ಮತ್ತೊಮ್ಮೆ ಇತಿಹಾಸ ನಿರ್ಮಿಸಲು ಶಿಯೋಮಿ ಪ್ಲಾನ್: ಅತೀ ಕಡಿಮೆ ಬೆಲೆಯ ಸರ್ಪೈಸ್ ಸ್ಮಾರ್ಟ್‌ಫೋನ್..!
ಈಗಾಗಲೇ ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಚೀನಾ ಮೂಲದ ಸ್ಮಾರ್ಟ್‌ಫೋನ್ ತಯಾರಿಕ ಕಂಪನಿ ಶಿಯೋಮಿ, ಹೊಸದೊಂದು ಸ್ಮಾರ್ಟ್‌ಫೋನ್ ಅನ್ನು ಸರ್ಪೈಸ್ ಆಗಿ ಲಾಂಚ್ ಮಾಡಲು ಮುಂದಾಗಿದ್ದು, ರೆಡ್‌ಮಿ S2 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಮಾರುಕಟ್ಟೆಯಲ್ಲಿ ಹೊಸ ದಾಖಲೆಯನ್ನು ಸೃಷ್ಠಿಸವ ಎಲ್ಲಾ ಸಾಧ್ಯತೆಯೂ ಇದೇ ಎನ್ನಲಾಗಿದೆ.

ಮೊದಲಿಗೆ ಚೀನಾದಲ್ಲಿ ಕಾಣಿಸಿಕೊಳ್ಳುವ ಈ ರೆಡ್‌ಮಿ S2 ಸ್ಮಾರ್ಟ್‌ಫೋನ್ ಮೇ.10 ರಂದು ಸರ್ಪೈಸ್ ಆಗಿ ಲಾಂಚ್ ಆಗಲಿದೆ. ಇದಾದ ನಂತರದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್ ಲಾಂಚ್ ಆಗಲಿದ್ದು, ಈಗಾಗಲೇ ಲಾಂಚ್ ಆಗಿದ್ದ ಸ್ಮಾರ್ಟ್‌ಫೋನ್‌ಗಳಿಗಿಂತ ಭಿನ್ನವಾಗಿ ರೆಡ್‌ಮಿ S2 ಸ್ಮಾರ್ಟ್‌ಫೋನ್ ಕಾಣಿಸಿಕೊಳ್ಳಲಿದೆ. ಈ ಕುರಿತು ಮಾಹಿತಿಯೂ ಲೀಕ್ ಆಗಿದೆ.

ರೆಡ್‌ಮಿ S2 ಸ್ಮಾರ್ಟ್‌ಫೋನ್ ವಿಶೇಷತೆ:
ರೆಡ್‌ಮಿ S2 ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಟ್ರೆಂಡ್ ಆಗಿರುವ ವಿಶೇಷತೆಗಳನ್ನು ಹೊಂದಿದೆ ಎನ್ನಲಾಗಿದೆ. ಇದರಲ್ಲಿ HD+ ಗುಣಮಟ್ಟದ 5.99 ಇಂಚಿನ 18:9 ಅನುಪಾತದ IPS LCD ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿರುವ ನೋಟ್ 5 ಸ್ಮಾರ್ಟ್‌ಫೋನ್ ಮಾದರಿಯಲ್ಲಿಯೇ ಡಿಸ್‌ಪ್ಲೇಯನ್ನು ಹೊಂದಿರಲಿದೆ.

ರೆಡ್‌ಮಿ S2 ಪ್ರೋಸೆಸರ್:
ರೆಡ್‌ಮಿ S2 ಸ್ಮಾರ್ಟ್‌ಫೋನಿನಲ್ಲಿ ಆಕ್ಟಾಕೋರ್ ಸ್ನಾಪ್‌ಡ್ರಾಗನ್ 625 ಪ್ರೋಸೆಸರ್ ನೊಂದಿಗೆ ಕಾಣಿಸಿಕೊಳ್ಳಲಿದ್ದು, ಎರಡು ಆವೃತ್ತಿಗಳಲ್ಲಿ ಈ ಸ್ಮಾರ್ಟ್‌ಫೋನ್ ಮಾರಾಟವಾಗಲಿದೆ. ಬಳಕೆದಾರರಿಗೆ ಹೆಚ್ಚಿನ ಆಯ್ಕೆಯನ್ನು ನೀಡಲಿದೆ.


ಎರಡು ಆವೃತ್ತಿ:
ರೆಡ್‌ಮಿ S2 ಸ್ಮಾರ್ಟ್‌ಫೋನ್ 2GB RAM ಮತ್ತು 16GB ಇಂಟರ್ನಲ್ ಮೆಮೊರಿಯೊಂದಿಗೆ ಒಂದು ಆವೃತ್ತಿಯೂ ಲಭ್ಯವಿದ್ದು, ಇದೇ ಮಾದರಿಯಲ್ಲಿ 3GB RAM ಮತ್ತು 32GB ಇಂಟರ್ನಲ್ ಮೆಮೊರಿಯೊಂದಿಗೆ ಮಾರಾಟವಾಗಲಿದೆ.

2 ಸಿಮ್ + ಮೆಮೊರಿ ಕಾರ್ಡ್:
ರೆಡ್‌ಮಿ S2 ಸ್ಮಾರ್ಟ್‌ಫೋನಿನಲ್ಲಿ ಈ ಹಿಂದಿನಂತೆ 2 ಸಿಮ್ ಕಾರ್ಡ್ ಗಳನ್ನು ಹಾಕಿಕೊಳ್ಳಬಹುದಾಗಿದೆ. ಇದಲ್ಲದೇ ಎರಡು ಸಿಮ್ ನೊಂದಿಗೆ ಮೊಮೊರಿ ಕಾರ್ಡ್ ಹಾಕಿಕೊಳ್ಳುವ ಅವಕಾಸವನ್ನು ಮಾಡಿಕೊಡಲಾಗಿದೆ.

ಡ್ಯುಯಲ್ ಕ್ಯಾಮೆರಾ:
ರೆಡ್‌ಮಿ S2 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದಾಗಿದೆ. 12MP + 5MP ಕ್ಯಾಮೆರಾವನ್ನು ನೀಡಲಾಗಿದ್ದು, ಇದು ರೆಡ್‌ಮಿ ನೋಟ್ 5 ಪ್ರೋ ಸ್ಮಾರ್ಟ್‌ಫೋನ್ ಮಾದರಿಯಲ್ಲಿಯೇ ಈ ಸ್ಮಾರ್ಟ್‌ಫೋನ್ ನಲ್ಲಿಯೂ ನೋಡಬಹುದಾಗಿದೆ. ಎರಡು ಕ್ಯಾಮೆರಾ ಮಧ್ಯದಲ್ಲಿ LED ಫ್ಲಾಷ್ ಲೈಟ್ ಅನ್ನು ಅಳವಡಿಸಲಾಗಿದೆ. ಮುಂಭಾಗದಲ್ಲಿ 16MP ಕ್ಯಾಮೆರಾವನ್ನು ಸೆಲ್ಫಿಗಾಗಿ ನೀಡಲಾಗಿದೆ.

3000mAh ಬ್ಯಾಟರಿ:
ಇದಲ್ಲದೇ ರೆಡ್‌ಮಿ S2 ಸ್ಮಾರ್ಟ್‌ಫೋನಿನಲ್ಲಿ 3000mAh ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಎರಡು ಮೂರುದಿನಗಳ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ. ಇದಲ್ಲದೇ ಆಂಡ್ರಾಯ್ಡ್ ಒರಿಯೋದಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.

ಬೆಲೆಗಳು:
2GB RAM ಮತ್ತು 16GB ಇಂಟರ್ನಲ್ ಮೆಮೊರಿಯ ರೆಡ್‌ಮಿ S2 ಸ್ಮಾರ್ಟ್‌ಫೋನ್ ರೂ.8,999ಕ್ಕೆ ಮಾರಾಟವಾಗಲಿದೆ. ಇದೇ ಮಾದರಿಯಲ್ಲಿ 3GB RAM ಮತ್ತು 32GB ಇಂಟರ್ನಲ್ ಮೆಮೊರಿಯ ಸ್ಮಾರ್ಟ್‌ಫೋನ್ ರೂ.11,700ಕ್ಕೆ ದೊರೆಲಿಯಲಿದೆ ಎನ್ನಲಾಗಿದೆ.


Click it and Unblock the Notifications