ರೆಡ್ಮಿ ನೋಟ್ 10S ಮತ್ತು ರೆಡ್ಮಿ ನೋಟ್ 10: ಖರೀದಿಗೆ ಬೆಸ್ಟ್‌ ಯಾವುದು?

|

ಜನಪ್ರಿಯ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಶಿಯೋಮಿ ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 10S ಫೋನ್ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ರಚನೆ ಪಡೆದಿರುವುದು ಹಾಗೂ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಹೈಲೈಟ್‌ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ಈ ಹಿಂದೆ ಕಂಪನಿಯು ಲಾಂಚ್ ಮಾಡಿರುವ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಸಹ ಬಜೆಟ್ ದರದಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಈ ಎರಡು ಫೋನ್‌ಗಳು ಸಾಮ್ಯತೆ ಎಂದು ಕಂಡು ಬಂದರು ಕೆಲವು ಭಿನ್ನತೆಗಳನ್ನು ಹೊಂದಿವೆ. ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ ಆಯ್ಕೆ?

ಫೋನ್‌ಗಳ

ಹೌದು, ಶಿಯೋಮಿ ಸಂಸ್ಥೆಯ ನೂತನ ರೆಡ್ಮಿ ನೋಟ್ 10S ಮತ್ತು ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಪ್ರೈಸ್‌ ಟ್ಯಾಗ್‌ ಹೊಂದಿರುವುದು ಮೊದಲ ಆಕರ್ಷಕ ಅನಿಸಿದೆ. ಹಾಗೆಯೇ ಈ ಎರಡು ಫೋನ್‌ಗಳು ಕ್ವಾಡ್‌ ಕ್ಯಾಮೆರಾ ರಚನೆ ಪಡೆದಿರುವುದು ಜೊತೆಗೆ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆಯನ್ನು ಹೊಂದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಗುರುತಿಸಿಕೊಂಡಿದೆ. ಈ ಎರಡು ಫೋನ್‌ಗಳ ಬಹುತೇಕ ಫೀಚರ್ಸ್‌ಗಳಲ್ಲಿ ಸಾಮ್ಯತೆ ಕಂಡು ಬಂದರು, ಇವೆರಡರ ಮಧ್ಯೆ ಭಿನ್ನತೆಗಳು ಇವೆ. ಹಾಗಾದರೇ ಈ ಎರಡು ಫೋನ್‌ಗಳಲ್ಲಿ ಖರೀದಿಗೆ ಯಾವುದು ಉತ್ತಮ?...ಇವೆರಡು ಫೋನ್‌ಗಳ ಕಂಪ್ಲೀಟ್‌ ಫೀಚರ್ಸ್‌ ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸದ ಭಿನ್ನತೆಗಳೆನು

ಡಿಸ್‌ಪ್ಲೇ ವಿನ್ಯಾಸದ ಭಿನ್ನತೆಗಳೆನು

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಹಾಗೆಯೇ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಸಾಮ್ಯತೆ ಇದ್ದರೂ ರೆಡ್ಮಿ ನೋಟ್ 10 ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ.

ಪ್ರೊಸೆಸರ್ ಕಾರ್ಯ ಹೇಗೆ

ಪ್ರೊಸೆಸರ್ ಕಾರ್ಯ ಹೇಗೆ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಅದೇ ರೀತಿ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ರೆಡ್‌ಮಿ ನೋಟ್ 10s ಮೀಡಿಯಾ ಟೆಕ್ ಪ್ರೊಸೆಸರ್‌ ಹೊಂದಿದ್ದು, ರೆಡ್‌ಮಿ ನೋಟ್ 10 ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಎರಡು ಪ್ರೊಸೆಸರ್ ಉತ್ತಮ ಎನ್ನಬಹುದಾಗಿದೆ.

ಕ್ವಾಡ್ ಕ್ಯಾಮೆರಾ ಸ್ಪೆಷಲ್

ಕ್ವಾಡ್ ಕ್ಯಾಮೆರಾ ಸ್ಪೆಷಲ್

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್‌,2.2 ಅಪರ್ಚರ್ ಮತ್ತು 118 ಡಿಗ್ರಿ ಫೀಲ್ಡ್-ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಅದೇ ರೀತಿ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಇನ್ನು ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಬ್ಯಾಟರಿ ಹಾಗೂ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಎರಡು ಫೋನ್‌ಗಳು ಹೆಚ್ಚಿನ ಸಾಮತ್ಯೆಯನ್ನು ಪಡೆದಿವೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 6GB + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 14,999 ರೂ. ಆಗಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್ ದರದವು 15,999ರೂ.ಗಳಾಗಿದೆ. ಈ ಫೋನ್‌ ನೀಲಿ, ಡಾರ್ಕ್ ಗ್ರೇ ಮತ್ತು ವೈಟ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್‌ ಇದೇ ಮೇ 18 ರಂದು ಸೇಲ್ ಆರಂಭಿಸಲಿದೆ. ಇನ್ನು ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ 11,999 ರೂ ಬೆಲೆಯನ್ನು ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 13,999 ರೂ.ಬೆಲೆಯನ್ನು ಹೊಂದಿದೆ.

Best Mobiles in India

English summary
Redmi Note 10S Vs Redmi Note 10 Comparison: Which One Is Better To Buy.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X