ರೆಡ್ಮಿ ನೋಟ್ 10S ಫಸ್ಟ್‌ ಲುಕ್: ಬಜೆಟ್‌ ಪ್ರೈಸ್‌ನಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್!

|

ಶಿಯೋಮಿ ಸಂಸ್ಥೆಯು ತನ್ನ ಜನಪ್ರಿಯ ನೋಟ್ 10 ಸ್ಮಾರ್ಟ್‌ಫೋನ್ ಸರಣಿಯಲ್ಲಿ ಇತ್ತೀಚಿಗೆ ಹೊಸದಾಗಿ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಬಜೆಟ್‌ ಪ್ರೈಸ್‌ ಮತ್ತು ಆಕರ್ಷಕ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. 5,000mAh ಸಾಮರ್ಥ್ಯದ ಬ್ಯಾಟರಿ, ಹೈ ಎಂಡ್ ಕ್ಯಾಮೆರಾ ಸೆನ್ಸಾರ್ ಸೇರಿದಂತೆ ಫುಲ್‌ ಹೆಚ್‌ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಪಡೆದಿರುವುದು ಪ್ರಮುಖ ಹೈಲೈಟ್‌ ಆಗಿ ಕಾಣಿಸುತ್ತದೆ.

ನೋಟ್

ಶಿಯೋಮಿಯ ಕಂಪನಿಯು ನೂತನವಾಗಿ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ವೇಗದ ಕಾರ್ಯವೈಖರಿಯನ್ನು ಒಳಗೊಂಡಿದೆ. ಹಾಗಾದರೇ ಹೊಸ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಫಸ್ಟ್‌ ಲುಕ್ ಹೇಗಿದೆ? ಈ ಪೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌, ಸ್ಕ್ರೀನ್‌ ಟು ಬಾಡಿ 83.5% ಅನುಪಾತ ಹೊಂದಿರಲಿದ್ದು, ಡಿಸ್‌ಪ್ಲೇ 2,5D ಟೆಂಪರ್ ಗ್ಲಾಸ್‌ನಿಂದ ರಕ್ಷಣೆ ಹೊಂದಿದೆ. ಇದರೊಂದಿಗೆ ಈ ಪೋನ್ ಹಲವು ಕಲರ್ ಮೋಡ್ ಆಯ್ಕೆಗಳನ್ನು ಒಳಗೊಂಡಿದೆ. ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಉತ್ತಮ ಡಿಸ್‌ಪ್ಲೇ ಇದಾಗಿದೆ ಎನ್ನಬಹುದು.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಪ್ರೊಸೆಸರ್ ಗೇಮಿಂಗ್ ಹಾಗೂ ತ್ವರಿತ ಆಪರೇಟಿಂಗ್‌ಗೆ ಬೆಂಬಲಿತವಾಗಿ ಕೆಲಸ ಮಾಡಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್‌,2.2 ಅಪರ್ಚರ್ ಮತ್ತು 118 ಡಿಗ್ರಿ ಫೀಲ್ಡ್-ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಬೆಳಕಿನ ವೇಳೆ ಮುಖ್ಯ ಕ್ಯಾಮೆರಾದಲ್ಲಿ ಫೋಟೊಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ. ಹಲವು ಫೋಟೊ ಮೋಡ್‌ಗಳ ಆಯ್ಕೆ ಇದ್ದು, ಉಪಯುಕ್ತ ಅನಿಸಲಿವೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಗೇಮಿಂಗ್, ವಿಡಿಯೋ ಕರೆ, ವಿಡಿಯೋ ವೀಕ್ಷಣೆ ಮಾಡಿದಾಗಲು ಬ್ಯಾಟರಿ ಬ್ಯಾಕ್‌ಅಪ್‌ ಉತ್ತಮ ಎನಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ ಮತ್ತು ಎಐ ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 6GB + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 14,999 ರೂ. ಆಗಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್ ದರದವು 15,999ರೂ.ಗಳಾಗಿದೆ. ಈ ಫೋನ್‌ ನೀಲಿ, ಡಾರ್ಕ್ ಗ್ರೇ ಮತ್ತು ವೈಟ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
The Redmi Note 10S is available in two variants starting with the base variant that has 6GB of RAM and 64GB of storage priced at Rs. 14,999.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X