Redmi: 200MP ಕ್ಯಾಮೆರಾ.. 512GB ಸ್ಟೋರೇಜ್.. ಕಡಿಮೆ ಬೆಲೆಗೆ ಹೊಸ ಫೋನ್ ಲಾಂಚ್!
ರೆಡ್ಮಿ ಸದ್ದಿಲ್ಲದೆ ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಅವುಗಳೇ, ರೆಡ್ಮಿ ನೋಟ್ 14 4G (Redmi Note 14 4G) ಮತ್ತು ರೆಡ್ಮಿ ನೋಟ್ 14 ಪ್ರೊ 4G (Redmi Note 14 Pro 4G) ಸ್ಮಾರ್ಟ್‌ಫೋನ್‌ಗಳು. ಹೌದು, ಕಂಪನಿಯು Redmi Note 14 ಸರಣಿಯಲ್ಲಿ ಈ ಮೊಬೈಲ್‌ಗಳನ್ನು ಪರಿಚಯಿಸಿದೆ. ಈ ಪೈಕಿ ರೆಡ್ಮಿ ನೋಟ್ 14 ಪ್ರೊ 4G ಫೋನ್ ಗ್ರಾಹಕರ ಗಮನ ಸೆಳೆದಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರೆಡ್ಮಿ ನೋಟ್ 14 ಪ್ರೊ 4G ಮೊಬೈಲ್ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಹೆಲಿಯೊ G100 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 12GB RAM + 512GB ಸ್ಟೋರೇಜ್, 5500mAh ಬ್ಯಾಟರಿ ಮತ್ತು 45W ಸ್ಪೀಡ್ ಚಾರ್ಜಿಂಗ್ ಒಳಗೊಂಡಿದೆ. ಇದು ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬರುತ್ತದೆ. ಇದರ ಬೆಲೆ ತಿಳಿಯಲು ಮುಂದೆ ಓದಿ.

ರೆಡ್ಮಿ ನೋಟ್ 14 ಪ್ರೊ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವಿರ
ರೆಡ್ಮಿ ನೋಟ್ 14 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2400 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ರೆಡ್ಮಿ ನೋಟ್ 14 ಪ್ರೊ ಮೊಬೈಲ್ ಮೀಡಿಯಾಟೆಕ್‌ನ ಹೆಲಿಯೊ G100 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G57 MC2 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್ ಜೊತೆಗೆ ಕೆಲಸ ಮಾಡುತ್ತದೆ.
ಸ್ಟೋರೇಜ್ ಆಯ್ಕೆ
ರೆಡ್ಮಿ ನೋಟ್ 14 ಪ್ರೊ ಫೋನ್ 8GB RAM ಮತ್ತು 12GB RAM ಹೊಂದಿದೆ. ಇದು 128GB, 256GB ಮತ್ತು 512GB ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಕ್ಯಾಮೆರಾ ಸೆಟಪ್
ರೆಡ್ಮಿ ನೋಟ್ 14 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ತಂಜೊತೆಗೆ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ರೆಡ್ಮಿ ನೋಟ್ 14 ಪ್ರೊ ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ರೆಡ್ಮಿ ನೋಟ್ 14 ಪ್ರೊ 4G ಫೋನ್ ಇನ್‌ಫ್ರಾರೆಡ್ ಸಂವೇದಕವನ್ನು ಹೊಂದಿದೆ. ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಬ್ಲೂಟೂತ್ 5.3, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ರೆಡ್ಮಿ ನೋಟ್ 14 ಪ್ರೊ 4G ಬೆಲೆ
ರೆಡ್ಮಿ ನೋಟ್ 14 ಪ್ರೊ ಮೊಬೈಲ್ ಜಾಗತಿಕ ಮಾರುಕಟ್ಟೆಯಲ್ಲಿ 8GB RAM + 128GB, 12GB RAM + 256GB ಮತ್ತು 12GB RAM + 512GB ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಇದರ ಆರಂಭಿಕ ಬೆಲೆ 25,795 ರೂ. ಆಗಿದೆ. ನೀವು ಓಷನ್ ಬ್ಲೂ, ಮಿಡ್‌ನೈಟ್ ಬ್ಲಾಕ್ ಮತ್ತು ಅರೋರಾ ಪರ್ಪಲ್ ಬಣ್ಣಗಳಲ್ಲಿ ಖರೀದಿಸಬಹುದು.


Click it and Unblock the Notifications








