ದೀಪಾವಳಿ ಗಿಫ್ಟ್! ಬರ್ತಿದೆ ಹೊಸ Samsung ಫೋನ್.. 20,000ಕ್ಕಿಂತ ಕಡಿಮೆ ಬೆಲೆ!
ಟೆಕ್ ದೈತ್ಯ ಸ್ಯಾಮ್‌ಸಂಗ್ (Samsung) ಶೀಘ್ರದಲ್ಲೇ ಗ್ಯಾಲಕ್ಸಿ 'A' ಸರಣಿಯಲ್ಲಿ ಹೊಸ ಫೋನ್ ಅನ್ನು ಬಿಡುಗಡೆ ಮಾಡಲಿದೆ. ಈ ಮೊಬೈಲ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G (Samsung Galaxy A16 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಕಂಪನಿಯು ಇದರ ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸಿಲ್ಲ. ಆದರೆ, ದೀಪಾವಳಿಗೂ ಮುನ್ನವೇ ಈ ಫೋನ್ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ, ಜಾಗತಿಕ ಮಾರುಕಟ್ಟೆಯಲ್ಲಿ ಈ ಫೋನ್ ಲೋಕಾರ್ಪಣೆಯಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಫೋನನ್ನು 20,000ಕ್ಕಿಂತ ಕಡಿಮೆ ಬೆಲೆಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಫೋನಿನ ಭಾರತೀಯ ರೂಪಾಂತರದ ಪ್ರಮುಖ ವೈಶಿಷ್ಟ್ಯಗಳು ಬಹಿರಂಗವಾಗಿವೆ. ಇದು 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಶನ್ 6300 ಚಿಪ್‌ಸೆಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇರಲಿದೆ. ಜೊತೆಗೆ, 5000mAh ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಹೊಂದಿರಲಿದೆ.

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಬಿಡುಗಡೆ ಯಾವಾಗ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಮೊಬೈಲ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಸ್ಯಾಮ್‌ಸಂಗ್ ಅಧಿಕೃತವಾಗಿ ಬಹಿರಂಗಪಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ದಿನಾಂಕ ಬಹಿರಂಗವಾಗಲಿದೆ. ಸ್ಯಾಮ್‌ಸಂಗ್ ಈ ಸ್ಮಾರ್ಟ್‌ಫೋನ್ ಅನ್ನು ದೀಪಾವಳಿ ಹಬ್ಬಕ್ಕಿಂತ ಮೊದಲು ಮಾರಾಟ ಮಾಡುವ ಸಾಧ್ಯತೆಯಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ನಿರೀಕ್ಷಿತ ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಸ್ಮಾರ್ಟ್‌ಫೋನ್ 4GB RAM, 4GB ವರ್ಚುವಲ್ RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಫೋನ್ ಮೈಕ್ರೊ ಎಸ್‌ಡಿ ಕಾರ್ಡ್ ಸೌಲಭ್ಯವನ್ನೂ ಹೊಂದಿರಲಿದೆ. ಗೋಲ್ಡ್, ಲೈಟ್ ಗ್ರೀನ್ ಮತ್ತು ಬ್ಲೂ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಈ ಫೋನ್ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಫೋನಿನ ಬೆಲೆ 22 ಸಾವಿರ ರೂ. (249 ಯುರೋಗಳು) ಆಗಿದೆ. ಭಾರತೀಯ ಮಾರುಕಟ್ಟೆ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಕಂಪನಿಯು ಭಾರತದಲ್ಲಿ ಈ ಫೋನನ್ನು 20,000 ರೂ.ಗಿಂತ ಕಡಿಮೆ ಬೆಲೆಗೆ ಪರಿಚಯಿಸಬಹುದು ಎಂದು ಹೇಳಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ?: PM Ujjwala Yojana: ದೀಪಾವಳಿಗೆ ಉಚಿತ ಸಿಲಿಂಡರ್! ಅರ್ಜಿ ಸಲ್ಲಿಸುವುದು ಹೇಗೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಮೊಬೈಲ್ 6.7 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿರುವ ಸಾಧ್ಯತೆಯಿದೆ. ಇದು 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 90Hz ರಿಫ್ರೆಶ್ ದರವನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಸ್ಮಾರ್ಟ್‌ಫೋನ್ ಅನ್ನು ಮೀಡಿಯಾ ಟೆಕ್ ಚಿಪ್‌ಸೆಟ್‌ನೊಂದಿಗೆ ಬಿಡುಗಡೆ ಮಾಡಲಿದೆ. ಈ ಫೋನ್‌ನಲ್ಲಿ ಡೈಮೆನ್ಶನ್ 6300 ಚಿಪ್‌ಸೆಟ್ ಇರುವ ಸಾಧ್ಯತೆಯಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಈ ಫೋನನ್ನು Exynos 1330 ಚಿಪ್‌ಸೆಟ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ.
ಕ್ಯಾಮೆರಾ ಸೆಟಪ್
ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಮೊಬೈಲ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿರಲಿದೆ. ಜೊತೆಗೆ, 5 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾಗಳೊಂದಿಗೆ ಬರುತ್ತದೆ. ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ, ಈ ಫೋನ್ 3 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿರಲಿದೆ.
ಬ್ಯಾಟರಿ ಬ್ಯಾಕಪ್
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A16 5G ಅನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಅನಾವರಣಗೊಳಿಸಲಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು. 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ.
ಇತರೆ ವೈಶಿಷ್ಟ್ಯಗಳು
ಮುಂಬರುವ ಸ್ಯಾಮ್‌ಸಂಗ್ ಫೋನ್ ಭದ್ರತೆಗಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿರಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, 4G, ಬ್ಲೂಟೂತ್ 5.3, NFC, GPS, Wi-Fi 5, Wi-Fi ಡೈರೆಕ್ಟ್, IP54 ರೇಟಿಂಗ್ ಅನ್ನು ಹೊಂದಿದೆ.


Click it and Unblock the Notifications








