Home
ಮೊಬೈಲ್

ಹೊಸ Redmi Note 14 5G ಸೇಲ್ ಶುರು; ಜಬರ್ದಸ್ತ್ ಆಫರ್.. ಬೆಲೆಯೂ ಕಡಿಮೆ ಬೆಲೆ!

ರೆಡ್ಮಿ ಮೊಬೈಲ್‌ಗಳಿಗೆ ಭಾರತದಲ್ಲಿ ಹೆಚ್ಚು ಬೇಡಿಕೆಯಿದೆ. ಕಂಪನಿಯು ಇತ್ತೀಚೆಗೆ ಹೊಸ ರೆಡ್ಮಿ ನೋಟ್ 14 5G (Redmi Note 14 5G) ಫೋನನ್ನು ಮಾರುಕ್ಟೆಯಲ್ಲಿ ಬಿಡುಗಡೆಯಾಗಿದೆ. ಇದು ಕಂಪನಿಯ ಹೊಸ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ ಆಗಿದೆ. ಸ್ಟೈಲಿಶ್ ಲುಕ್ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ. ಅಂದಹಾಗೆ, ಈ ಮೊಬೈಲ್ ಇಂದು (ಡಿಸೆಂಬರ್ 13) ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ ನೋಟ್ 14 5G ಫೋನ್‌ ಮೂರು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ನೀವು, 19 ಸಾವಿರ ರೂ. ಬಜೆಟ್‌ನಲ್ಲಿ ಹೊಸ ಫೋನ್‌ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 256GB ಸ್ಟೋರೇಜ್‌, 5110mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ Redmi Note 14 5G ಸೇಲ್ ಶುರು; ಜಬರ್ದಸ್ತ್ ಆಫರ್‌.. ಕಡಿಮೆ ಬೆಲೆ!

ರೆಡ್ಮಿ ನೋಟ್‌ 14 5G ಬೆಲೆ ಮತ್ತು ಲಭ್ಯತೆ

6GB RAM + 128GB ಸ್ಟೋರೇಜ್ ಬೆಲೆ = 18,999 ರೂ.
8GB RAM + 128GB ಸ್ಟೋರೇಜ್ ಬೆಲೆ = 19,999 ರೂ.
8GB RAM + 256GB ಸ್ಟೋರೇಜ್ ಬೆಲೆ = 21,999 ರೂ.

ರೆಡ್ಮಿ ನೋಟ್‌ 14 5G ಫೋನನ್ನು ಮೂರು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇದನ್ನು 18,999 ರೂ. ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಅಮೆಜಾನ್‌ ಮೂಲಕ ಇಂದು (ಡಿಸೆಂಬರ್ 13) ಮಧ್ಯಾಹ್ನ 12 ಗಂಟೆಗೆ ಮಾರಾಟ ಪ್ರಾರಂಭವಾಗಲಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಕೆಲವು ಆಫರ್‌ ನೀಡುತ್ತಿದೆ. ನೀವು, ಐಸಿಐಸಿಐ ಮತ್ತು ಹೆಚ್‌ಡಿಬಿ ಬ್ಯಾಂಕ್ ಕಾರ್ಡ್‌ಗಳ ಮೇಲೆ 1,000 ರೂ. ಡಿಸ್ಕೌಂಟ್ ಪಡೆಯಬಹುದು.

ರೆಡ್ಮಿ ನೋಟ್‌ 14 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರೆಡ್ಮಿ ನೋಟ್‌ 14 5G ಮೊಬೈಲ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 2100 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಪಡೆದಿದೆ. ಹಾಗೆಯೇ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.

ಪವರ್‌ ಫುಲ್ ಪ್ರೊಸೆಸರ್

ರೆಡ್ಮಿ ನೋಟ್‌ 14 5G ಫೋನನ್ನು ಮೀಡಿಯಾಟೆಕ್ ಡೈಮೆನ್ಸಿಟಿ 7025 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ರೆಡ್ಮಿ ಫೋನ್ ಆಂಡ್ರಾಯ್ಡ್‌ 14 ಹೈಪರ್ ಓಎಸ್‌ ಜೊತೆಗೆ ಕೆಲಸ ಮಾಡುತ್ತದೆ.

ಡ್ಯುಯಲ್ ಕ್ಯಾಮೆರಾ ಸೆಟಪ್

ರೆಡ್ಮಿ ನೋಟ್‌ 14 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರೆಡ್ಮಿ ನೋಟ್‌ 14 5G ಮೊಬೈಲ್ 5110mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್‌ ಫ್ಯಾಂಟಮ್ ಪರ್ಪಲ್, ಟೈಟಾನ್ ಬ್ಲಾಕ್, ಮಿಸ್ಟಿಕ್ ವೈಟ್ ಬಣ್ಣಗಳಲ್ಲಿ ಮಾರಾಟವಾಗಲಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ.

Best Mobiles in India

English summary
Redmi Note 14 Goes on First Sale in India Today: Check Price, Offers, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+