Home
ಮೊಬೈಲ್

12000 ಅಗ್ಗ! 200MP ಕ್ಯಾಮೆರಾ.. 5100mAh ಬ್ಯಾಟರಿ.. ಕಡಿಮೆ ಬೆಲೆಗೆ Redmi ಫೋನ್ ಸೇಲ್

ರೆಡ್ಮಿ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ. ರೆಡ್ಮಿ ನೋಟ್‌ 13 ಪ್ರೊ 5G (Redmi Note 13 Pro 5G) ಫೋನಿನ ಬೆಲೆ ಮತ್ತೆ ಇಳಿಕೆಯಾಗಿದೆ. ನೀವು ಹೊಸ 5G ಮೊಬೈಲ್ ಕೊಳ್ಳಲು ಮನಸ್ಸು ಮಾಡಿದ್ದರೆ, ರೆಡ್ಮಿ ನೋಟ್‌ 13 ಪ್ರೊ 5G ಉತ್ತಮ ಆಯ್ಕೆಯಾಗಿದೆ. ಈ ಫೋನಿನಲ್ಲಿ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. 5100mAh ಸಾಮರ್ಥ್ಯದ ಬ್ಯಾಟರಿ ಮತ್ತು 67W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಉತ್ತಮ ಗುಣಮಟ್ಟದ ಫೀಚರ್ಸ್‌ಗಳನ್ನು ಒಳಗೊಂಡಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ತಿಳಿಯೋಣ.

ಕಂಪನಿಯು ರೆಡ್ಮಿ ನೋಟ್‌ 13 ಪ್ರೊ 5G ಫೋನನ್ನು ಕಳೆದ ವರ್ಷ (28,999 ರೂ.ಗೆ) ಬಿಡುಗಡೆ ಮಾಡಿತ್ತು. ಇದು ಮೂರು ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ನೀವು 8GB + 128GB ಸ್ಟೋರೇಜ್, 12GB + 256GB ಸ್ಟೋರೇಜ್ ಮತ್ತು 16GB + 512GB ಸ್ಟೋರೇಜ್‌ ಆಯ್ಕೆಯಲ್ಲಿ ಖರೀದಿಸಬಹುದು. ಈ ಮೊಬೈಲ್ ಆಲಿವ್ ಗ್ರೀನ್, ಮಿಡ್‌ನೈಟ್ ಬ್ಲಾಕ್, ಅರೋರಾ ಪರ್ಪಲ್ ಮತ್ತು ಓಷನ್ ಟೀಲ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

Redmi: 5G ಫೋನ್ ಬೆಲೆ ಇಳಿಕೆ; 200MP ಕ್ಯಾಮೆರಾ, 5100mAh ಬ್ಯಾಟರಿ.. ಬೆಲೆ ನೋಡಿ

ಪ್ರಸ್ತುತ, ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ರೆಡ್ಮಿ ನೋಟ್‌ 13 ಪ್ರೊ 5G ಫೋನಿನ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು 18,499 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿ, ಈ ಫೋನ್ ಖರೀದಿಸಿದರೆ 1,500 ರೂ. ರಿಯಾಯಿತಿ ಸಿಗುತ್ತೆ. ಡಿಸ್ಕೌಂಟ್‌ನೊಂದಿಗೆ ನೀವು, ಈ ಫೋನನ್ನು 16,999 ರೂ. ಬೆಲೆಯಲ್ಲಿ ಕೊಳ್ಳಬಹುದು. ಬನ್ನಿ, ರೆಡ್ಮಿ ನೋಟ್‌ 13 ಪ್ರೊ 5G ಫೋನಿನ ವೈಶಿಷ್ಟ್ಯಗಳನ್ನು ತಿಳಿಯೋಣ.

ರೆಡ್ಮಿ ನೋಟ್ 13 ಪ್ರೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರೆಡ್ಮಿ ನೋಟ್ 13 ಪ್ರೊ 5G ಮೊಬೈಲ್ 6.67 ಇಂಚಿನ ಪೂರ್ಣ ಹೆಚ್‌ಡಿ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120 Hz ರಿಫ್ರೆಶ್ ದರ, 1220 x 2712 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ರೆಡ್ಮಿ ನೋಟ್ 13 ಪ್ರೊ 5G ಫೋನಿನಲ್ಲಿ ಸ್ನಾಪ್‌ಡ್ರಾಗನ್ 7s ಜೆನ್ 2 ಪ್ರೊಸೆಸರ್‌ ಅಳವಡಿಸಿದೆ. ಈ ಮೊಬೈಲ್ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 8GB RAM ಮತ್ತು 128GB ಸ್ಟೋರೇಜ್ ಲಭ್ಯವಿದೆ. ಮೆಮೊರಿ ಕಾರ್ಡ್ ಅನ್ನು ಬಳಸಲು ಮೈಕ್ರೋ SD ಕಾರ್ಡ್ ಸ್ಲಾಟ್ ಸಹ ಹೊಂದಿದೆ.

ಕ್ಯಾಮೆರಾ ಸೆಟಪ್

ರೆಡ್ಮಿ ನೋಟ್‌ 13 5G ಮೊಬೈಲ್ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದು 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. 8 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ರೆಡ್ಮಿ ನೋಟ್‌ 13 5G ಫೋನಿನಲ್ಲಿ 5100mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ ನೋಟ್‌ 13 5G ಮೊಬೈಲ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP54 ರೇಟಿಂಗ್‌ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಬೆಂಬಲದೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Redmi Note 13 Pro 5G received huge price drop: know new price, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+