ಗ್ರಾಹಕರಿಗೆ ಗುಡ್‌ನ್ಯೂಸ್!.ಎಂಟ್ರಿ ಕೊಡಲಿದೆ ಸ್ಯಾಮ್‌ಸಂಗ್‌ನ ಹೊಸ ಬಜೆಟ್ ಸ್ಮಾರ್ಟ್‌ಫೋನ್!

|

ಸ್ಯಾಮ್‌ಸಂಗ್ ಕಂಪನಿಯು ತನ್ನ ಗುಣಮಟ್ಟದ ಉತ್ಪನ್ನಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರ ಎವರ್‌ಗ್ರೀನ್ ಕಂಪನಿ ಎಂದೆನಿಸಿಕೊಂಡಿದೆ. ಕಂಪನಿಯು ಇತ್ತೀಚಿಗೆ ಗ್ಯಾಲ್ಯಾಕ್ಸಿ ಎ ಮತ್ತು ಎಂ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದರ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಇದೀಗ ಕಂಪನಿ ಮತ್ತೆ ಬಜೆಟ್ ಬೆಲೆಯ ನೂತನ ಸ್ಮಾರ್ಟ್‌ಫೋನ್ ಒಂದನ್ನು ಬಿಡುಗಡೆ ಮಾಡಲಿದ್ದು, ಗ್ರಾಹಕರ ಅಚ್ಚರಿಗೆ ಕಾರಣವಾಗಿದೆ.

ಗ್ರಾಹಕರಿಗೆ ಗುಡ್‌ನ್ಯೂಸ್!.ಎಂಟ್ರಿ ಕೊಡಲಿದೆ ಸ್ಯಾಮ್‌ಸಂಗ್‌ನ ಹೊಸ ಬಜೆಟ್ ಫೋನ್!

ಹೌದು, ಸ್ಯಾಮ್‌ಸಂಗ್ ಕಂಪನಿಯು ಗ್ಯಾಲ್ಯಾಕ್ಸಿ A20e ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಪೊಲೆಂಡ್‌ನಲ್ಲಿ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಮಾದರಿಯಲ್ಲಿದ್ದು, ಆದರೆ ಅತ್ಯುತ್ತಮ ಫೀಚರ್ಸ್‌ಗಳನ್ನು ತುಂಬಿಕೊಂಡಿರುವ ಜೊತೆಗೆ ಡ್ಯುಯಲ್ ಕ್ಯಾಮೆರಾಗಳನ್ನು ಹೊಂದಿದ್ದು, ಅವುಗಳು 13ಎಂಪಿ ಮತ್ತು 5ಎಂಪಿ ಸಾಮರ್ಥ್ಯದಲ್ಲಿವೆ. ವೇಗದ ಕಾರ್ಯದಕ್ಷತೆಗೆ ಹೈ ಪವರ್ ಪ್ರೊಸೆಸರ್‌ ಶಕ್ತಿಯನ್ನು ಒದಗಿಸಲಾಗಿದೆ.

ಗ್ರಾಹಕರಿಗೆ ಗುಡ್‌ನ್ಯೂಸ್!.ಎಂಟ್ರಿ ಕೊಡಲಿದೆ ಸ್ಯಾಮ್‌ಸಂಗ್‌ನ ಹೊಸ ಬಜೆಟ್ ಫೋನ್!

ರೇರ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಆಯ್ಕೆಗಳು ಸೇರಿದಂತೆ ಹಲವು ಅತ್ಯುತ್ತಮ ಆಯ್ಕೆಗಳನ್ನು ಹೊಂದಿದೆ. ಆಂಡ್ರಾಯ್ಡ್‌ ಪೈ 9.0 ಆಪರೇಟಿಂಗ್ ಸಿಸ್ಟಮ್ ಇದರಲ್ಲಿದ್ದು, ಫೋನಿನ ಕಾರ್ಯನಿರ್ವಹಣೆಯ ವೇಗಕ್ಕೆ ಬಲ ತುಂಬಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲ್ಯಾಕ್ಸಿ A20e ಸ್ಮಾರ್ಟ್‌ಫೋನ್‌ ಇತರೆ ಏನೆಲ್ಲಾ ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

720x1560 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5.8 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, TFT ಇನ್‌ಫಿನಿಟಿ ವಿ ಡಿಸ್‌ಪ್ಲೇ ಪ್ಯಾನಲ್ ಹೊಂದಿದೆ. ಬಾಹ್ಯ ರಚನೆ ಮತ್ತು ಡಿಸ್‌ಪ್ಲೇಯ ನಡುವಿನ ಅನುಪಾತವು 19.5:9 ಆಗಿದ್ದು, ಸ್ಕ್ರೀನಿನ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 296 ppi ಆಗಿದೆ.

ಪ್ರೊಸೆಸರ್

ಪ್ರೊಸೆಸರ್

ಗ್ಯಾಲ್ಯಾಕ್ಸಿ A20e ಸ್ಮಾರ್ಟ್‌ಫೋನ್ ಆಕ್ಟಾಕೋರ್ Exynos 7884 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಇದರೊಂದಿಗೆ 3GB RAM ಮತ್ತು 32GB ಆಂತರಿಕ ಸಂಗ್ರಹ ಸ್ಥಳಾವಕಾಶ ಒದಗಿಸಲಾಗಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹ ಸ್ಥಳಾವಕಾಶವನ್ನು ಹೆಚ್ಚಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನಿನಲ್ಲಿ ಡ್ಯುಯಲ್ ಕ್ಯಾಮೆರಾ ಒದಗಿಸಲಾಗಿದ್ದು, ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸಾಮರ್ಥ್ಯಯೊಂದಿಗೆ f/1.9, 28mm ಲೆನ್ಸ್‌ ಅನ್ನು ಹೊಂದಿದೆ. ಇನ್ನೂ ಸೆಕೆಂಡರಿ ಕ್ಯಾಮೆರಾವು 5ಎಂಪಿ ಸಾಮರ್ಥ್ಯದಲ್ಲಿದ್ದು, f/2.2, 12mm ಅಲ್ಟ್ರಾವೈಡ್‌ ಲೆನ್ಸ್‌ ಹೊಂದಿದೆ. ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾ ನೀಡಲಾಗಿದ್ದು, f/2.0 ಲೆನ್ಸ್‌ ನೀಡಲಾಗಿದೆ.

ಬ್ಯಾಟರಿ

ಬ್ಯಾಟರಿ

3,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದ್ದು, ಸುಮಾರು ಒಂದು ದಿನದ ವರೆಗೂ ಬಾಳಿಕೆ ಬರುವ ಶಕ್ತಿಯನ್ನು ಹೊಂದಿದೆ. ಇದರೊಂದಿಗೆ 15w ಸಾಮರ್ಥ್ಯದ ಫಾಸ್ಟ್ ಚಾರ್ಜರ್ ತಂತ್ರಜ್ಞಾನದ ಸೌಲಭ್ಯವನ್ನು ಸಹ ನೀಡಲಾಗಿದ್ದು, ಸ್ಮಾರ್ಟ್‌ಫೋನ್‌ ವೇಗವಾಗಿ ಚಾರ್ಜ್‌ ಪಡೆದುಕೊಳ್ಳಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಗ್ಯಾಲ್ಯಾಕ್ಸಿ A20e ಸ್ಮಾರ್ಟ್‌ಫೋನ್ ಪೊಲೆಂಡ್‌ನಲ್ಲಿ ಪ್ರದರ್ಶನ ಮಾಡಲಾಗಿದ್ದು, ಇತ್ತೀಚಿಗೆ ಬಿಡುಗಡೆ ಆಗಿರುವ ಗ್ಯಾಲ್ಯಾಕ್ಸಿ A20 ಮಾದರಿಯ ಕೆಳಹಂತದ ಸ್ಮಾರ್ಟ್‌ಫೋನ್‌ ಆಗಿದೆ. ಈ ಫೋನಿನ ಬೆಲೆ ಮತ್ತು ಲಭ್ಯತೆಯ ಬಗ್ಗೆ ಕಂಪನಿಯು ಅಧಿಕೃತ ಮಾಹಿತಿ ತಿಳಿಸಿಲ್ಲ. ಆದರೆ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ ಎನ್ನಲಾಗುತ್ತಿದೆ.

ಓದಿರಿ : ಕೇವಲ 17 ನಿಮಿಷದಲ್ಲಿ ಸ್ಮಾರ್ಟ್‌ಫೋನ್ ಬ್ಯಾಟರಿ ಫುಲ್!..ಶಿಯೋಮಿಯ ಅಚ್ಚರಿಯ ನಡೆ!ಓದಿರಿ : ಕೇವಲ 17 ನಿಮಿಷದಲ್ಲಿ ಸ್ಮಾರ್ಟ್‌ಫೋನ್ ಬ್ಯಾಟರಿ ಫುಲ್!..ಶಿಯೋಮಿಯ ಅಚ್ಚರಿಯ ನಡೆ!

ಮತ್ತೆ ಕುತೂಹಲ ಮೂಡಿಸಿದ ಶಿಯೋಮಿ!..ಶೀಘ್ರದಲ್ಲೇ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌!

ಮತ್ತೆ ಕುತೂಹಲ ಮೂಡಿಸಿದ ಶಿಯೋಮಿ!..ಶೀಘ್ರದಲ್ಲೇ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌!

ಶಿಯೋಮಿ ಇತ್ತೀಚಿಗೆ 'ರೆಡ್ಮಿ ನೋಟ್‌ 7' ಮತ್ತು 'ನೋಟ್‌ 7 ಪ್ರೋ' ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಸದ್ಯ ಟ್ರೆಂಡಿಂಗ್‌ನಲ್ಲಿದ್ದು, ಇದೀಗ ಮತ್ತೆ ಗ್ರಾಹಕರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ನೂತನ ಫೀಚರ್ಸ್‌ಗಳನ್ನು ಒಳಗೊಂಡಿರುವ ಮೀಡ್‌ ರೇಂಜ್‌ ಸ್ಮಾರ್ಟ್‌ಫೋನ್‌ ಒಂದನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದು, ಮೊಬೈಲ್‌ ಮಾರುಕಟ್ಟೆಯಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಹೌದು, ಶಿಯೋಮಿ ಸಂಸ್ಥೆಯು 'ಶಿಯೋಮಿ ಎಕ್ಸ್9' ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್‌ ಮಾಡಲಿದ್ದು, ಇದೇ ಏಪ್ರಿಲ್ ತಿಂಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಎಂದು ಹೇಳಲಾಗುತ್ತಿದೆ. ಗ್ರೇಡಿಯಂಟ್ ಕಲರ್‌ ಲುಕ್‌ ಹೊಂದಿರಲಿರುವ ಈ ಸ್ಮಾರ್ಟ್‌ಫೋನಿನ ಪ್ರಮುಖ ಕ್ಯಾಮೆರಾವು 'ಸೋನಿಯ IMX586 ಸೆನ್ಸಾರ್‌'ನೊಂದಿಗೆ, 48 ಮೆಗಾಪಿಕ್ಸಲ್‌ ಸಾಮರ್ಥ್ಯದಲ್ಲಿ ಇರಲಿದೆ ಎನ್ನಲಾಗುತ್ತಿದೆ.

ಸ್ನ್ಯಾಪ್‌ಡ್ರಾಗನ್‌ 675 SoC ಪ್ರೊಸೆಸರ್‌ ಹೊಂದಿರಲಿದ್ದು, ಸ್ಮಾರ್ಟ್‌ಫೋನ್‌ ವೇಗವಾಗಿ ಕಾರ್ಯನಿರ್ವಹಿಸಲು ನೆರವಾಗಲಿದೆ. ಡಿಸ್‌ಪ್ಲೇಯಲ್ಲಿ ಫಿಂಗರ್ ಸೆನ್ಸಾರ್‌ ಜೊತೆಗೆ ವಾಟರ್‌ಡ್ರಾಪ್‌ ನಾಚ್‌ ಡಿಸೈನ್‌ ಹೊಂದಿರಲಿದ್ದು, ಡಿಸ್‌ಪ್ಲೇಯ ರಕ್ಷಣೆಗೆ 2.5D ಗೊರಿಲ್ಲಾ ಗ್ಲಾಸ್‌ ಒದಗಿಸಲಾಗಿದೆ. ಹಾಗಾದರೇ ಶಿಯೋಮಿ ಎಕ್ಸ್‌9 ಸ್ಮಾರ್ಟ್‌ಫೋನ್‌ ಇತರೆ ಏನೆಲ್ಲಾ ವಿಶೇಷ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ನೋಡೋಣ ಬನ್ನಿರಿ.

ಡಿಸೈನ್‌

ಡಿಸೈನ್‌

ಅತೀ ತಿಳುವಾದ ಅಂಚಿನ ರಚನೆಯನ್ನು ಹೊಂದಿರಲಿರುವ ಈ ಸ್ಮಾರ್ಟ್‌ಫೋನ್‌ ಬಾಹ್ಯದಲ್ಲಿ ಹಾಲೋಗ್ರಾಫಿಕ್ ಬಣ್ಣವನ್ನು ಹೊಂದಿರಲಿದೆ. ವಿಶಾಲವಾದ ಡಿಸ್‌ಪ್ಲೇ ಇರಲಿದ್ದು, ಡಿಸ್‌ಪ್ಲೇಯಲ್ಲಿ ಫಿಂಗರ್‌ ಸೆನ್ಸಾರ್‌ ಸೌಲಭ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್‌ ನಾಚ್‌ ಡಿಸ್‌ಪ್ಲೇಯ ಸೌಂದರ್ಯವನ್ನು ಹೆಚ್ಚಿಸಿದೆ.

ಡಿಸ್‌ಪ್ಲೇ

ಡಿಸ್‌ಪ್ಲೇ

ಶಿಯೋಮಿ ಎಕ್ಸ್‌9 ಸ್ಮಾರ್ಟ್‌ಫೋನ್‌ 1080 ಪಿಕ್ಸಲ್‌ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.4 ಇಂಚಿನ ಫುಲ್‌ ಹೆಚ್‌ಡಿ AMOLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಸ್ಮಾರ್ಟ್‌ಫೋನಿನ ಬಾಹ್ಯ ಬಾಡಿ ಮತ್ತು ಡಿಸ್‌ಪ್ಲೇ ನಡುವಿನ ಅನುಪಾತವು 19.5:9 ಆಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಸ್ನ್ಯಾಪ್‌ಡ್ರಾಗನ್‌ 675 SoC ಸಾಮರ್ಥ್ಯದ ಪ್ರೊಸೆಸರ್‌ ಅನ್ನು ಹೊಂದಿರಲಿದ್ದು, ಅಂಡ್ರಾಯ್ಡ್‌ 9 ಅಪ್‌ಗ್ರೇಡ್‌ ಅಪರೇಟಿಂಗ್ ಸಿಸ್ಟಮ್ ಇರಲಿದೆ. ಸ್ಮಾರ್ಟ್‌ಫೋನ್‌ ಕಾರ್ಯವೈಖರಿಯನ್ನು ಬೆಂಬಲಿಸಲಿದ್ದು, ಇದರೊಂದಿಗೆ 6GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎನ್ನಲಾಗುತ್ತಿದೆ.

ಕ್ಯಾಮೆರಾ

ಕ್ಯಾಮೆರಾ

ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾಗಳನ್ನು ಹೊಂದಿರಲಿದ್ದು, ಪ್ರಮುಖ ರೇರ್ ಕ್ಯಾಮೆರಾ 48ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿರಲಿದ್ದು, ಜೊತೆಗೆ ಸೋನಿಯ IMX586 ಸೆನ್ಸಾರ್‌ ಹೊಂದಿದೆ. ಹಾಗೇ ಇನ್ನುಳಿದ ಎರಡು ಕ್ಯಾಮೆರಾಗಳು 8ಮೆಗಾಪಿಕ್ಸಲ್ ಮತ್ತು 13 ಮೆಗಾಪಿಕ್ಸಲ್‌ ಸಾಮರ್ಥ್ಯದಲ್ಲಿರಲಿವೆ.

ಸೆಲ್ಫಿ ಕ್ಯಾಮೆರಾ

ಸೆಲ್ಫಿ ಕ್ಯಾಮೆರಾ

ಶಿಯೋಮಿ ಸೆಲ್ಫಿಗಾಗಿ 32ಮೆಗಾಪಿಕ್ಸಲ್‌ ಸಾಮರ್ಥ್ಯದ ಕ್ಯಾಮೆರಾವನ್ನು ನೀಡಲಾಗಿದ್ದು, ಸೆಲ್ಫಿ ಕ್ಯಾಮೆರಾವು ಸ್ಯಾಮ್‌ಸಂಗ್‌ (GD1) ಶೂಟರ್‌ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಸೆಲ್ಫಿ ಪ್ರಿಯರನ್ನು ಸೆಳೆಯಲಿದೆ.

ಬ್ಯಾಟರಿ

ಬ್ಯಾಟರಿ

3300mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಶಕ್ತಿಯನ್ನು ಈ ಬ್ಯಾಟರಿ ಹೊಂದಿರಲಿದೆ. ಇದರೊಂದಿಗೆ 18W ಫಾಸ್ಟ್‌ ಚಾರ್ಜರ್‌ (Quick Charge 4+) ಸೌಲಭ್ಯವನ್ನು ನೀಡಲಾಗಿದ್ದು, ವೇಗವಾಗಿ ಸ್ಮಾರ್ಟ್‌ಫೋನ್‌ ಬ್ಯಾಟರಿ ಚಾರ್ಜ್‌ ಪಡೆದುಕೊಳ್ಳುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇದೇ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದ್ದು, ಆದರೆ ಭಾರತೀಯ ಮಾರುಕಟ್ಟೆಗೆ ಯಾವಾಗ ಎಂಡ್ರಿ ಕೊಡಲಿದೆ ಎಂಬುದರ ಬಗ್ಗೆ ಕಂಪನಿ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಚೀನಾದಲ್ಲಿ ಈ ಸ್ಮಾರ್ಟ್‌ಫೋನ್‌ ಬೆಲೆಯು 1,699 Yuan ಇರಲಿದ್ದು, ದೇಶಿಯ ಮಾರುಕಟ್ಟೆಯಲ್ಲಿ 17,400ರೂ.ಗಳು ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ.

Best Mobiles in India

English summary
Samsung Galaxy A20e With 5.8-Inch Display, Dual Rear Cameras Launched.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X