ರೆಡ್ಮಿ 9 ಪವರ್ 6GB RAM ವೇರಿಯಂಟ್‌ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಶಿಯೋಮಿಯ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಮಾಡಿ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ವೇರಿಯಂಟ್ ಮಾಡೆಲ್‌ ಅನ್ನು ಇದೀಗ ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡು ಗ್ರಾಹಕರ ಗಮನ ಸೆಳೆದಿದೆ.

ಸ್ಮಾರ್ಟ್‌ಫೋನ್‌

ಹೌದು, ಶಿಯೋಮಿ ಸಂಸ್ಥೆ ತನ್ನ ಹೊಸ ರೆಡ್‌ಮಿ 9 ಪವರ್‌ ಸ್ಮಾರ್ಟ್‌ಫೋನ್‌ 6GB RAM + 128GB ವೇರಿಯಂಟ್‌ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್‌ ಜೊತೆ MIUI 12 ಸಪೋರ್ಟ್‌ ಪಡೆದುಕೊಂಡಿದೆ. ಇನ್ನುಳಿದಂತೆ ರೆಡ್‌ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋಣ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡಾಟ್‌ಡ್ರಾಪ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತ ಹೊಂದಿದ್ದು, 400 ನಿಟ್ಸ್ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯ ಏನು

ಪ್ರೊಸೆಸರ್‌ ಕಾರ್ಯ ಏನು

ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಫೋನ್ 4GB RAM + 64GB ಮತ್ತು 6GB RAM + 128GB ಆಂತರೀಕ ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ ವಿನ್ಯಾಸ

ಕ್ವಾಡ್ ಕ್ಯಾಮೆರಾ ವಿನ್ಯಾಸ

ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಸೆನ್ಸಾರ್‌ ಎಐ ಫೇಸ್ ಅನ್ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ V 5.0, GPS, ಇನ್ಫ್ರಾರೆಡ್ (ಐಆರ್) ಬ್ಲಾಸ್ಟರ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ನೆಟ್‌ಫ್ಲಿಕ್ಸ್ ಸೇರಿದಂತೆ ಪ್ಲಾಟ್‌ಫಾರ್ಮ್‌ಗಳ ಮೂಲಕ ಎಚ್‌ಡಿ ವೆಬ್ ಸ್ಟ್ರೀಮಿಂಗ್ ಅನ್ನು ಬೆಂಬಲಿಸಲು ವೈಡ್‌ವೈನ್ ಎಲ್ 1 ಪ್ರಮಾಣೀಕರಣವೂ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರೆಡ್‌ಮಿ 9 ಪವರ್‌ ಸ್ಮಾರ್ಟ್‌ಫೋನ್‌ ಹೊಸ 6GB RAM + 128GB ವೇರಿಯಂಟ್ ಬೆಲೆಯು 12,999ರೂ.ಗಳು ಆಗಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 10,999ರೂ ಆಗಿದ್ದು, 4GB RAM + 128GB ಸ್ಟೋರೇಜ್ ವೇರಿಯಂಟ್ 11,999ರೂ. ಗಳ ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲೇಜಿಂಗ್ ಬ್ಲೂ, ಎಲೆಕ್ಟ್ರಿಕ್ ಗ್ರೀನ್, ಫೈರಿ ರೆಡ್ ಮತ್ತು ಮೈಟಿ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Redmi 9 Power 6GB RAM + 128GB storage variant is priced at Rs. 12,999 in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X