಹಿತಿಯನ್ನು ನೀಡಿದೆ. ಒಟ್ಟಿನಲ್ಲಿ ರೆಡ್‌ಮಿ 5 ಬಿಡುಗಡೆಯಾಗಲಿದೆ ಎನ್ನುವ ಮಾಹಿತಿಯನ್ನು ಸೂಕ್ಷ್ಮವಾಗಿ ತಿಳಿಸುತ್ತಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಅನ್ನು ಅಮೆಜಾನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ದೊಡ್ಡ ಸ್ಕ್ರಿನ್:

ದೊಡ್ಡ ಸ್ಕ್ರಿನ್:

ಶಿಯೋಮಿ ಪ್ರಮೋಷನ್‌ನಲ್ಲಿ ತಿಳಿಸಿರುವ ಫೋನ್ ಫುಲ್ ಸ್ಕ್ರಿನ್ ವಿನ್ಯಾಸದ್ದಾಗಿದ್ದು, ರೆಡ್‌ಮಿ 5 ಸ್ಮಾರ್ಟ್‌ಫೋನಿನಲ್ಲಿ ಫುಲ್ ಸ್ಕ್ರಿನ್ ಡಿಸ್‌ಪ್ಲೇಯನ್ನು ಕಾಣಬಹುದಾಗಿದೆ, 18:9 ಅನುಪಾತದ 5.7 ಇಂಚಿನ HD ಪ್ಲಸ್ ಗುಣಮಟ್ಟವನ್ನು ಹೊಂದಿದೆ.

ದೊಡ್ಡ ಬ್ಯಾಟರಿ:

ದೊಡ್ಡ ಬ್ಯಾಟರಿ:

ಶಿಯೋಮಿ ರೆಡ್‌ಮಿ 5 ಸ್ಮಾರ್ಟ್‌ಫೋನಿನಲ್ಲಿ 3300mAh ಬ್ಯಾಟರಿಯನ್ನು ಅವಳವಡಿಸಲಿದ್ದು, ಇದು ಎರಡು ದಿನಗಳ ಬ್ಯಾಟರಿ ಬ್ಯಾಕಪ್ ನೀಡಲಿದೆ ಎನ್ನಲಾಗಿದೆ. ಇದೇ ಸ್ಮಾರ್ಟ್‌ಫೋನ್ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿದೆ.

ದೊಡ್ಡ RAM:

ದೊಡ್ಡ RAM:

ರೆಡ್‌ಮಿ 5 ಸ್ಮಾರ್ಟ್‌ಫೋನ್ ನಲ್ಲಿ ಶಿಯೋಮಿ ಗ್ರಾಹಕರಿಗೆ ಹೆಚ್ಚಿನ ಆಯ್ಕೆಯನ್ನು ನೀಡಲಿದೆ. ಮೂರು ಆವೃತ್ತಿಯಲ್ಲಿ ಮಾರಾಟವಾಗುವ ಈ ಸ್ಮಾರ್ಟ್‌ಫೋನ್ 2GB/3GB/4G RAM ಮತ್ತು 16GB ಮತ್ತು 32GB ಇಂಟರ್ನಲ್ ಮೆಮೊರಿಯೊಂದಿಗೆ ದೊರೆಯಲಿದೆ.

ದೊಡ್ಡ ಕ್ಯಾಮೆರಾ:

ದೊಡ್ಡ ಕ್ಯಾಮೆರಾ:

ರೆಡ್‌ಮಿ 5 ಸ್ಮಾರ್ಟ್‌ಫೋನಿನ ಹಿಂಭಾಗದಲ್ಲಿ 12MP ಕ್ಯಾಮೆರಾವನ್ನು ಕಾಣಬಹುದಾಗಿದ್ದು, ಜೊತೆಗೆ LED ಫ್ಲಾಷ್‌ ಲೈಟ್ ಅನ್ನು ನೀಡಲಾಗಿದೆ. ಮುಂಭಾಗದಲ್ಲಿ 5MP ಕ್ಯಾಮೆರಾವನ್ನು ಅಳವಡಿಸಲಾಗಿದೆ ಜೊತೆಗೆ ಫ್ಲಾಷ್ ಲೈಟ್ ಅನ್ನು ನೀಡಲಾಗಿದೆ.

Xiaomi Redmi Note 5 Pro ಮಾರಾಟದ ದಿನಾಂಕ ಫಿಕ್ಸ್!! ಫುಲ್ ಡೀಟೆಲ್ಸ್!!
ಬೆಲೆ ಮಾತ್ರ ಕಡಿಮೆ:

ಬೆಲೆ ಮಾತ್ರ ಕಡಿಮೆ:

ರೆಡ್‌ಮಿ 5 ಸ್ಮಾರ್ಟ್‌ಫೋನ್ ಬೆಲೆಯನ್ನು ತೀರಾ ಕಡಿಮೆ ಮಾಡುವ ಸಾಧ್ಯತೆ ಇದೆ. ಈ ಸ್ಮಾರ್ಟ್‌ಫೋನ್ ರೂ.6,999ಕ್ಕೆ ಮಾರಾಟವಾಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಮಾರುಕಟ್ಟೆಯಲ್ಲಿ ಹೆಚ್ಚಿನ ಸ್ಪರ್ಧೆ ಏರ್ಪಟಿದೆ. ಅಲ್ಲದೇ ಅಮೆಜಾನ್‌ನಲ್ಲಿ ಮಾತ್ರವೇ ಈ ಫೋನ್‌ ಅನ್ನು ಬಿಡುಗಡೆ ಮಾಡಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
Redmi 5 India Launch Set for Wednesday, Will Be Available via Amazon India
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot