Samsung: ಸ್ಯಾಮ್‌ಸಂಗ್‌ನ ಈ ಫೋನ್‌ಗಿದೆ ಅತ್ಯುತ್ತಮ ರಿಯಾಯಿತಿ: 128GB ಸ್ಟೋರೇಜ್... ಟ್ರಿಪಲ್ ಕ್ಯಾಮರಾ
ಸ್ಯಾಮ್‌ಸಂಗ್ (Samsung) ಫೋನ್‌ಗಳು ಉತ್ತಮ ಕ್ಯಾಮೆರಾ ಫೀಚರ್ಸ್ ಹಾಗೂ ಉತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿಯಾಗಿವೆ. ಈ ಕಾರಣಕ್ಕೆ ಈ ಫೋನ್‌ಗಳನ್ನು ಗ್ರಾಹಕರು ಹೆಚ್ಚು ಹೆಚ್ಚಾಗಿ ಆಫರ್ ಬೆಲೆಗೆ ಖರೀದಿ ಮಾಡಲು ಮುಂದಾಗುತ್ತಾರೆ. ಅದರಂತೆ ಈಗ ಸ್ಯಾಮ್‌ಸಂಗ್‌ನ ಈ ಫೋನ್‌ಗೆ ಉತ್ತಮ ರಿಯಾಯಿತಿ ನೀಡಲಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ (Samsung Galaxy A14 5G smartphone) ಇದೀಗ ಆಫರ್ ಬೆಲೆಗೆ ಲಭ್ಯ ಇದೆ. ಈ ಸ್ಮಾರ್ಟ್‌ಫೋನ್ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಮೂಲಕ ಸ್ಮಾರ್ಟ್‌ಫೋನ್ ಫೋಟೋಗ್ರಫಿ ಪ್ರಿಯರಿಗೆ ಅತ್ಯುತ್ತಮ ಆಯ್ಕೆ ಆಗಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಇದರ ಆಫರ್ ಬೆಲೆ ಎಷ್ಟು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ ಅನ್ನು ಆಫರ್ ಬೆಲೆಗೆ ಖರೀದಿ ಮಾಡುವ ಮುನ್ನ ಇದರ ಪ್ರಮುಖ ಫೀಚರ್ಸ್ ಬಗ್ಗೆ ತಿಳಿದುಕೊಳ್ಳಿ. ಅದರಂತೆ ಈ ಫೋನ್ 6.6 ಇಂಚಿನ PLS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದು 90Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇದರೊಂದಿಗೆ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದ್ದು, 20:9 ಅನುಪಾತ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಪ್ರೊಸೆಸರ್ ಮಾಹಿತಿ: ಈ ಫೋನ್ ಎಕ್ಸಿನೋಸ್ 1330 (5nm) ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದೆ. ಹಾಗೆಯೇ ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಮಾಡಬಹುದಾಗಿದೆ. ಇದರೊಂದಿಗೆ ಮಾಲಿ-G68 MP2 ಜಿಪಿಯು ಬಲ ಪಡೆದಿದ್ದು, 128GB ಇಂಟರ್ ಸ್ಟೋರೇಜ್ ಹಾಗೂ 8GB RAM ಸ್ಟೋರೇಜ್ ಮೂಲಕ ಉತ್ತಮವಾಗಿ ಕೆಲಸ ಮಾಡಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಕ್ಯಾಮೆರಾ ರಚನೆ: ಇನ್ನು ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದೆ. ಅದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್, 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಆಯ್ಕೆ ಹೊಂದಿದೆ. ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಈ ಸೆನ್ಸರ್‌ಗಳು ಎಲ್‌ಇಡಿ ಫ್ಲ್ಯಾಶ್, ಪನೋರಮಾ, ಎಚ್‌ಡಿಆರ್ ಫೀಚರ್ಸ್ ಅನ್ನು ಪಡೆದುಕೊಂಡಿವೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಬ್ಯಾಟರಿ ಹಾಗೂ ಇತರೆ: 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಇದು 15W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.2, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಎಫ್‌ಎಮ್ ರೇಡಿಯೋ ಆಯ್ಕೆ ಸೇರಿದಂತೆ ಅಗತ್ಯ ಕನೆಕ್ಟಿವಿಟಿ ಸೌಲಭ್ಯ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಆಫರ್ ವಿವರ: ಈ ಫೋನ್ 22,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನಿವೀಗ ಇದನ್ನು 18,999 ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಅಮೆಜಾನ್ 17% ರಿಯಾಯಿತಿ ಘೋಷಣೆ ಮಾಡಿದೆ. ಈ ಮೂಲಕ ನೀವು ಭಾರೀ ಹಣ ಉಳಿತಾಯ ಮಾಡಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಸಹ ಇದ್ದು, ಇನ್ನೂ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬಹುದು.

ಬ್ಯಾಂಕ್ ಆಫರ್ ವಿಚಾರಕ್ಕೆ ಬಂದರೆ 921ರೂ.ಗಳ ಆರಂಭಿಕ ಇಎಮ್‌ಐ ಸಹ ಲಭ್ಯ ಇದ್ದು, ಸ್ಯಾಮ್‌ಸಂಗ್ ಆಕ್ಸಿಸ್ ಸಿಗ್ನೇಚರ್ ಕ್ರೆಡಿಟ್ ಕ್ರೆಡಿಟ್ ಕಾರ್ಡ್ ವ್ಯವಹಾರದ ಮೇಲೆ 2500 ರೂ.ಗಳ ಆಫರ್ ಬೆಲೆ, ಸ್ಯಾಮ್‌ಸಂಗ್ ಆಕ್ಸಿಸ್ ಇನ್ಫಿನೈಟ್ ಕ್ರೆಡಿಟ್ ಕಾರ್ಡ್ ವ್ಯವಹಾರದ ಮೇಲೆ 5000 ರೂ. ವರೆಗೆ ಕ್ಯಾಶ್‌ಬ್ಯಾಕ್, ಒನ್‌ಕಾರ್ಡ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 1200 ರೂ.ಗಳ ತ್ವರಿತ ರಿಯಾಯಿತಿ ಸಿಗಲಿದೆ. ಇಷ್ಟೇ ಅಲ್ಲದೆ ಇನ್ನೂ ಅನೇಕ ಬ್ಯಾಂಕ್ ಆಫರ್ ಲಭ್ಯ ಇದೆ.


Click it and Unblock the Notifications








