Redmi Note 14 Pro+ ಬೆಲೆ ಸೋರಿಕೆ; 50MP ಸೆಲ್ಫಿ ಕ್ಯಾಮೆರಾ.. 6000mAh ಬ್ಯಾಟರಿ ಖಚಿತ.. ಲಾಂಚ್ ಯಾವಾಗ?
ರೆಡ್ಮಿ ಮೊಬೈಲ್‌ಗಳಿಗೆ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಅದರಲ್ಲೂ ರೆಡ್ಮಿ ನೋಟ್ (Redmi Note) ಸರಣಿಯ ಫೋನ್‌ಗಳು ದಾಖಲೆ ಮಟ್ಟದಲ್ಲಿ ಮಾರಾಟವಾಗುತ್ತಿವೆ. ಕಂಪನಿಯು, ಇದೀಗ ಹೊಸ ರೆಡ್ಮಿ ನೋಟ್ 14 (Redmi Note 14) ಸರಣಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದರ ಅಡಿಯಲ್ಲಿ Redmi Note 14, Redmi Note 14 Pro ಮತ್ತು Redmi Note 14 Pro + 5G ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಡಲಿವೆ. ಬನ್ನಿ, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರೆಡ್ಮಿ ನೋಟ್ 14 ಸರಣಿಯು ಡಿಸೆಂಬರ್ 9 ರಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಪೈಕಿ, ರೆಡ್ಮಿ ನೋಟ್ 14 ಪ್ರೊ ಪ್ಲಸ್ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳು ಸೋರಿಕೆಯಾಗಿವೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಜೊತೆಗೆ 6.67 ಇಂಚಿನ ಡಿಸ್ಪ್ಲೇ, 6000mAh ಬ್ಯಾಟರಿ ಮತ್ತು 90W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರಲಿದೆ.

ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಫೋನಿನ ಬೆಲೆ
8GB RAM + 128GB ಸ್ಟೋರೇಜ್ ಬೆಲೆ = 31,999 ರೂ.
8GB RAM + 256GB ಸ್ಟೋರೇಜ್ ಬೆಲೆ = 33,999 ರೂ.
12GB RAM + 512GB ಸ್ಟೋರೇಜ್ ಬೆಲೆ = 36,999 ರೂ.
ಕಂಪನಿಯು ರೆಡ್ಮಿ ನೋಟ್ 14 ಪ್ರೊ ಪ್ಲಸ್ ಫೋನನ್ನು31,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಿದೆ. ಟಾಪ್ ವೇರಿಯಂಟ್ ಬೆಲೆ 36,999 ರೂ. ಇರಲಿದೆ. ಈ ಫೋನಿನ MRP ಸಹ ಸೋರಿಕೆಯಾಗಿದೆ. ಫೋನಿನ 8GB + 128GB ಸ್ಟೋರೇಜ್ ಬೆಲೆ 34,999 ರೂ., 8GB + 256GB ಬೆಲೆ 36,999 ರೂ. ಮತ್ತು 12GB + 512GB ಬೆಲೆ 39,999 ರೂ. ಎಂದು ಹೇಳಲಾಗಿದೆ.
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಮೊಬೈಲ್ 6.67 ಇಂಚಿನ 1.5K ಡಿಸ್ಪ್ಲೇ ಹೊಂದಿರಲಿದೆ. ಇದು 2712 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿರಲಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಡಾಲ್ಬಿ ವಿಷನ್ ತಂತ್ರಜ್ಞಾನವನ್ನು ಹೊಂದಿದೆ. ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S Gen 3 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗುತ್ತದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಓಎಸ್ ಜೊತೆಗೆ ಕೆಲಸ ಮಾಡುತ್ತದೆ.
ಕ್ಯಾಮೆರಾ ಸೆಟಪ್
ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರಲಿದೆ. ಜೊತೆಗೆ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ರೆಡ್ಮಿ ನೋಟ್ 14 ಪ್ರೊ ಪ್ಲಸ್ 5G ಫೋನನ್ನು 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಿದೆ.ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ.


Click it and Unblock the Notifications