Samsung Galaxy A26 5G ಬೆಲೆ ಬಹಿರಂಗ; ಕ್ಯಾಮೆರಾ, ಬ್ಯಾಟರಿ, ಡಿಸ್ಪ್ಲೇ ಸೂಪರ್.. ದರ ಎಷ್ಟು ಗೊತ್ತಾ?
ಸ್ಯಾಮ್‌ಸಂಗ್ ಇತ್ತೀಚೆಗೆ ನಾಲ್ಕು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು Galaxy 'A' ಸರಣಿಯ ಅಡಿಯಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A06 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಸ್ಮಾರ್ಟ್‌ಫೋನ್‌ಗಳನ್ನು ಇದೇ ತಿಂಗಳಲ್ಲಿ (ಮಾರ್ಚ್) ಲಾಂಚ್ ಮಾಡಿದೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A26 ಹೊರತುಪಡಿಸಿ ಎಲ್ಲಾ ಮೊಬೈಲ್‌ಗಳು ಭಾರತೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಇದೀಗ, ಈ ಫೋನಿನ ಬೆಲೆ ಸಹ ಬಹಿರಂಗವಾಗಿದೆ.
ಪ್ರಸ್ತುತ, ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G (Samsung Galaxy A26 5G) ಮೊಬೈಲ್‌ನ ಭಾರತದ ಬೆಲೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇದು ಶೀಘ್ರದಲ್ಲೇ ದೇಶೀಯ ಮಾರುಕಟ್ಟೆಗೆ ಬರುವ ಬಗ್ಗೆ ಸುಳಿವು ನೀಡಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A26 ಮೊಬೈಲ್ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಕಪ್ಪು, ಪುದೀನ, ಪೀಚ್ ಪಿಂಕ್ ಮತ್ತು ಬಿಳಿ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದು ನೀರು ಮತ್ತು ಧೂಳಿನಿಂದ ರಕ್ಷಣೆಗೆ IP67 ರೇಟಿಂಗ್ ಪಡೆದಿದೆ. ಬನ್ನಿ, ಈ ಫೋನ್ ಯಾವ ಬೆಲೆಗೆ ಲಭ್ಯವಾಗಬಹುದು ಎನ್ನುವುದನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 x 2,340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ.
ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನ್ ಕಂಪನಿಯ ಎಕ್ಸಿನೋಸ್ 1380 ಪ್ರೊಸೆಸರ್ ಹೊಂದಿದೆ. ಇದನ್ನು 5 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಮಾಲಿ 568 ಎಂಪಿ5 ಜಿಪಿಯು ಸಹ ಲಭ್ಯವಿದೆ. ಈ ಸ್ಯಾಮ್‌ಸಂಗ್ ಫೋನ್ 8GB RAM + 128GB ಮತ್ತು 8GB RAM + 256GB ಸ್ಟೋರೇಜ್ ಹೊಂದಿದೆ.
ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ಸೂಪರ್ ಬ್ಯಾಟರಿ ಬಾಳಿಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಸ್ಯಾಮ್‌ಸಂಗ್ ನಾಕ್ಸ್, ಯುಎಸ್‌ಬಿ ಟೈಪ್ ಸಿ ಆಡಿಯೋ ಮತ್ತು ಸ್ಟೀರಿಯೊ ಸ್ಪೀಕರ್‌ಗಳು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಇದು 5GHz ವೈ-ಫೈ, ಬ್ಲೂಟೂತ್ 5.3 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಬೆಲೆ (ಸೋರಿಕೆ)
8GB RAM + 128GB ಸ್ಟೋರೇಜ್ = 24,999 ರೂ.
8GB RAM + 256GB ಸ್ಟೋರೇಜ್ = 27,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಬೆಲೆ ಕುರಿತು ಟಿಪ್‌ಸ್ಟರ್ ಅಭಿಷೇಕ್ ಯಾದವ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ವರದಿಯ ಪ್ರಕಾರ, ಈ ಗ್ಯಾಲಕ್ಸಿ ಸ್ಮಾರ್ಟ್‌ಫೋನ್ 8GB RAM + 128GB ಮತ್ತು 8GB RAM + 256GB ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಎರಡೂ ರೂಪಾಂತರಗಳು ಕ್ರಮವಾಗಿ 24,999 ಮತ್ತು 27,999 ರೂ.ಗೆ ಮಾರಾಟವಾಗಲಿವೆ


Click it and Unblock the Notifications








