Home
ಮೊಬೈಲ್

ಸಿಹಿಸುದ್ದಿ!..ಶಿಯೋಮಿ 'ರೆಡ್‌ಮಿ ನೋಟ್ 7 ಪ್ರೊ' ಬೆಲೆ ಇಳಿಕೆ!

ಆಗಸ್ಟ್ 12ನೇ ತಾರೀನಿನಿಂದ ಆಗಸ್ಟ್ 18ರ ವರೆಗೂ ಆಯೋಜನೆಯಾಗಿರುವ ಶಿಯೋಮಿ ಮಿ ಡೇಸ್ ಸೇಲ್‌ನಲ್ಲಿ ಜನಪ್ರಿಯ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ರೆಡ್‌ಮಿ ನೋಟ್ 7 ಪ್ರೊ ಬೆಲೆ ಕಡಿತಗೊಂಡಿದೆ. 48 ಎಂಪಿ ಪ್ರೈಮರಿ ಕ್ಯಾಮೆರಾದೊಂದಿಗೆ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿದ್ದ ರೆಡ್‌ಮಿ ನೋಟ್ 7 ಪ್ರೊ ಸ್ಮಾರ್ಟ್‌ಪೋನಿನ 6 ಜಿಬಿ RAM ಮತ್ತು 64 ಜಿಬಿ ಸ್ಟೋರೇಜ್ ರೂಪಾಂತರವು ಇದೀಗ 1000 ರೂಪಾಯಿಗಳ ಬೆಲೆಯನ್ನು ಕಳೆದುಕೊಂಡು ಖರೀದಿಗೆ ಲಭ್ಯವಿದೆ.

ಸಿಹಿಸುದ್ದಿ!..ಶಿಯೋಮಿ 'ರೆಡ್‌ಮಿ ನೋಟ್ 7 ಪ್ರೊ' ಬೆಲೆ ಇಳಿಕೆ!

ಹೌದು, ನೋಟ್ 7 ಪ್ರೊನ ಈ ರೂಪಾಂತರವು ಈ ಮೊದಲು ರೂ. 15,999ಗಳ ಬೆಲೆಯನ್ನು ಹೊಂದಿತ್ತು. ಆದರೆ, ಇದೀಗ ಅದನ್ನು 1,000 ರೂ.ಗಳ ಕಡಿತದಲ್ಲಿ ಕೇವಲ 14,999 ರೂ.ಗಳಿಗೆ ಫ್ಲಿಪ್‌ಕಾರ್ಟ್ ಮತ್ತು ಮೈ.ಕಾಮ್ ಮೂಲಕ ಖರೀದಿಸಬಹುದಾಗಿದೆ. ಇನ್ನು ಇದೇ ಸೇಲ್‌ನಲ್ಲಿ 4 ಜಿಬಿ RAM + 64GB ಶೇಖರಣಾ ರೂಪಾಂತರದ ಬೆಲೆ 13,999 ರೂ. ಗಳಾಗಿದ್ದರೆ, 6 ಜಿಬಿ RAM + 128 ಜಿಬಿ ಟಾಪ್-ಮಾಡೆಲ್ ಮಾದರಿ ಫೋನಿನ ಬೆಲೆ 16,999 ರೂಪಾಯಿಗಳ ಅದೇ ಬೆಲೆಯನ್ನು ಹೊಂದಿವೆ.

ಅಗ್ಗದ ಬೆಲೆಯಲ್ಲಿ ಹೈ ಎಂಡ್‌ ಫೀಚರ್ಸ್‌ಗಳನ್ನು ಹೊಂದಿರುವುದು ರೆಡ್‌ಮಿ ನೋಟ್ 7 ಪ್ರೊ ಸ್ಮಾರ್ಟ್‌ಫೋನಿನ ಪ್ಲಸ್‌ ಪಾಯಿಂಟ್ ಆಗಿದ್ದು, ಹಿಂಬದಿಯಲ್ಲಿ 48 ಮೆಗಾಪಿಕ್ಸಲ್ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ ಆಕ್ಟಕೋರ್ ಸ್ನಾಪ್‌ಡ್ರಾಗನ್ 675 SoC ಪ್ರೊಸೆಸರ್ ಮೊಬೈಲ್ ಪ್ರಿಯರ ಗಮನಸೆಳೆದಿದೆ. ಹಾಗಾದರೇ, ಶಿಯೋಮಿ ರೆಡ್ಮಿ ನೋಟ್‌ 7ಪ್ರೋ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು ಯಾವುವು?, ಸ್ಮಾರ್ಟ್‌ಫೋನಿನ ವಿಶೇಷತೆಗಳು ಏನೆಂದು ತಿಳಿಯಲು ಮುಂದೆ ಓದಿರಿ.

'ರೆಡ್‌ಮಿ ನೋಟ್ 7 ಪ್ರೊ' ಡಿಸ್‌ಪ್ಲೇ.

'ರೆಡ್‌ಮಿ ನೋಟ್ 7 ಪ್ರೊ' ಡಿಸ್‌ಪ್ಲೇ.

'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ FHD + ರೆಸಲ್ಯೂಶನ್ ಮತ್ತು 19.5:9ರ ಆಕಾರ ಅನುಪಾತದೊಂದಿಗೆ 6.3-ಇಂಚಿನ LTPS ಎಲ್‌ಸಿಡಿ ಪ್ರದರ್ಶನದೊಂದಿಗೆ ಬಿಡುಗಡೆಯಾಗಿದೆ. ಕಣ್ಣಿನ ಒತ್ತಡವನ್ನು ತಪ್ಪಿಸಲು ಸನ್‌ಲೈಟ್ ಡಿಸ್‌ಪ್ಲೇ ಮತ್ತು ಓದುವಿಕೆ ವಿಶೇಷ ಮೋಡ್ ಅನ್ನು ಹೊಂದಿರುವ ಫೋನ್ ಭಾಗಶಃ ಪೂರ್ಣ ಪ್ರಮಾಣದ ಸ್ಕ್ರೀನ್ ಡಿಸ್‌ಪ್ಲೇಯಂತೆ ಹೊಂದಿದೆ.

'ರೆಡ್‌ಮಿ ನೋಟ್ 7 ಪ್ರೊ' ಪ್ರೊಸೆಸರ್

'ರೆಡ್‌ಮಿ ನೋಟ್ 7 ಪ್ರೊ' ಪ್ರೊಸೆಸರ್

ಆಕ್ಟಕೋರ್ ಸ್ನಾಪ್‌ಡ್ರಾಗನ್ 675 SoC ಪ್ರೊಸೆಸರ್ ಜೊತೆಗೆ 6GB LPDDR4X RAM ಮತ್ತು 128GB ಆಂತರಿಕ ಮೆಮೊರಿಯನ್ನು 'ರೆಡ್‌ಮಿ ನೋಟ್ 7 ಪ್ರೊ'ನಲ್ಲಿ ನೋಡಬಹುದು. ರೆಡ್‌ಮಿ ಫೋನಿನಲ್ಲಿ ಇದೇ ಮೊದಲ ಬಾರಿಗೆ 128GB ಮೆಮೊರಿಯನ್ನು ತರಲಾಗಿದ್ದು, ಅಡ್ರಿನೋ 612 ಜಿಪಿಯು ಜೊತೆಗೆ MIUI 10 ಟಾಪ್ ಆಂಡ್ರಾಯ್ಡ್ ಪೈನಲ್ಲಿ ಸ್ಮಾರ್ಟ್‌ ಕಾರ್ಯನಿರ್ವಹಣೆ ನೀಡಲಿದೆ.

'ರೆಡ್‌ಮಿ ನೋಟ್ 7 ಪ್ರೊ' ರಿಯರ್ ಕ್ಯಾಮೆರಾ

'ರೆಡ್‌ಮಿ ನೋಟ್ 7 ಪ್ರೊ' ರಿಯರ್ ಕ್ಯಾಮೆರಾ

ರೆಡ್‌ಮಿ ನೋಟ್ 7 ಪ್ರೊನಲ್ಲಿ 48MP ಪ್ರಾಥಮಿಕ ಸಂವೇದಕ ಮತ್ತು 5 MP ಸೆಕೆಂಡರಿ ಸಂವೇದಕಗಳನ್ನು ನೀಡಲಾಗಿದೆ. 48MP ಕ್ಯಾಮರಾವು ಸೋನಿ IMX586 ಸಂವೇದಕವನ್ನು ಬಳಸುತ್ತಿದ್ದು, ಇದು ಸ್ಮಾರ್ಟ್ಫೋನ್ಗಳಿಗಾಗಿ ಅತ್ಯುನ್ನತ ರೆಸಲ್ಯೂಶನ್ ಸಂವೇದಕವಾಗಿದ್ದು ಉತ್ತಮ ಫೋಟೋಗಳಿಗಾಗಿ 4x ಡೈನಾಮಿಕ್ ಶ್ರೇಣಿಯನ್ನು ಬೆಂಬಲಿಸಲಿದೆ.

'ರೆಡ್‌ಮಿ ನೋಟ್ 7 ಪ್ರೊ' ಕ್ಯಾಮೆರಾ ತಂತ್ರಜ್ಞಾನ!

'ರೆಡ್‌ಮಿ ನೋಟ್ 7 ಪ್ರೊ' ಕ್ಯಾಮೆರಾ ತಂತ್ರಜ್ಞಾನ!

ರೆಡ್‌ಮಿ ನೋಟ್ 7 ಪ್ರೊ ಸಂವೇದಕವು 4 ಪಿಕ್ಸೆಲ್‌ಗಳನ್ನು 1 ಸೂಪರ್ ಪಿಕ್ಸೆಲ್‌ಗೆ ವಿಲೀನಗೊಳಿಸುವ ಮೂಲ ಕಡಿಮೆ ಬೆಳಕಿನಲ್ಲೂ ಅತ್ಯುತ್ತಮ ಚಿತ್ರಗಳನ್ನು ಚಿತ್ರಿಸಲಿದೆ. ಕೃತಕ ಬುದ್ದಿಮತ್ತೆ ಸಹಾಯದಿಂದ ರಾತ್ರಿ ಸಮಯದಲ್ಲೂ ಛಾಯಾಗ್ರಹಣಕ್ಕೆ ಶಕ್ತವಾಗಿದೆ. AI ಪೋರ್ಟ್ರೇಟ್ 2.0 ಹೊಂದಿರುವ ಕ್ಯಾಮೆರಾ ಬೊಕೆ ಚಿತ್ರಗಳು, 4K ವೀಡಿಯೋ ರೆಕಾರ್ಡಿಂಗ್ ಫೀಚರ್ಸ್ ಹೊಂದಿದೆ

'ರೆಡ್‌ಮಿ ನೋಟ್ 7 ಪ್ರೊ' ಸೆಲ್ಫೀ ಕ್ಯಾಮೆರಾ!

'ರೆಡ್‌ಮಿ ನೋಟ್ 7 ಪ್ರೊ' ಸೆಲ್ಫೀ ಕ್ಯಾಮೆರಾ!

'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನಿನಲ್ಲಿ 13 ಎಂಪಿ ಎಐ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ. ಎಐ ಭಾವಚಿತ್ರ ಸೆಲ್ಫಿ, ಸ್ಟುಡಿಯೋ ಲೈಟಿಂಗ್ ಸೆಲ್ಫಿ, ಎಐ ಫೇಸ್ ಅನ್ಲಾಕ್, ಎಐ ಬ್ಯೂಟಿಗಳೊಂದಿಗೆ 13 ಎಂಪಿ ಎಐ ಸೆಲ್ಫ್ ಕ್ಯಾಮರಾ ಅದ್ಬುತವಾಗಿದೆ. ನಿರ್ದಿಷ್ಟ ಆಪ್ಟಿಮೈಸೇಶನ್ಗಳೊಂದಿಗೆ AI ದೃಶ್ಯ ಪತ್ತೆಹಚ್ಚುವಿಕೆ ತಂತ್ರಜ್ಞಾನ ಹೊಂದಿರುವುದು ಇದರ ವಿಶೇಷತೆ.

'ರೆಡ್‌ಮಿ ನೋಟ್ 7 ಪ್ರೊ' ಬ್ಯಾಟರಿ

'ರೆಡ್‌ಮಿ ನೋಟ್ 7 ಪ್ರೊ' ಬ್ಯಾಟರಿ

'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಪೋನಿನಲ್ಲಿ ಎರಡು ದಿನಗಳ ಬ್ಯಾಟರಿ ಬಾಳಿಕೆ ಬರುವಂತಹ 4000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ನೀಡಲಾಗಿದೆ. ಇದು ವೇಗವಾಗಿ ಚಾರ್ಜಿಂಗ್ ಆಗಲು ಕ್ವಾಲ್ಕಾಮ್ ಕ್ವಿಕ್ ಚಾರ್ಜ್ 4.0 ಅನ್ನು ಬೆಂಬಲಿಸುತ್ತದೆ ಎಂದು ಶಿಯೋಮಿ ತಿಳಿಸಿದೆ. ಶಿಯೋಮಿ ರೆಡ್‌ಮಿ ನೋಟ್ 6 ನಲ್ಲಿ ಕ್ವಿಕ್ ಚಾರ್ಜ್ 3.0 ತಂದಿದನ್ನು ನಾವಿಲ್ಲಿ ನೋಡಬಹುದು.

Best Mobiles in India

English summary
as a part of Mi Days Sale, has axed the price of its popular mid-range smartphone - the Redmi Note 7 Pro in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+