ಪ್ರತಿದಿನ 'ನೋಟ್ 7' ಸೇಲ್ ಆಗುತ್ತಿರುವ ಸಂಖ್ಯೆ ಕೇಳಿ ನೀವು ಮೂರ್ಚೆಹೋಗಬಹುದು!

|

ಭಾರತದಲ್ಲಿ ಇತ್ತೀಚಿಗಷ್ಟೇ ಲಾಂಚ್ ಆಗಿರುವ ಶಿಯೋಮಿ ರೆಡ್‌ಮಿ ನೋಟ್ 7 ಮಾದರಿ ಸ್ಮಾರ್ಟ್‌ಫೋನ್‌ಗಳು ದಾಖಲೆ ಮಾರಾಟ ಕಂಡಿರುವುದನ್ನು ಕಂಪೆನಿ ಅಧಿಕೃತಪಡಿಸಿದೆ. ಜನವರಿ 10 ರಂದು ಚೀನಾದಲ್ಲಿ ಮೊದಲ ಲಾಂಚ್ ಆಗಿದ್ದ ರೆಡ್‌ಮಿ ನೋಟ್ 7 ಸ್ಮಾರ್ಟ್‌ಪೋನ್ ಮೊದಲ ಒಂದು ತಿಂಗಳಿನಲ್ಲೇ 10 ಲಕ್ಷ ಮಾರಾಟ ಕಂಡಿವೆ. ಇನ್ನು ಭಾರತ ಮತ್ತು ಯೂರೋಪ್‌ನಲ್ಲಿ ಸ್ಮಾರ್ಟ್‌ಪೋನ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಈ ಮಾರ್ಚ್ ತಿಂಗಳ ಅಂತ್ಯದೊಳಗೆ 4 ಮಿಲಿಯನ್(40 ಲಕ್ಷ) ಸ್ಮಾರ್ಟ್‌ಫೋನ್‌ಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ಶಿಯೋಮಿ ಕಂಪೆನಿ ಕಾರ್ಯನಿರ್ವಹಣಾ ಅಧಿಕಾರಿ ಲೀಜುನ್ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ಪ್ರತಿದಿನ 50 ಸಾವಿರದಷ್ಟು ರೆಡ್‌ಮಿ ನೋಟ್ 7 ಸ್ಮಾರ್ಟ್‌ಫೋನ್‌ಗಳು ಮಾರಾಟವಾಗುತ್ತಿವೆ ಎಂದು ತಿಳಿಸಿದ್ದಾರೆ. ಇದು ವಿಶ್ವದಾದ್ಯಂತ ಹುವಾವೆ ಹಾನರ್ 8ಎಕ್ಸ್ ಸ್ಮಾರ್ಟ್‌ಫೋನ್ ಪಡೆದಿದ್ದ ಯಶಸ್ಸಿಗೆ ಸಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದು, ಮಿಡ್‌ರೇಂಜ್ ಸ್ಮಾರ್ಟ್‌ಪೋನ್ ಮಾರಾಟದಲ್ಲಿ ಇದು ಒಂದು ನೆನಪಿಡುವಂತಹ ಯಶಸ್ಸು ಎಂದು ಹೇಳಿದ್ದಾರೆ.

ಪ್ರತಿದಿನ 'ನೋಟ್ 7' ಸೇಲ್ ಆಗುತ್ತಿರುವ ಸಂಖ್ಯೆ ಕೇಳಿ ನೀವು ಮೂರ್ಚೆಹೋಗಬಹುದು!

1080 x 2340 ಪಿಕ್ಸ್‌ಲ್‌ ರೆಸಲ್ಯೂಶನ್ ಹೊಂದಿರುವ 6.3-ಇಂಚಿನ ಪೂರ್ಣ ಹೆಚ್‌ಡಿ 'ಡಾಟ್ ನಾಚ್' ಡಿಸ್‌ಪ್ಲೇ, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ, ಸ್ನಾಪ್ಡ್ರಾಗನ್ 660 ಎಸ್‌ಒಸಿ ಪ್ರೊಸೆಸರ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿಂದ ಮೊಬೈಲ್ ಪ್ರಿಯರ ಮನಗೆದ್ದಿರುವ ಈ ಸ್ಮಾರ್ಟ್‌ಫೋನ್ ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಮೋಡಿ ಮಾಡುತ್ತಿದೆ. ಹಾಗಾದರೆ, 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಹೇಗಿದೆ ಎಂಬುದನ್ನು ಮುಂದೆ ಓದಿ ತಿಳಿಯಿರಿ.

'ರೆಡ್‌ಮಿ ನೋಟ್ 7' ವಿನ್ಯಾಸ

'ರೆಡ್‌ಮಿ ನೋಟ್ 7' ವಿನ್ಯಾಸ

ವಾಟರ್‌ಡ್ರಾಪ್ ಚಿಕ್ಕ ನೋಚ್ ವಿನ್ಯಾಸದ ಡಿಸ್‌ಪ್ಲೇ, ಡ್ಯುಯಲ್ ಕ್ಯಾಮೆರಾ, ಫಿಂಗರ್‌ಪ್ರಿಂಟ್ ಆಯ್ಕೆ ಸೇರಿದಂತೆ ಹಿಂಬಾಗದಲ್ಲಿ 2.5 ಡಿ ಬಾಗಿದ ಗಾಜಿನ ರಕ್ಷಣೆ ವಿನ್ಯಾಸವನ್ನು ಹೊಂದಿರುವ ಸ್ಮಾರ್ಟ್‌ಪೋನ್ ಹೈ ಎಂಡ್ ಲುಕ್ ಹೊಂದಿದೆ. ಪ್ರೀಮಿಯಮ್ ಸ್ಮಾರ್ಟ್‌ಫೋನ್‌ಗಳಿಗೂ ಸೆಡ್ಡು ಹೊಡೆಯುವಂತಹ ಲುಕ್‌ನಲ್ಲಿ ಬಿಡುಗಡೆಯಾದ ಮೊದಲ ಬಜೆಟ್ ಫೋನಿನಂತೆ ಕಾಣುತ್ತಿದೆ.

'ರೆಡ್‌ಮಿ ನೋಟ್ 7' ಡಿಸ್‌ಪ್ಲೇ !

'ರೆಡ್‌ಮಿ ನೋಟ್ 7' ಡಿಸ್‌ಪ್ಲೇ !

'ರೆಡ್‌ಮಿ ನೋಟ್ 7' ಫೋನ್ 19.5: 9 ಆಕಾರ ಅನುಪಾತದಲ್ಲಿ 1080x2340 ಪಿಕ್ಸೆಲ್‌ಗಳ ಸಾಮರ್ಥ್ಯದ 6.3-ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿರುವ ಡಿಸ್‌ಪ್ಲೇ ವಾಟರ್‌ಡ್ರಾಪ್ ಚಿಕ್ಕ ನೋಚ್ ವಿನ್ಯಾಸವನ್ನು ಹೊಂದಿರುವುದನ್ನು ನೋಡಬಹುದಾಗಿದೆ. ಇದು ಮಲ್ಟಿಮೀಡಿಯಾ ಪ್ರಿಯರ ಮನಗೆಲ್ಲಲು ಯಶಸ್ವಿಯಾಗಿದೆ.

ಪ್ರೊಸೆಸರ್ ಮತ್ತು RAM!

ಪ್ರೊಸೆಸರ್ ಮತ್ತು RAM!

'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 2.2GHz ಸ್ನಾಪ್ಡ್ರಾಗನ್ 660 ಎಸ್‌ಒಸಿ ಪ್ರೊಸೆಸರ್, ಅಡ್ರಿನೋ 512 ಗ್ರಾಫಿಕ್ಸ್, 3 ಜಿಬಿಮತ್ತು 4 ಜಿಬಿ RAM ಆಯ್ಕೆಗಳೊಂದಿಗೆ ಬಿಡುಗಡೆಯಾಗಿದೆ. 32GB ಮತ್ತು 64GB ಮೆಮೊರಿ ಆಯ್ಕೆಗಳ ಸ್ಮಾರ್ಟ್‌ಫೋನಿನ ಆಂತರಿಕ ಮೆಮೊರಿಯನ್ನು 256GB ವರೆಗೆ ವಿಸ್ತರಿಸುವ ಆಯ್ಕೆಯೂ ಸಹ ಲಭ್ಯವಿದೆ.

12+2MP ಕ್ಯಾಮೆರಾ!

12+2MP ಕ್ಯಾಮೆರಾ!

ಶಿಯೋಮಿ ಕಂಪೆನಿ ತನ್ನರೆಡ್‌ಮಿ ನೋಟ್ 7 ಸ್ಮಾರ್ಟ್‌ಪೋನಿನಲ್ಲಿ 12 ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಸಾಮರ್ಥ್ಯದ ಎರಡು ಕ್ಯಾಮೆರಾಗಳನ್ನು ಹಿಂಬಾಗದಲ್ಲಿ ನೀಡಿದೆ. (ಭಾರತದಲ್ಲಿ ರೆಡ್‌ಮಿ ನೋಟ್ 7 ಪ್ರೊ ನಲ್ಲಿ ಮಾತ್ರ 48MP+5MP ರಿಯರ್ ಕ್ಯಾಮೆರಾಗಳನ್ನು ನೀಡಲಾಗಿದೆ)ಇನ್ನುಳಿದಂತೆ ಡ್ಯುಯಲ್-ಎಲ್ಇಡಿ ಫ್ಲಾಶ್ ಬೆಂಬಲ, ಪಿಡಿಎಎಫ್ ಅನ್ನು ಸಹ ಹಿಂಬಾಗದಲ್ಲಿ ನೋಡಬಹುದಾಗಿದೆ.

13MP ಸೆಲ್ಫಿ ಕ್ಯಾಮೆರಾ!

13MP ಸೆಲ್ಫಿ ಕ್ಯಾಮೆರಾ!

ಹಿಂಬಾಗದಲ್ಲಿ 12MP+2MP ಸಾಮರ್ಥ್ಯದ ಕ್ಯಾಮೆರಾಗಳನ್ನು ಹೊಂದಿರುವ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನಿನಲ್ಲಿ 13-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಪೊರ್ಟ್ರೇಟ್ ಮೋಡ್, ಹೆಚ್‌ಡಿಆರ್, ಎಐ ಫೇಸ್ ಅನ್ಲಾಕ್, ಎಐ ಸ್ಮಾರ್ಟ್ ಬ್ಯೂಟಿ, ಎಐ ಸಿಂಗಲ್ ಶಾಟ್ ಬ್ಲರ್, ಫ್ರಂಟ್ ಹೆಚ್‌ಡಿಆರ್‌ನಂತಹ ವಿಶೇಷತೆಗಳನ್ನು ಈ ಕ್ಯಾಮೆರಾ ತಂತ್ರಜ್ಞಾನದಲ್ಲಿವೆ.

ಬ್ಯಾಟರಿ ಶಕ್ತಿ ಎಷ್ಟು?

ಬ್ಯಾಟರಿ ಶಕ್ತಿ ಎಷ್ಟು?

ಕ್ವಿಕ್ ಚಾರ್ಜ್ 4 ತಂತ್ರಜ್ಞಾನ ಬೆಂಬಲದೊಂದಿಗೆ 4,000 mAh ಬ್ಯಾಟರಿಯನ್ನು 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನಿನಲ್ಲಿ ನೀಡಲಾಗಿದೆ. ಇದು 251 ಗಂಟೆಗಳ ಸ್ಟ್ಯಾಂಡ್‌ ಬೈ ಸಮಯ, 23 ಗಂಟೆಗಳ ಟಾಕ್ ಟೈಮ್, 13 ಗಂಟೆಗಳ ವೀಡಿಯೋ ಪ್ಲೇಬ್ಯಾಕ್, ಮತ್ತು 7 ಗಂಟೆಗಳ ಗೇಮಿಂಗ್‌ವರೆಗೆ ಬ್ಯಾಟರಿ ಸಾಮರ್ಥ್ಯವನ್ನು ನೀಡಲಿದೆ ಎಂದು ಶಿಯೋಮಿ ಕಂಪೆನಿ ಹೇಳಿಕೊಂಡಿದೆ.

ಇತರೆ ಏನೆಲ್ಲಾ ಫೀಚರ್ಸ್?

ಇತರೆ ಏನೆಲ್ಲಾ ಫೀಚರ್ಸ್?

ಟೈಪ್ ಸಿ ಪೋರ್ಟ್, 3.5mm ಆಡಿಯೋ ಜ್ಯಾಕ್, 4ಜಿ ವೋಲ್ಟ್, ಜಿಪಿಎಸ್, ಎಜಿಪಿಎಸ್, ಗ್ಲೋನಾಸ್, ಬ್ಲೂಟೂತ್ ವಿ5, ಮತ್ತು ವೈ-ಫೈ 802.11 ಎ / ಬಿ / ಜಿ / ಎನ್ / ಎಸಿ. ಸೇರಿದಂತೆ 450 ನಿಟ್ಸ್ ಬ್ರೈಟ್ನೆಸ್, 84 ಶೇಕಡಾ ಎನ್ ಟಿ ಎಸ್ ಸಿ ಕಲರ್ ಗ್ಯಾಮೆಟ್‌ನಂತಹ ಇತ್ತೀಚಿನ ಹಲವು ನೂತನ ತಂತ್ರಜ್ಞಾನಗಳನ್ನು 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಪೋನಿನಲ್ಲಿ ತರಲಾಗಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಭಾರತದಲ್ಲಿ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಎರಡು ವೆರಿಯಂಟ್‌ಗಳಲ್ಲಿ ಬಿಡುಗಡೆ ಕಂಡಿದ್ದು, 3GB RAM + 32GB ಮಾದರಿಯ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಬೆಲೆ ಕೇವಲ 9,999 ರೂ.ಗಳಿಂದ ಶುರುವಾಗಿದೆ. ಹಾಗೆಯೇ, 4GB RAM + 64GB ಮಾದರಿಯ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಬೆಲೆ 11,999 ರೂಪಾಯಿಗಳಾಗಿವೆ.

Best Mobiles in India

English summary
Xiaomi officials introduced the Redmi Note 7 on January 10 and later the brand president said his team will push 1 million phones in its first month of sales. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X