Home
ಮೊಬೈಲ್

ಅಗ್ಗದ ಬೆಲೆಗೆ Redmi A4 5G ಲಾಂಚ್; 50MP ಕ್ಯಾಮೆರಾ.. 5160mAh ಬ್ಯಾಟರಿ.. ನ.27ಕ್ಕೆ ಸೇಲ್!

ಕೇವಲ 8,499 ರೂ.! ಭಾರತಕ್ಕೆ ಬಂತು ಹೊಸ ರೆಡ್ಮಿ ಮೊಬೈಲ್. ಹೌದು, ಶಿಯೋಮಿ (Xiaomi) ಭಾರತದಲ್ಲಿ ನೂತನ ರೆಡ್ಮಿ A4 5G (Redmi A4 5G) ಫೋನನ್ನು ಬಿಡುಗಡೆ ಮಾಡಿದೆ. ಇದನ್ನು ಅಗ್ಗದ ಬೆಲೆಯಲ್ಲಿ ಪರಿಚಯಿಸಲಾಗಿದೆ. ನೀವು, 10 ಸಾವಿರ ರೂ.ಗಿಂತ ಕಡಿಮೆ ಬೆಲೆಯಲ್ಲಿ 5G ಮೊಬೈಲ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಅಗ್ಗದ ದರವೆಂಬ ಕಾರಣಕ್ಕೆ ಹೊಸ ಮೊಬೈಲ್‌ನ ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆಯಲ್ಲಿ ಕಂಪನಿಯು ಯಾವುದೇ ರಾಜಿ ಮಾಡಿಕೊಂಡಿಲ್ಲ. ಹೊಸ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.

ಹೌದು, ಬಹುನಿರೀಕ್ಷಿತ ರೆಡ್ಮಿ A4 5G ಮೊಬೈಲ್ ಅಧಿಕೃತವಾಗಿ ಬಿಡುಡಗೆಯಾಗಿದೆ. ಇದು ಕಳೆದ ವರ್ಷ ಬಿಡುಗಡೆಯಾಗಿದ್ದ ರೆಡ್ಮಿ A3 5G (Redmi A3 5G) ಫೋನಿನ ಉತ್ತರಾಧಿಕಾರಿಯಾಗಿದೆ. ಈ ಫೋನ್ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ ಹೊಂದಿದೆ. ವಿಶೇಷವೆಂದರೆ, ಈ ಪ್ರೊಸೆಸರ್‌ ಹೊಂದಿರುವ ವಿಶ್ವದ ಮೊದಲ ಅಗ್ಗದ ಮೊಬೈಲ್ ಇದಾಗಿದೆ. ಈ ಫೋನ್ 6.88 ಇಂಚಿನ ದೊಡ್ಡ ಡಿಸ್ಪ್ಲೇ, 5160mAh ಬ್ಯಾಟರಿ, 50 ಮೆಗಾಪಿಕ್ಸೆಲ್ ಎಐ ಡ್ಯುಯಲ್ ಕ್ಯಾಮೆರಾ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

8,499 ಸಾಕು! ಹೊಸ Redmi A4 5G ಫೋನ್ ಲಾಂಚ್; ಹೇಗಿವೆ ಫೀಚರ್ಸ್‌?

ರೆಡ್ಮಿ A4 5G ಫೋನಿನ ಬೆಲೆ ಮತ್ತು ಲಭ್ಯತೆ

ಕಂಪನಿಯು ರೆಡ್ಮಿ A4 5G ಫೋನನ್ನು ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಫೋನಿನ 4GB + 64GB ಸ್ಟೋರೇಜ್‌ ಆಯ್ಕೆಯ ಬೆಲೆ 8,499 ರೂ. ಆಗಿದೆ. 4GB + 128GB ಸ್ಟೋರೇಜ್‌ ರೂಪಾಂತರವನ್ನು 9,499 ರೂ.ಗೆ ಬಿಡುಗಡೆ ಮಾಡಲಾಗಿದೆ. ಈ ಮೊಬೈಲ್ ಸ್ಪಾರ್ಕಲ್ ಪರ್ಪಲ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದೇ ನವೆಂಬರ್ 27 ರಿಂದ ಫೋನಿನ ಮೊದಲ ಮಾರಾಟ ಪ್ರಾರಂಭವಾಗಲಿದೆ. ನೀವು, ಅಮೆಜಾನ್‌ ಮತ್ತು Mi ವೆಬ್‌ಸೈಟ್ ಮೂಲಕ ರೆಡ್ಮಿ A4 5G ಫೋನನ್ನು ಖರೀದಿಸಬಹುದು.

ರೆಡ್ಮಿ A4 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರೆಡ್ಮಿ A4 5G ಮೊಬೈಲ್ 6.88 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1640 X 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಸ್ಪರ್ಶ ಮಾದರಿ ದರ, 600 ನಿಟ್ಸ್‌ ಬ್ರೈಟ್‌ನೆಸ್‌ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ನೂತನ ರೆಡ್ಮಿ A4 5G ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಿದೆ. ಈ ಪ್ರೊಸೆಸರ್ ಅನ್ನು 4ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ಹೈಪರ್‌ ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್ ಆಯ್ಕೆ

ರೆಡ್ಮಿ A4 5G ಫೋನ್ 4GB RAM + 64GB ಮತ್ತು 128GB ಸ್ಟೋರೇಜ್‌ ಹೊಂದಿದೆ. ಇದನ್ನು 1TB ವರೆಗೆ ವಿಸ್ತರಿಸಬಹುದು. 4GB ವರೆಗಿನ ವರ್ಚುವಲ್ RAM ಬೆಂಬಲವೂ ಲಭ್ಯವಿದೆ.

ಕ್ಯಾಮೆರಾ ಸೆಟಪ್

ಹೊಸ ರೆಡ್ಮಿ A4 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಇದು ಎಲ್ಇಡಿ ಫ್ಲ್ಯಾಷ್ ಮತ್ತು ಸೆಕೆಂಡರಿ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ರೆಡ್ಮಿ A4 5G ಫೋನನ್ನು 5160mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಮತ್ತು 33W ಅಡಾಪ್ಟರ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ A4 5G ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು IP52 ರೇಟಿಂಗ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ 5, ಬ್ಲೂಟೂತ್ 5, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Redmi A4 5G with Snapdragon 4s Gen 2 launched in India starting at Rs. 8499; know Price, offers, Specs and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+