Just In
Don't Miss
- Finance
ಡಿಸೆಂಬರ್ 7ರ ಚಿನ್ನ- ಬೆಳ್ಳಿ ದರ ಹೀಗಿದೆ
- News
ತೆಲಂಗಾಣ ಎನ್ಕೌಂಟರ್ ಬಗ್ಗೆ ಸುಪ್ರೀಂಕೋರ್ಟ್ ಸಿಜೆಐ ಹೇಳಿದ್ದೇನು?
- Automobiles
ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್
- Sports
ಭಾರತ vs ವಿಂಡೀಸ್: ಟೀಮ್ ಇಂಡಿಯಾದ ಮೇಲೆ ಗುಡುಗಿದ ಯುವರಾಜ!
- Movies
ನಟಿ ರಚಿತಾ ರಾಮ್ ಸಹೋದರಿ ಮದುವೆಯಲ್ಲಿ ನಿಖಿಲ್ ಕುಮಾರ್
- Education
ರೆಪ್ಕೊ ಬ್ಯಾಂಕ್ ನಲ್ಲಿ 15 ಹುದ್ದೆಗಳ ನೇಮಕಾತಿ
- Lifestyle
ರುದ್ರಾಕ್ಷಿ ಮಾಲೆ ಧರಿಸುವವರು ಗಮನಿಸಲೇಬೇಕಾದ ಅಂಶಗಳಿವು
- Travel
ಹಿಮಾಚಲ ಪ್ರದೇಶದ ಈ ಜಲಪಾತಗಳು ನಿಮ್ಮನ್ನು ಬೇರೊಂದು ರಮ್ಯಲೋಕಕ್ಕೆ ಕೊಂಡೊಯ್ಯುವುದು ಖಂಡಿತ
ಶಿಯೋಮಿಯಿಂದ ಭರ್ಜರಿ ಸಿಹಿಸುದ್ದಿ!..ಭಾರತಕ್ಕೆ ಬರುತ್ತಿದೆ 'ರೆಡ್ಮಿ ಕೆ 20 ಪ್ರೊ'!!
ಶಿಯೋಮಿಯ ನೂತನ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ 'ರೆಡ್ಮಿ ಕೆ 20 ಪ್ರೊ' ಸ್ಮಾರ್ಟ್ಫೋನ್ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಶಿಯೋಮಿ ಕಂಪೆನಿ ಟ್ವಿಟ್ ಮೂಲಕ ತಿಳಿಸಿದೆ. ರೆಡ್ಮಿ ಕೆ 20 ಪ್ರೊ ಅನ್ನು "ವಿಶ್ವದ ಅತಿ ವೇಗದ ಫೋನ್" ಎಂದು ಕರೆಯುವ ಟೀಸರ್ ಚಿತ್ರವನ್ನು ಶಿಯೋಮಿ ಸಹ ಬ್ರ್ಯಾಂಡ್ 'ರೆಡ್ಮಿ ಇಂಡಿಯಾ' ಬಿಡುಗಡೆ ಮಾಡಿದ್ದು, ಜಸ್ಟ್ ''ಟ್ಯೂನ್ ಆಗಿರಿ" ಎಂದು ಹೇಳುವ ಮೂಲಕ ಇನ್ನೇನು ಕೆಲವೇ ದಿನಗಳಲ್ಲಿ ರೆಡ್ಮಿ ಕೆ 20 ಪ್ರೊ ಬಿಡುಗಡೆಯಾಗುವ ಸಿಹಿಸುದ್ದಿ ನೀಡಿದೆ.
ರೆಡ್ಮಿ ಇಂಡಿಯಾ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ಟ್ವೀಟ್ನಲ್ಲಿ ರೆಡ್ಮಿ ಕೆ 20 ಪ್ರೊ ಅನ್ನು ವಿಶ್ವದ ಅತಿ ವೇಗದ ಫೋನ್ ಎಂದು ಕರೆಯುವ ಚಿತ್ರವಿದೆ. ಇದು ಆಕ್ಟಾ-ಕೋರ್ ರ್ಸ್ನ್ಯಾಪ್ಡ್ರಾಗನ್ 855 SoC ಪ್ರೊಸೆಸರ್ ಮತ್ತು 8GB ವರೆಗೆ RAM ಅನ್ನು ಹೊಂದಿದೆ. ಒನ್ಪ್ಲಸ್ 7 ಪ್ರೊ ವಿರುದ್ಧ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಮತ್ತು ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ನೊಂದಿಗೆ ಸ್ಪರ್ಧಿಸುತ್ತಿರುವ ಈ ಸ್ಮಾರ್ಟ್ಫೋನ್ ಚೀನಾದಲ್ಲಿ ಕೇವಲ 26,000 ರೂ.ಗಳಿಂದ ಆರಂಭವಾಗಿದೆ.!
Some celebrations are short-lived. Stay tuned. pic.twitter.com/NitBxGxOVA
— Redmi India (@RedmiIndia) June 14, 2019
ಇನ್ನು ಚೀನಾದಲ್ಲಿ ಬಿಡುಗಡೆಗೂ ಮುಂಚಿನಿಂದಲೇ ಜನರ ನಿದ್ದೆಗೆಡಿಸಿದ್ದ 'ರೆಡ್ಮಿ ಕೆ20 ಪ್ರೊ' ಮೊದಲ ಸೇಲ್ ಅನ್ನು ಇದೇ ಜೂನ್ 1 ರಂದು ಆಯೋಜಿಸಲಾಗಿತ್ತು. ಈ ಸೇಲ್ ಆರಂಭವಾಗಿ ಕೇವಲ ಎರಡೇ ಗಂಟೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ರೆಡ್ಮಿ ಕೆ20 ಪ್ರೊ ಸ್ಮಾರ್ಟ್ಫೋನ್ಗಳು ಮಾರಾಟವಾಗಿದ್ದವು. ಹಾಗಾದರೆ, ಇತ್ತೀಚಿಗಷ್ಟೆ ಕಾಲಿಟ್ಟಿರುವ 'ರೆಡ್ಮಿ ಕೆ20 ಪ್ರೊ' ಸ್ಮಾರ್ಟ್ಫೋನ್ ಹೇಗಿದೆ?, ಫೀಚರ್ಸ್ ಯಾವುವು? ಎಂಬುದನ್ನು ಮುಂದೆ ಓದಿ ತಿಳಿಯಿರಿ.

6.39-ಇಂಚಿನ AMOLED ಡಿಸ್ಪ್ಲೇ
ರೆಡ್ಮಿ ಕೆ20 ಪ್ರೊ ಸ್ಮಾರ್ಟ್ಫೋನ್ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್ಗಳ ಎಫ್ಹೆಚ್ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.

ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್
ರೆಡ್ಮಿ ಕೆ20 ಪ್ರೊ ರೂಪಾಂತದ ಸ್ಮಾರ್ಟ್ಫೋನ್ 8GB RAM ನೋಂದಿಗೆ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅನ್ನು ಹೊಂದಿದೆ. 256GB ವರೆಗಿನ ಆಂತರಿಕ ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್ಪೋನ್ ಮೆಮೊರಿ ವಿಸ್ತರಣೆಗೆ ಯಾವುದೇ ಅವಕಾಶವನ್ನು ಹೊಂದಿರುವುದಿಲ್ಲ. ಇನ್ನು ಇತ್ತೀಚಿನ MIUI 10 ಆಂಡ್ರಾಯ್ಡ್ 9 ಪೈ ರೊಂದಿಗೆ ಫೋನ್ ರನ್ ಆಗಲಿದೆ.

4,000mAh ಬ್ಯಾಟರಿ
ರೆಡ್ಮಿ ಕೆ20 ಪ್ರೊ ಸ್ಮಾರ್ಟ್ಫೋನ್ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಇದು ಹೊಂದಿದೆ. ಡಿವೈಸ್ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.

ಪಾಪ್ಅಪ್ ಸೆಲ್ಫೀ ಕ್ಯಾಮೆರಾ!
ರೆಡ್ಮಿ ಕೆ20 ಪ್ರೊನಲ್ಲಿ (ಪೊಕೊ ಫೋನ್ 2 ) 32 ಎಂಪಿ ಪಾಪ್-ಅಪ್ ಸೆಲ್ಫೀ ಕ್ಯಾಮರಾ ವ್ಯವಸ್ಥೆ ಇರುವ ವದಂತಿಗಳು ಖಚಿತವಾಗಿದೆ. ಫೋನಿನಲ್ಲಿ ಟ್ರಿಪಲ್ ಲೆನ್ಸ್ ಸೆಟಪ್ ಹಿಂಭಾಗದಲ್ಲಿದ್ದು 48ಎಂಪಿ ಪ್ರೈಮರಿ ಸೆನ್ಸರ್, 8ಎಂಪಿ ಡೆಪ್ತ್ ಸೆನ್ಸರ್ ಹಾಗೂ ವೈಡ್ ಆಂಗಲ್ಗೆ ಸಹಕಾರಿಯಾಗುವಂತಹ ಕ್ಯಾಮೆರಾ ಅಳವಡಿಸಲಾಗಿದೆ. ಸುಧಾರಿತ ಕ್ಯಾಮೆರಾ ತಂತ್ರಜ್ಞಾನಗಳು ಇರಲಿವೆ.

ಇತರೆ ಎಲ್ಲಾ ಫೀಚರ್ಸ್
ರೆಡ್ಮಿ ಕೆ20 ಪ್ರೊ ಫೋನಿನಲ್ಲಿ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೋಡಬಹುದು.

ಬೆಲೆಗಳು ಎಷ್ಟು?
ರೆಡ್ಮಿ ಕೆ ಪ್ರೊ ಮೂರು ಮಾದರಿಗಳಲ್ಲಿ ಪ್ರೀ ಬುಕ್ಕಿಂಗ್ಗೆ ಬಂದಿದ್ದು, ಬೆಲೆಗಳು ಇಂತಿವೆ. 6 ಜಿಬಿ RAM + 128 ಜಿಬಿ ಮೆಮೊರಿ- 2,599 ಯುವಾನ್ (ಅಂದಾಜು ರೂ. 26,000), 8 ಜಿಬಿ RAM + 128 ಜಿಬಿ ಮೆಮೊರಿ- 2,799 ಯುವಾನ್ (ಅಂದಾಜು ರೂ. ರೂ. 28,000), ಹಾಗೂ 8 ಜಿಬಿ RAM + 256 ಜಿಬಿ ಮೆಮೊರಿ- 2,999 ಯುವಾನ್ (ಸುಮಾರು ರೂ 30,000) ರೂ.ಗಳಾಗಿವೆ.
-
29,999
-
14,999
-
28,999
-
34,999
-
1,09,894
-
15,999
-
36,990
-
79,999
-
71,990
-
49,999
-
14,999
-
9,999
-
64,900
-
34,999
-
15,999
-
25,999
-
46,354
-
19,999
-
17,999
-
9,999
-
18,200
-
18,270
-
22,300
-
33,530
-
14,030
-
6,990
-
20,340
-
12,790
-
7,090
-
17,090