Home
ಮೊಬೈಲ್

Samsung Galaxy A06 vs Samsung Galaxy A15: ಜನ ಮೆಚ್ಚಿದ ಫೋನ್‌ಗಳು.. ನಿಮ್ಮ ಆಯ್ಕೆ ಯಾವುದು?

Samsung Galaxy A06 vs Samsung Galaxy A15: ಸ್ಯಾಮ್‌ಸಂಗ್ ಇತ್ತೀಚೆಗೆ ತನ್ನ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A06 (Samsung Galaxy A06) ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಹಿಂದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 (Samsung Galaxy A15) ಫೋನನ್ನು ಬಿಡುಗಡೆ ಮಾಡಲಾಗಿತ್ತು. ನಾವು ಈ ಲೇಖನದಲ್ಲಿ ಈ ಎರಡು ಮೊಬೈಲ್‌ಗಳಲ್ಲಿ ಯಾವುದು ಉತ್ತಮ ಆಯ್ಕೆ ಮತ್ತು ಇವೆರಡರ ನಡುವಿನ ವ್ಯತ್ಯಾಸಗಳನ್ನು ತಿಳಿಯೋಣ.

ಎರಡೂ ಫೋನ್‌ಗಳಲ್ಲಿ ಬಹುತೇಕ ಎಲ್ಲಾ ವೈಶಿಷ್ಟ್ಯಗಳು ಒಂದೇ ರೀತಿಯಲ್ಲಿವೆ. ಆದರೆ, ಕೆಲವು ಪ್ರಮುಖ ವ್ಯತ್ಯಾಸಗಳಿವೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಮತ್ತು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನಿನ ಡಿಸ್ಲ್ಪೇ, ಪ್ರೊಸೆಸರ್, ಕ್ಯಾಮೆರಾ ಸೆಟಪ್, ಬ್ಯಾಟರಿ ಸೇರಿದಂತೆ ಯಾವೆಲ್ಲಾ ವ್ಯತ್ಯಾಸಗಳಿವೆ ಎನ್ನುವುದನ್ನು ನಾವಿಂದು ತಿಳಿಸಿಕೊಡಲಿದ್ದೇವೆ. ಇದರಿಂದ ನೀವು, ಈ ಎರಡರಲ್ಲಿ ಯಾವ ಮೊಬೈಲ್ ಉತ್ತಮ, ಯಾವುದನ್ನು ಖರೀದಿಸಬಹುದು ಎನ್ನುವುದನ್ನು ತಿಳಿಯಬಹುದು.

Galaxy A06 vs Galaxy A15: ಜನ ಮೆಚ್ಚಿದ ಫೋನ್‌ಗಳು.. ನಿಮ್ಮ ಆಯ್ಕೆ ಯಾವುದು?

ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಮತ್ತು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ನಡುವಿನ ವ್ಯತ್ಯಾಸ

ಬೆಲೆ: ಈ ಎರಡು ಫೋನ್‌ಗಳ ವೈಶಿಷ್ಟ್ಯಗಳು ಬಹುತೇಕ ಒಂದೇ ಆಗಿದ್ದರೂ, ಬೆಲೆಯಲ್ಲಿ ವ್ಯತ್ಯಾಸವಿದೆ. ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಫೋನನ್ನು 9,999 ರೂ. ಆರಂಭಿಕ ಬೆಲೆಗೆ ಪರಿಚಯಿಸಿದೆ. ನೀವು ಈ ಫೋನಿನ 4GB + 64GB ಸ್ಟೋರೇಜ್‌ ರೂಪಾಂತರವನ್ನು 9,999 ರೂ.ಗೆ ಮತ್ತು 4GB + 128GB ಸ್ಟೋರೇಜ್ ವೇರಿಯಂಟ್‌ ಅನ್ನು 11,499 ರೂ.ಗೆ ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 6GB + 128GB ಸ್ಟೋರೇಜ್ ರೂಪಾಂತರವನ್ನು 7,999 ರೂ.ಗೆ ಬಿಡುಗಡೆ ಮಾಡಲಾಗಿದೆ. 8GB + 128GB ಸ್ಟೋರೇಜ್ ರೂಪಾಂತರವನ್ನು 19,499 ರೂ. ಬೆಲೆಯಲ್ಲಿ ಮತ್ತು 8GB + 256GB ಸ್ಟೋರೇಜ್ ರೂಪಾಂತರವನ್ನು 22,499 ರೂ. ಬೆಲೆಯಲ್ಲಿ ಖರೀದಿಸಬಹುದು.

ಡಿಸ್ಪ್ಲೇ: ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಫೋನ್ 6.7 ಇಂಚಿನ IPS LCD ಡಿಸ್ಪೇಯನ್ನು ಹೊಂದಿದೆ. ಇದು HD + ರೆಸಲ್ಯೂಶನ್‌ನೊಂದಿಗೆ ಬರುತ್ತದೆ. 60Hz ನ ರಿಫ್ರೆಶ್ ದರವನ್ನು ಪಡೆಯಬಹುದು. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನ್ 6.5 ಇಂಚಿನ FHD ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1080x2340 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಬೆಂಬಲಿಸುತ್ತದೆ. ಇದು 190 Hz ರಿಫ್ರೆಶ್ ರೇಟ್ ಮತ್ತು 800 ನಿಟ್‌ಗಳ ಗರಿಷ್ಠ ಬ್ರೈಟ್‌ಸೆಟ್‌ ಹೊಂದಿದೆ.

ಪ್ರೊಸೆಸರ್: ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಫೋನ್ MediaTek Helio G85 ಚಿಪ್‌ಸೆಟ್ ಮತ್ತು Mali-G52 MP2 GPU ಅನ್ನು ಒಳಗೊಂಡಿದೆ. ಇದು 4GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್‌ ಒಳಗೊಂಡಿದೆ. ಇದರಲ್ಲಿ 1TB ವರೆಗೆ ಮೈಕ್ರೊ SD ಕಾರ್ಡ್ ಅನ್ನು ಸೇರಿಸಬಹುದು. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಚಿಪ್‌ಸೆಟ್ ಹೊಂದಿದೆ. ಇದು ಗರಿಷ್ಠ 8G RAM ಅನ್ನು ಪಡೆಯುತ್ತದೆ.

ಕ್ಯಾಮೆರಾ: ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ನೀಡಲಾಗಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಇದು 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ 5 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಇದೆ. ಇದು ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 13 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಫೋನ್ 5,000mAh ಬ್ಯಾಟರಿಯನ್ನು ಹೊಂದಿದೆ. ಇದು 25 ವ್ಯಾಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನ್ 5,000mAh ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಕನೆಕ್ಟಿವಿಟಿ ಆಯ್ಕೆಗಳು: ಕನೆಕ್ಟಿವಿಟಿ ಆಯ್ಕೆಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಫೋನ್ ಬ್ಲೂಟೂತ್ v5.3, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 5G, Wi-Fi, Bluetooth, GPS ಮತ್ತು 3.5mm ಹೆಡ್‌ಫೋನ್ ಜ್ಯಾಕ್ ವೈಶಿಷ್ಟ್ಯಗಳನ್ನು ಹೊಂದಿದೆ.

ಇತರೆ ಫೀಚರ್ಸ್‌: ಈ ಫೋನ್ One UI 6.1 ಆಧಾರಿತ Android 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಮೊಬೈಲ್ ಎರಡು OS ನವೀಕರಣಗಳನ್ನು ಪಡೆಯುತ್ತದೆ ಮತ್ತು 3 ವರ್ಷಗಳವರೆಗೆ ಭದ್ರತಾ ನವೀಕರಣಗಳನ್ನು ಸಹ ಪಡೆಯುತ್ತದೆ. ಇದರಲ್ಲಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ಸಿಸ್ಟಮ್ ಇದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಫೋನ್ Android 13 ಆಧಾರಿತ One UI 5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ನೀವು 5 ವರ್ಷಗಳ ಭದ್ರತಾ ನವೀಕರಣಗಳನ್ನು ಮತ್ತು 4 ವರ್ಷಗಳ OS ನವೀಕರಣಗಳನ್ನು ಪಡೆಯಬಹುದು.

Best Mobiles in India

English summary
Samsung Galaxy A06 vs Samsung Galaxy A15: Price, Features and Specifications Comparison
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+