ಸ್ಟೈಲಿಶ್ ಲುಕ್, ಸೂಪರ್ ಫೀಚರ್ಸ್: ಹೊಸ ರೂಪದಲ್ಲಿ Samsung ಹಂಟರ್ ಎಂಟ್ರಿ.. ಕೈಗೆಟುಕುವ ಬೆಲೆ.. ಹೇಗಿದೆ ಗೊತ್ತಾ?
ಸ್ಯಾಮ್‌ಸಂಗ್ ಕಂಪನಿಯು ಗ್ರಾಹಕರನ್ನು ಸೆಳೆಯಲು ಹೊಸ ಹೆಜ್ಜೆ ಇಟ್ಟಿದೆ. ಸದ್ದಿಲ್ಲದೆ, ತನ್ನ Galaxy 'A' ಸರಣಿಯ ಜನಪ್ರಿಯ ಫೋನಿನ ಹೊಸ ರೂಪಾಂತರವನ್ನು ಬಿಡುಗಡೆ ಮಾಡಿದೆ. ಹೌದು, ಜನರ ಮೆಚ್ಚುಗೆ ಪಡೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G (Samsung Galaxy A26 5G) ಫೋನಿನ ಹೊಸ ರೂಪಾಂತರವು ಭಾರತೀಯ ಮಾರುಕಟ್ಟೆಗೆ ಬಂದಿದೆ. ಈ ಹೊಸ ಮಾದರಿಯು 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಸ್ಯಾಮ್‌ಸಂಗ್ ಇದನ್ನು ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಬನ್ನಿ, ತಡ ಮಾಡದೇ ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಮಾರಾಟವಾಗುತ್ತಿತ್ತು. ಇದೀಗ, ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 1380 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಹಾಗೆಯಾ 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್, 8GB RAM + 256GB ಸ್ಟೋರೇಜ್ ಸೇರಿದಂತೆ ಮುಂತಾದ ವೈಶಿಷ್ಟ್ಯಗಳಿವೆ.

ಭಾರತದಲ್ಲಿ ಮೂರು ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಈಗಾಗಲೇ ಭಾರತದಲ್ಲಿ ಮೂರು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ತನ್ನ Galaxy 'A' ಸರಣಿಯನ್ನು ವಿಸ್ತರಿಸಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G (Samsung Galaxy A56 5G), ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G (Samsung Galaxy A36 5G) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G (Samsung Galaxy A26 5G) ಮೊಬೈಲ್‌ಗಳು ಗ್ರಾಹಕರ ಗಮನ ಸೆಳೆದಿವೆ. ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ A26 ಫೋನಿನ ಹೊಸ ರೂಪಾಂತರವು ಮಾರುಕಟ್ಟೆಗೆ ಬಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಬೆಲೆ
6GB RAM + 128GB ಸ್ಟೋರೇಜ್ = 23,499 ರೂ.
8GB RAM + 128GB ಸ್ಟೋರೇಜ್ = 24,999 ರೂ.
8GB RAM + 256GB ಸ್ಟೋರೇಜ್ = 27,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನಿನ ಹೊಸ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 23,499 ರೂ. ಆಗಿದೆ. ಇದು ಕಂಪನಿಯ ಅಧಿಕೃತ ವೆಬ್‌ಸೈಟ್, ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್ ಅವೆಸ್ಯೂಮ್ ಪೀಚ್, ಅವೆಸ್ಯೂಮ್ ಮಿಂಟ್, ಅವೆಸ್ಯೂಮ್ ವೈಟ್ ಮತ್ತು ಅವೆಸ್ಯೂಮ್ ಬ್ಲ್ಯಾಕ್ ಬಣ್ಣಗಳಲ್ಲಿ ಬರುತ್ತದೆ. ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಈ ಫೋನನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ವೈಶಿಷ್ಟ್ಯಗಳು
ಡಿಸ್ಪ್ಲೇ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಸ್ಮಾರ್ಟ್‌ಫೋನ್ 6.7 ಇಂಚಿನ ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಮತ್ತು ಕಾರ್ಯಕ್ಷಮತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನ್ ಕಂಪನಿಯ ಎಕ್ಸಿನೋಸ್ 1380 ಪ್ರೊಸೆಸರ್ ಹೊಂದಿದೆ. ಇದು 5 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾದ ಆಕ್ಟಾ-ಕೋರ್ ಪ್ರೊಸೆಸರ್ ಆಗಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ-568 MP5 ಜಿಪಿಯು ಸಹ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ಓಎಸ್ ಜೊತೆಗೆ ಕೆಲಸ ಮಾಡುತ್ತದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಸ್ಮಾರ್ಟ್‌ಫೋನ್ ,5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಬ್ಯಾಟರಿ ಒಂದು ದಿನಕ್ಕಿಂತ ಹೆಚ್ಚು ಕಾಲ ಬ್ಯಾಕಪ್ ನೀಡಲಿದೆ.
ಇತರೆ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಇದು ನೀರು ಮತ್ತು ಧೂಳಿನಿಂದ ರಕ್ಷಣೆಗೆ IP67 ರೇಟಿಂಗ್ ಪಡೆದಿದೆ. ಈ ಫೋನ್ ಡಾಲ್ಬಿ ಅಟ್ಮಾಸ್, ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಮತ್ತು ಸ್ಯಾಮ್‌ಸಂಗ್ ನಾಕ್ಸ್ ಸಹ ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಇದು 5GHz ವೈ-ಫೈ, ಬ್ಲೂಟೂತ್ 5.3 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








