Home
ಮೊಬೈಲ್

Redmi: ಹೊಸ ಜಬರ್ದಸ್ತ್ ಫೋನ್ ಲಾಂಚ್; 50MP ಕ್ಯಾಮೆರಾ.. 5500mAh ಬ್ಯಾಟರಿ.. ಕಡಿಮೆ ಬೆಲೆ!

ಮೊಬೈಲ್‌ ಪ್ರಿಯರಿಗೆ ಸಂತೋಷ ಪಡಲು ಇಷ್ಟು ಸಾಕು! ಒಂದೇ ದಿನ ಮೂರು ಹೊಸ ಫೋನ್ ಬಿಡುಗಡೆ. ಹೌದು, ಶಿಯೋಮಿ ತನ್ನ ರೆಡ್ಮಿ ನೋಟ್‌ 14 5G (Redmi Note 14 series) ಸರಣಿಯನ್ನು ಭಾರತದಲ್ಲಿ ರಿಲೀಸ್ ಮಾಡಿದೆ. ಈ ಸರಣಿಯಲ್ಲಿ ರೆಡ್ಮಿ ನೋಟ್‌ 14, ರೆಡ್ಮಿ ನೋಟ್‌ 14 ಪ್ರೊ ಹಾಗೂ ರೆಡ್ಮಿ ನೋಟ್‌ 14 ಪ್ರೊ+ ಮೊಬೈಲ್‌ಗಳು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಪೈಕಿ ರೆಡ್ಮಿ ನೋಟ್‌ 14 ಪ್ರೊ (Redmi Note 14 Pro) ಗ್ರಾಹಕರ ಮನಸ್ಸು ಗೆದ್ದಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ ನೋಟ್‌ 14 ಪ್ರೊ ಮೊಬೈಲ್ ಎರಡು ಸ್ಟೋರೇಜ್‌ ರೂಪಾಂತರಗಳಲ್ಲಿ (Redmi Note 14 Pro launched) ಬಿಡುಗಡೆಯಾಗಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 256GB ಸ್ಟೋರೇಜ್, 5500mAh ಬ್ಯಾಟರಿ ಮತ್ತು 45W ಸ್ಪೀಡ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಹೊಸ Redmi Note 14 Pro ಲಾಂಚ್; ದೊಡ್ಡ ಬ್ಯಾಟರಿ.. ಬಿಗ್ ಸ್ಟೋರೇಜ್.. ಬೆಲೆ ನೋಡಿ

ರೆಡ್ಮಿ ನೋಟ್‌ 14 ಪ್ರೊ ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್‌ 14 ಪ್ರೊ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 24,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಹಾಗೆಯೇ 8GB + 256GB ಸ್ಟೋರೇಜ್‌ ವೇರಿಯಂಟ್ ಬೆಲೆ 26,999 ರೂ.ಗೆ ಲಭ್ಯವಿದೆ. ಈ ಫೋನ್ ಡಿಸೆಂಬರ್ 13 ರಿಂದ ತನ್ನ ಮೊದಲ ಮಾರಾಟ ಶುರು ಮಾಡಲಿದೆ. ನೀವು, ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಈ ಫೋನನ್ನು ಖರೀದಿಸಬಹುದು.

ರೆಡ್ಮಿ ನೋಟ್ 14 ಪ್ರೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರೆಡ್ಮಿ ನೋಟ್ 14 ಪ್ರೊ 5G ಮೊಬೈಲ್ 6.67 ಇಂಚಿನ 1.5K ಡಿಸ್ಪ್ಲೇ ಹೊಂದಿದೆ. ಇದು 3D ಕರ್ವ್‌ ಅಮೋಲೆಡ್‌ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2712 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಇದು 120Hz ರಿಫ್ರೆಶ್ ದರ ಮತ್ತು 3000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ರೆಡ್ಮಿ ನೋಟ್ 14 ಪ್ರೊ 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ಹೈಪರ್ ಓಎಸ್‌ 1.0ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 8GB RAM ಇದೆ. ಜೊತೆಗೆ 128 ಮತ್ತು 256GB ಸ್ಟೋರೇಜ್ ಲಭ್ಯವಿದೆ.

ಕ್ಯಾಮೆರಾ ಸೆಟಪ್

ರೆಡ್ಮಿ ನೋಟ್ 14 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ ಈ ಮೊಬೈಲ್, 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರೆಡ್ಮಿ ನೋಟ್ 14 ಪ್ರೊ 5G ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ಟರ್ಬೋ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ ನೋಟ್ 14 ಪ್ರೊ 5G ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್‌ ಪಡೆದಿದೆ. ಈ ಫೋನ್ ಡ್ಯುಯಲ್ ಸಿಮ್‌ ಮತ್ತು ನ್ಯಾನೋ ಸಿಮ್ ಎರಡೂ ಸ್ಲಾಟ್‌ಗಳಲ್ಲಿ ಬಳಸಬಹುದು. ಇದು ವೈ-ಫೈ 6, ಬ್ಲೂಟೂತ್ 5.4, ಡ್ಯುಯಲ್ ಆಡಿಯೊ, ಡಾಲ್ಬಿ ಅಟ್ಮಾಸ್‌, ಎನ್‌ಎಫ್‌ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Redmi Note 14 Pro with MediaTek Dimensity 7300 processor launched in India: know price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+