'ರೆಡ್ಮಿ ನೋಟ್ 7 ಪ್ರೋ' ಸ್ಮಾರ್ಟ್‌ಫೋನ್ ಫ್ಲ್ಯಾಶ್ ಸೇಲ್‌ಗೆ ಕ್ಷಣಗಣನೆ.!
ಗ್ರಾಹಕರನ್ನು ಸತಾಯಿಸಿ ಬಿಡುಗಡೆಯಾಗಿರುವ ಶಿಯೋಮಿ ರೆಡ್ಮಿ ನೋಟ್ 7 ಪ್ರೋ ಸ್ಮಾರ್ಟ್‌ಫೋನ್ ಈಗಾಗಲೇ ತನ್ನ ಮೊದಲ ಫ್ಲ್ಯಾಶ್ ಸೇಲ್ ನಲ್ಲಿಯೇ ಭರ್ಜರಿ ಮಾರಾಟ ಕಂಡಿದೆ. ಇದೀಗ ಈ ಸ್ಮಾರ್ಟ್‌ಫೋನಿನ ಎರಡನೇ ಫ್ಲ್ಯಾಶ್ ಸೇಲ್ ಇಂದು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದ್ದು, ಪ್ರಮುಖ ಇ ಕಾಮರ್ಸ್ ಜಾಲತಾಣ ಮತ್ತು ಕಂಪನಿಯ ವೆಬ್‌ತಾಣದಲ್ಲಿ ಲಭ್ಯವಾಗಲಿದೆ.

ಅಗ್ಗದ ಬೆಲೆಯಲ್ಲಿ ಹೈ ಎಂಡ್ ಫೀಚರ್ಸ್‌ಗಳನ್ನು ಹೊಂದಿರುವುದು ಈ ಸ್ಮಾರ್ಟ್‌ಫೋನಿನ ಪ್ಲಸ್ ಪಾಯಿಂಟ್. ಹಿಂಬದಿಯಲ್ಲಿ 48 ಮೆಗಾಪಿಕ್ಸಲ್ ಕ್ಯಾಮೆರಾವನ್ನು ಹೊಂದಿದ್ದು, ಮುಂಬದಿಯಲ್ಲಿ ಸೆಲ್ಫಿಗಾಗಿ 13 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ ಆಕ್ಟಕೋರ್ ಸ್ನಾಪ್‌ಡ್ರಾಗನ್ 675 SoC ಪ್ರೊಸೆಸರ್ ಸ್ಮಾರ್ಟ್‌ಫೋನ್ ಕಾರ್ಯವೈಖರಿಯ ವೇಗವನ್ನು ಹೆಚ್ಚಿಸಲು ನೆರವಾಗಲಿದೆ.

ಈ ಸ್ಮಾರ್ಟ್‌ಫೋನ್‌ನಲ್ಲಿ 4000mAh ಸಾಮರ್ಥ್ಯದ ಪವರ್‌ಫುಲ್ ಬ್ಯಾಟರಿಯನ್ನು ನೀಡಲಾಗಿದ್ದು, ಅತ್ಯುತ್ತಮ ಬಾಳಿಕೆಯ ಬರಲಿದೆ. ಇದರೊಟ್ಟಿಗೆ ಕ್ವಾಲ್ಕಾಮ್ ಕ್ವಿಕ್ ಚಾರ್ಜ್ 4.0 ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಹಾಗಾದರೇ ಶಿಯೋಮಿ ರೆಡ್ಮಿ ನೋಟ್ 7 ಪ್ರೋ ಸ್ಮಾರ್ಟ್‌ಫೋನ್ ವಿಶೇಷ ಫೀಚರ್ಸ್‌ಗಳನ್ನು ತಿಳಿಯಲು ಮುಂದೆ ಓದಿರಿ.

ರೆಡ್‌ಮಿ ನೋಟ್ 7 ಪ್ರೊ' ಡಿಸೈನ್
ಈಗಾಗಲೇ ವಿಶ್ವ ಮಾರುಕಟ್ಟೆಗೆ ಕಾಲಿಟ್ಟಿರುವ ರೆಡ್‌ಮಿ ನೋಟ್ 7 ಮಾದರಿಯಲ್ಲೇ 'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ ವಿನ್ಯಾಸವನ್ನು ಹೊಂದಿದೆ ಎಂದು ಹೇಳಬಹುದು. ಹಿಂಬಾಗದಲ್ಲಿ ಡ್ಯುಯಲ್ ಕ್ಯಾಮೆರಾ ಮತ್ತು ಫಿಂಗರ್‌ಪ್ರಿಂಟ್ ಆಯ್ಕೆಯ ಡಿಸೈನ್ ಹೊಂದಿರುವ ಸ್ಮಾರ್ಟ್‌ಪೋನ್ ಎರಡೂ ಭಾಗಗಳಲ್ಲಿ 2.D ಕರ್ವಡ್ ಗ್ಲಾಸ್ ಡಿಸೈನ್ ಹೊಂದಿರುವುದು ವಿಶೇಷ ಎನ್ನಬಹುದು.

'ರೆಡ್‌ಮಿ ನೋಟ್ 7 ಪ್ರೊ' ಡಿಸ್‌ಪ್ಲೇ.
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ FHD + ರೆಸಲ್ಯೂಶನ್ ಮತ್ತು 19.5:9ರ ಆಕಾರ ಅನುಪಾತದೊಂದಿಗೆ 6.3-ಇಂಚಿನ LTPS ಎಲ್‌ಸಿಡಿ ಪ್ರದರ್ಶನದೊಂದಿಗೆ ಬಿಡುಗಡೆಯಾಗಿದೆ. ಕಣ್ಣಿನ ಒತ್ತಡವನ್ನು ತಪ್ಪಿಸಲು ಸನ್‌ಲೈಟ್ ಡಿಸ್‌ಪ್ಲೇ ಮತ್ತು ಓದುವಿಕೆ ವಿಶೇಷ ಮೋಡ್ ಅನ್ನು ಹೊಂದಿರುವ ಫೋನ್ ಭಾಗಶಃ ಪೂರ್ಣ ಪ್ರಮಾಣದ ಸ್ಕ್ರೀನ್ ಡಿಸ್‌ಪ್ಲೇಯಂತೆ ಹೊಂದಿದೆ.

'ರೆಡ್‌ಮಿ ನೋಟ್ 7 ಪ್ರೊ' ಪ್ರೊಸೆಸರ್
ಆಕ್ಟಕೋರ್ ಸ್ನಾಪ್‌ಡ್ರಾಗನ್ 675 SoC ಪ್ರೊಸೆಸರ್ ಜೊತೆಗೆ 6GB LPDDR4X RAM ಮತ್ತು 128GB ಆಂತರಿಕ ಮೆಮೊರಿಯನ್ನು 'ರೆಡ್‌ಮಿ ನೋಟ್ 7 ಪ್ರೊ'ನಲ್ಲಿ ನೋಡಬಹುದು. ರೆಡ್‌ಮಿ ಫೋನಿನಲ್ಲಿ ಇದೇ ಮೊದಲ ಬಾರಿಗೆ 128GB ಮೆಮೊರಿಯನ್ನು ತರಲಾಗಿದ್ದು, ಅಡ್ರಿನೋ 612 ಜಿಪಿಯು ಜೊತೆಗೆ MIUI 10 ಟಾಪ್ ಆಂಡ್ರಾಯ್ಡ್ ಪೈನಲ್ಲಿ ಸ್ಮಾರ್ಟ್ ಕಾರ್ಯನಿರ್ವಹಣೆ ನೀಡಲಿದೆ.

'ರೆಡ್‌ಮಿ ನೋಟ್ 7 ಪ್ರೊ' ರಿಯರ್ ಕ್ಯಾಮೆರಾ
ರೆಡ್‌ಮಿ ನೋಟ್ 7 ಪ್ರೊನಲ್ಲಿ 48MP ಪ್ರಾಥಮಿಕ ಸಂವೇದಕ ಮತ್ತು 5 MP ಸೆಕೆಂಡರಿ ಸಂವೇದಕಗಳನ್ನು ನೀಡಲಾಗಿದೆ. 48MP ಕ್ಯಾಮರಾವು ಸೋನಿ IMX586 ಸಂವೇದಕವನ್ನು ಬಳಸುತ್ತಿದ್ದು, ಇದು ಸ್ಮಾರ್ಟ್ಫೋನ್ಗಳಿಗಾಗಿ ಅತ್ಯುನ್ನತ ರೆಸಲ್ಯೂಶನ್ ಸಂವೇದಕವಾಗಿದ್ದು ಉತ್ತಮ ಫೋಟೋಗಳಿಗಾಗಿ 4x ಡೈನಾಮಿಕ್ ಶ್ರೇಣಿಯನ್ನು ಬೆಂಬಲಿಸಲಿದೆ.

'ರೆಡ್‌ಮಿ ನೋಟ್ 7 ಪ್ರೊ' ಕ್ಯಾಮೆರಾ ತಂತ್ರಜ್ಞಾನ!
ರೆಡ್‌ಮಿ ನೋಟ್ 7 ಪ್ರೊ ಸಂವೇದಕವು 4 ಪಿಕ್ಸೆಲ್‌ಗಳನ್ನು 1 ಸೂಪರ್ ಪಿಕ್ಸೆಲ್‌ಗೆ ವಿಲೀನಗೊಳಿಸುವ ಮೂಲ ಕಡಿಮೆ ಬೆಳಕಿನಲ್ಲೂ ಅತ್ಯುತ್ತಮ ಚಿತ್ರಗಳನ್ನು ಚಿತ್ರಿಸಲಿದೆ. ಕೃತಕ ಬುದ್ದಿಮತ್ತೆ ಸಹಾಯದಿಂದ ರಾತ್ರಿ ಸಮಯದಲ್ಲೂ ಛಾಯಾಗ್ರಹಣಕ್ಕೆ ಶಕ್ತವಾಗಿದೆ. AI ಪೋರ್ಟ್ರೇಟ್ 2.0 ಹೊಂದಿರುವ ಕ್ಯಾಮೆರಾ ಬೊಕೆ ಚಿತ್ರಗಳು, 4K ವೀಡಿಯೋ ರೆಕಾರ್ಡಿಂಗ್ ಫೀಚರ್ಸ್ ಹೊಂದಿದೆ

'ರೆಡ್‌ಮಿ ನೋಟ್ 7 ಪ್ರೊ' ಸೆಲ್ಫೀ ಕ್ಯಾಮೆರಾ!
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನಿನಲ್ಲಿ 13 ಎಂಪಿ ಎಐ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ. ಎಐ ಭಾವಚಿತ್ರ ಸೆಲ್ಫಿ, ಸ್ಟುಡಿಯೋ ಲೈಟಿಂಗ್ ಸೆಲ್ಫಿ, ಎಐ ಫೇಸ್ ಅನ್ಲಾಕ್, ಎಐ ಬ್ಯೂಟಿಗಳೊಂದಿಗೆ 13 ಎಂಪಿ ಎಐ ಸೆಲ್ಫ್ ಕ್ಯಾಮರಾ ಅದ್ಬುತವಾಗಿದೆ. ನಿರ್ದಿಷ್ಟ ಆಪ್ಟಿಮೈಸೇಶನ್ಗಳೊಂದಿಗೆ AI ದೃಶ್ಯ ಪತ್ತೆಹಚ್ಚುವಿಕೆ ತಂತ್ರಜ್ಞಾನ ಹೊಂದಿರುವುದು ಇದರ ವಿಶೇಷತೆ.

'ರೆಡ್‌ಮಿ ನೋಟ್ 7 ಪ್ರೊ' ಬ್ಯಾಟರಿ
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಪೋನಿನಲ್ಲಿ ಎರಡು ದಿನಗಳ ಬ್ಯಾಟರಿ ಬಾಳಿಕೆ ಬರುವಂತಹ 4000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ನೀಡಲಾಗಿದೆ. ಇದು ವೇಗವಾಗಿ ಚಾರ್ಜಿಂಗ್ ಆಗಲು ಕ್ವಾಲ್ಕಾಮ್ ಕ್ವಿಕ್ ಚಾರ್ಜ್ 4.0 ಅನ್ನು ಬೆಂಬಲಿಸುತ್ತದೆ ಎಂದು ಶಿಯೋಮಿ ತಿಳಿಸಿದೆ. ಶಿಯೋಮಿ ರೆಡ್ಮಿ ನೋಟ್ 6 ನಲ್ಲಿ ಕ್ವಿಕ್ ಚಾರ್ಜ್ 3.0 ತಂದಿದನ್ನು ನಾವಿಲ್ಲಿ ನೋಡಬಹುದು.

'ರೆಡ್‌ಮಿ ನೋಟ್ 7 ಪ್ರೊ' ಬೆಲೆಗಳು
'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ ಎರಡು ವೆರಿಯಂಟ್‌ಗಳಲ್ಲಿ ಮೊಬೈಲ್ ಮಾರುಕಟ್ಟೆಗೆ ಲಾಂಚ್ ಆಗಿದ್ದು, 4GB RAM ಮತ್ತು 64GB ಆಂತರಿಕ ಮೆಮೊರಿಯನ್ನು ಹೊಂದಿರುವ 'ರೆಡ್‌ಮಿ ನೋಟ್ 7 ಪ್ರೊ' ಫೋನಿನ ಬೆಲೆ 13,999 ರೂ.ಗಳಾಗಿವೆ. ಹಾಗೆಯೇ, 6GB RAM ಮತ್ತು 128GB ಆಂತರಿಕ ಮೆಮೊರಿಯ ನೋಟ್ 7 ಪ್ರೊ ಫೋನ್ ಬೆಲೆ 16,999 ರೂ.ಗಳಾಗಿವೆ.


Click it and Unblock the Notifications








