ರೆಡ್ಮಿ ಪ್ರಿಯರಿಗೆ ಸರ್ಪ್ರೈಸ್! ಕಮ್ಮಿ ಬೆಲೆಗೆ ಹೊಸ ಮೊಬೈಲ್.. 1000 ಡಿಸ್ಕೌಂಟ್.. SONY ಕ್ಯಾಮೆರಾ; ಯಾವ ಫೋನ್?
ರೆಡ್ಮಿ ತನ್ನ ಅಭಿಮಾನಿಗಳಿಗೆ ಇಲ್ಲಿದೆ ಸರ್ಪ್ರೈಸ್ ಸುದ್ದಿ. ಜನ ಮೆಚ್ಚಿದ ಸ್ಮಾರ್ಟ್‌ಫೋನ್ ಕಲರ್ ರಂಗು ರಂಗಿನ ಬಣ್ಣದಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಭಾರತದಲ್ಲಿ ರೆಡ್ಮಿ ನೋಟ್ 14 5G (Redmi Note 14 5G Ivy Green) ಹೊಸ ಐವಿ ಗ್ರೀನ್ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಈ ಫೋನನ್ನು ಕಳೆದ ಡಿಸೆಂಬರ್‌ನಲ್ಲಿ ಟೈಟಾನ್ ಬ್ಲಾಕ್, ಫ್ಯಾಂಟಮ್ ಪರ್ಪಲ್ ಮತ್ತು ಮಿಸ್ಟಿಕ್ ಪರ್ಪಲ್ ಬಣ್ಣಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದು ಕಂಪನಿಯ ವೆಬ್‌ಸೈಟ್ ಮೂಲಕ ಖರೀದಿಸಲು ಲಭ್ಯವಿದೆ. ಕಂಪನಿಯು 1,000 ರಿಯಾಯಿತಿ ಸಹ ನೀಡುತ್ತಿದೆ.
ರೆಡ್ಮಿ ನೋಟ್ 14 5G ಮೊಬೈಲ್ ಹೊಸ ಬಣ್ಣದಲ್ಲಿ ಬಂದಿದೆ. ಆದರೆ, ಇದರ ವೈಶಿಷ್ಟ್ಯಗಳಲ್ಲಿ ಯಾವುದೇ ಬದಲಾವಣೆ ಅಥವಾ ಅಪ್ಡೇಟ್ ಕಂಡುಬಂದಿಲ್ಲ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್, 5110mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಒಳಗೊಂಡಿದೆ. ಈ ಫೋನಿನ ಬೆಲೆ, ಲಭ್ಯ ಮತ್ತು ಇನ್ನಿತರ ವಿವರಗಳನ್ನು ತಿಳಿಯಲು ಮುಂದೆ ಓದಿ.

ರೆಡ್ಮಿ ನೋಟ್ 14 5G ಬೆಲೆ ಮತ್ತು ಲಭ್ಯ
ರೆಡ್ಮಿ ನೋಟ್ 14 5G ಫೋನಿನ 6GB + 128GB ಸ್ಟೋರೇಜ್ ರೂಪಾಂತರವು 18,999 ರೂ. ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 19,999 ರೂ. ಮತ್ತು 8GB RAM + 256GB ಸ್ಟೋರೇಜ್ ಆಯ್ಕೆಯು 21,999 ರೂ.ಗೆ ಮಾರಾಟವಾಗುತ್ತಿದೆ. ಕಂಪನಿಯು ಐಸಿಐಸಿಐ, ಎಚ್‌ಡಿಎಫ್‌ಸಿ, ಎಸ್‌ಬಿಐ, ಮತ್ತು ಕ್ರೆಡಿಟ್ / ಡೆಬಿಟ್ ಕಾರ್ಡ್‌ಗಳ ಪಾವತಿಯ ಮೇಲೆ 1,000 ರೂ. ತ್ವರಿತ ರಿಯಾಯಿತಿ ನೀಡುತ್ತಿದೆ. ನೀವು ರೆಡ್ಮಿ ನೋಟ್ 14 5G ಫೋನಿನ ಐವಿ ಗ್ರೀನ್ ಬಣ್ಣದ ರೂಪಾಂತರವನ್ನು ಶಿಯೋಮಿ ವೆಬ್‌ಸೈಟ್ ಮೂಲಕ ಖರೀದಿಸಬಹುದು.
ರೆಡ್ಮಿ ನೋಟ್ 14 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರೆಡ್ಮಿ ನೋಟ್ 14 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, HDR10+, SGS ಐ ಪ್ರೊಟೆಕ್ಷನ್, 2160Hz PW ಡಿಮ್ಮಿಂಗ್ ಮತ್ತು TUV ರೈನ್‌ಲ್ಯಾಂಡ್ ಪ್ರಮಾಣೀಕರಣ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ರೆಡ್ಮಿ ನೋಟ್ 14 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದು ಎರಡು ಓಎಸ್ ನವೀಕರಣಗಳು ಮತ್ತು ನಾಲ್ಕು ವರ್ಷಗಳ ಭದ್ರತಾ ಪ್ಯಾಚ್‌ಗಳನ್ನು ಪಡೆಯುತ್ತದೆ. ಗ್ರಾಫಿಕ್ಸ್‌ಗಾಗಿ ಈ ಸ್ಮಾರ್ಟ್‌ಫೋನ್, IMG BXM 8 256 ಜಿಪಿಯು ಸಹ ಹೊಂದಿದೆ. ಇದು 8GB RAM + 256GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್
ರೆಡ್ಮಿ ನೋಟ್ 14 5G ಫೋನ್ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ (ಅಲ್ಟ್ರಾ ವೈಡ್ ಆಂಗಲ್ ಲೆನ್ಸ್) ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ (ಮ್ಯಾಕ್ರೋ ಲೆನ್ಸ್) ಕ್ಯಾಮೆರಾ ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೊ ಕರೆಗಾಗಿ, ಈ ಸ್ಮಾರ್ಟ್‌ಫೋನ್ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರೆಡ್ಮಿ ನೋಟ್ 14 5G ಸ್ಮಾರ್ಟ್‌ಫೋನ್ 5110mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ರೆಡ್ಮಿ ನೋಟ್ 14 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್, ಸ್ಟೀರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮೋಸ್ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








