ರೆಡ್ಮಿ ನೋಟ್ 10 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M12: ಭಿನ್ನತೆಗಳೆನು?..ಬೆಸ್ಟ್‌ ಯಾವುದು?

|

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ರಚನೆ ಪಡೆದಿರುವುದು ಹೈಲೈಟ್‌ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಸಹ ಬಜೆಟ್ ದರದಲ್ಲಿ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಆದರೆ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ ಆಯ್ಕೆ?

ರೆಡ್ಮಿ ನೋಟ್ 10 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M12: ಭಿನ್ನತೆಗಳೆನು?‌

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ನೂತನ ಗ್ಯಾಲಕ್ಸಿ M12 ಮತ್ತು ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಪ್ರೈಸ್‌ ಟ್ಯಾಗ್‌ ಹೊಂದಿರುವುದು ಮೊದಲ ಆಕರ್ಷಕ ಅನಿಸಿದೆ. ಹಾಗೆಯೇ ಈ ಎರಡು ಫೋನ್‌ಗಳು ಕ್ವಾಡ್‌ ಕ್ಯಾಮೆರಾ ರಚನೆ ಪಡೆದಿರುವುದು ಜೊತೆಗೆ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆಯನ್ನು ಹೊಂದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಗುರುತಿಸಿಕೊಂಡಿದೆ. ಈ ಎರಡು ಫೋನ್‌ಗಳ ಬಹುತೇಕ ಫೀಚರ್ಸ್‌ಗಳಲ್ಲಿ ಸಾಮ್ಯತೆ ಕಂಡು ಬಂದರು, ಇವೆರಡರ ಮಧ್ಯೆ ಭಿನ್ನತೆಗಳು ಇವೆ. ಹಾಗಾದರೇ ಈ ಎರಡು ಫೋನ್‌ಗಳಲ್ಲಿ ಖರೀದಿಗೆ ಯಾವುದು ಉತ್ತಮ? ಇವೆರಡು ಫೋನ್‌ಗಳ ಕಂಪ್ಲೀಟ್‌ ಫೀಚರ್ಸ್‌ ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸದ ಭಿನ್ನತೆಗಳೆನು
ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಅದೇ ರೀತಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್‌ ರೇಟ್‌ 90Hz ಆಗಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.

ರೆಡ್ಮಿ ನೋಟ್ 10 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M12: ಭಿನ್ನತೆಗಳೆನು?‌

ಪ್ರೊಸೆಸರ್ ಕಾರ್ಯ ಹೇಗೆ
ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅದೇ ರೀತಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.

ರೆಡ್ಮಿ ನೋಟ್ 10 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M12: ಭಿನ್ನತೆಗಳೆನು?‌

ಕ್ವಾಡ್ ಕ್ಯಾಮೆರಾ ಸ್ಪೆಷಲ್
ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದ್ದು, f/2.2 ಅಪರ್ಚರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್ ಸ್ಕೈಲ್‌ ನಾಚ್ ಇದೆ.

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ
ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 4G ನೆಟ್‌ವರ್ಕ್‌ನಲ್ಲಿ 58 ಗಂಟೆಗಳ ಟಾಕ್‌ಟೈಮ್‌ ಅನ್ನು ನೀಡಲಿದೆ. ಈ ಫೋನ್ 164.0x75.9x9.7mm ಸುತ್ತಳತೆಯನ್ನು ಪಡೆದಿದ್ದು, ಹಾಗೆಯೇ 221 ಗ್ರಾಂ ತೂಕವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ರೆಡ್ಮಿ ನೋಟ್ 10 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M12: ಭಿನ್ನತೆಗಳೆನು?‌

ಬೆಲೆ ಎಷ್ಟು?
ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ 11,999 ರೂ ಬೆಲೆಯನ್ನು ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 13,999 ರೂ.ಬೆಲೆಯನ್ನು ಹೊಂದಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M12 4 ಜಿಬಿ + 64 ಜಿಬಿ ವೇರಿಯಂಟ್‌ ಸ್ಟೋರೇಜ್‌ನ ಬೆಲೆಯು 10,999ರೂ. ಆಗಿದೆ. ಹಾಗೆಯೇ 6 ಜಿಬಿ + 128 ಜಿಬಿ ಸ್ಟೋರೇಜ್‌ನ ವೇರಿಯಂಟ್‌ ಬೆಲೆಯು 13,499ರೂ. ಆಗಿದೆ.

Best Mobiles in India

English summary
Redmi Note 10 VS Samsung Galaxy M12 Comparison: Which One Is Better To Buy.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X