Home
ಮೊಬೈಲ್

ಹೊಸ Redmi A5 ಫೋನ್ ಲಾಂಚ್; 7000ಕ್ಕಿಂತ ಕಡಿಮೆ ಬೆಲೆ.. ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು

ಶಿಯೋಮಿ ಹೊಸ ಅಗ್ಗದ 4G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ರೆಡ್ಮಿ A5 (Redmi A5) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದನ್ನು 7000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಪರಿಚಯಿಸಲಾಗಿದೆ. ಈ ಮೊಬೈಲ್ 6.88 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. 120Hz ವರೆಗಿನ ರಿಫ್ರೆಶ್ ದರವನ್ನು ಹೊಂದಿದೆ. ಇದು ಯುನಿಸಾಕ್ T7250 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ, 5200mAh ಸಾಮರ್ಥ್ಯದ ಬ್ಯಾಟರಿ ಲಭ್ಯವಿದೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ಇನ್ನಿತರ ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ರೆಡ್ಮಿ A5 ಮೊಬೈಲ್ ಮಿಡ್‌ನೈಟ್ ಬ್ಲಾಕ್ ಮತ್ತು ಸ್ಯಾಂಡಿ ಗೋಲ್ಡ್ ಬಣ್ಣಗಳಲ್ಲಿ ಲಭ್ಯವಿದೆ. ಇದು ನಯವಾದ ವಿನ್ಯಾಸ ಹೊಂದಿದೆ. ಫ್ಲಾಟ್ ಫ್ರೇಮ್ ಮತ್ತು ವರ್ಧಿತ ಕ್ಯಾಮೆರಾ ಡೆಕೊದೊಂದಿಗೆ ಬರುತ್ತದೆ. ಈ ಫೋನ್ ಮ್ಯಾಟ್, ಕಲೆ ನಿರೋಧಕ ಮೇಲ್ಮೈಯನ್ನು ಹೊಂದಿದೆ. ಲೇಕ್ ಗ್ರೀನ್ ಮತ್ತು ಓಷನ್ ಬ್ಲೂ ರೂಪಾಂತರಗಳು ಪ್ರಕೃತಿಯಿಂದ ಸ್ಫೂರ್ತಿ ಪಡೆಯುತ್ತವೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ಇನ್ನಿತರ ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ಹೊಸ Redmi A5 ಫೋನ್ ಲಾಂಚ್; 7000ಕ್ಕಿಂತ ಕಡಿಮೆ ಬೆಲೆ.. ವಿಶೇಷತೆಗಳೇನು ಗೊತ್ತಾ?

ರೆಡ್ಮಿ A5 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರೆಡ್ಮಿ A5 ಸ್ಮಾರ್ಟ್‌ಫೋನ್ 6.88 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು ಎಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 1,640 x 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ, ಡಿಸಿ ಡಿಮ್ಮಿಂಗ್ ಮತ್ತು ಕಣ್ಣಿನ ರಕ್ಷಣೆಯೊಂದಿಗೆ ಬರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ರೆಡ್ಮಿ A5 ಮೊಬೈಲ್ ಯುನಿಸಾಕ್ T7250 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 12 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 (ಗೋ ಆವೃತ್ತಿ) ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಈ ಫೋನ್, ಮಾಲಿ G57 MP1 ಜಿಪಿಯು ಸಹ ಹೊಂದಿದೆ.

RAM ಮತ್ತು ಸ್ಟೋರೇಜ್ ಆಯ್ಕೆ

ರೆಡ್ಮಿ A5 ಫೋನ್ 3GB ಮತ್ತು 4GB RAM ನೊಂದಿಗೆ ಬರುತ್ತದೆ. ಈ ಫೋನಿನಲ್ಲಿ 64GB ಮತ್ತು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್​​ ಮೂಲಕ 2TB ವರೆಗೆ ಸ್ಟೋರೇಜ್ ವಿಸ್ತರಿಸುವ ಸೌಲಭ್ಯ ಹೊಂದಿದೆ.

ಕ್ಯಾಮೆರಾ ಸೆಟಪ್

ರೆಡ್ಮಿ A5 ಸ್ಮಾರ್ಟ್‌ಫೋನ್ ಅದ್ಭುತ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ಸೆಕೆಂಡರಿ ಕ್ಯಾಮೆರಾ ಮತ್ತು ಎಲ್‌ಇಡಿ (LED) ಫ್ಲ್ಯಾಶ್ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ.

ಹೊಸ Redmi A5 ಫೋನ್ ಲಾಂಚ್; 7000ಕ್ಕಿಂತ ಕಡಿಮೆ ಬೆಲೆ.. ವಿಶೇಷತೆಗಳೇನು ಗೊತ್ತಾ?

ಬ್ಯಾಟರಿ ಮತ್ತು ಚಾರ್ಜಿಂಗ್

ರೆಡ್ಮಿ A5 ಫೋನ್ 5200mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ A5 ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಹಾಗೆಯೇ 3.5mm ಆಡಿಯೋ ಜ್ಯಾಕ್, ಎಫ್‌ಎಂ ರೇಡಿಯೋ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ ಸಿಮ್ (ನ್ಯಾನೋ + ಮೈಕ್ರೋ ಎಸ್‌ಡಿ), ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.2, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ರೆಡ್ಮಿ A5 ಬೆಲೆ ಮತ್ತು ಲಭ್ಯತೆ

ರೆಡ್ಮಿ A5 ಮೊಬೈಲ್ ಬೆಲೆ 6,750 ರೂ. ನಿಂದ ಪ್ರಾರಂಭವಾಗುತ್ತದೆ. ಇದು ಈಗಾಗಲೇ ಹಲವಾರು ದೇಶಗಳ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಈ ವಾರದ ಕೊನೆಯಲ್ಲಿ ಈ ಫೋನ್ ಭಾರತದಲ್ಲಿ ಪೊಕೊ C71 (POCO C71) ಆಗಿ ಬಿಡುಗಡೆಯಾಗಲಿದೆ.

Best Mobiles in India

English summary
Redmi A5 with 6.88″ 120Hz display and 5200mAh battery Launched: Could Debut as Poco C71 in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+