Home
ಮೊಬೈಲ್

ಕಮ್ಮಿ ಬೆಲೆಗೆ Samsung 5G ಫೋನ್ ಲಾಂಚ್; ಮೂರು ಸೊಗಸಾದ ಕ್ಯಾಮೆರಾ.. ಬಿಗ್ ಸ್ಟೋರೇಜ್.. ಸೇಲ್ ಯಾವಾಗ?

ಸ್ಯಾಮ್‌ಸಂಗ್ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ತನ್ನ 'Galaxy A' ಸರಣಿಯನ್ನು ವಿಸ್ತರಿಸಿದೆ. ಇವುಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G (Samsung Galaxy A56 5G), ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G (Samsung Galaxy A36 5G) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G (Samsung Galaxy A26 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A26 ಮೊಬೈಲ್ ಗ್ರಾಹಕರ ಗಮನ ಸೆಳೆದಿದೆ. ಈ ಹೊಸ ಸ್ಯಾಮ್‌ಸಂಗ್ 5G ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನ್‌ ಸೊಗಸಾದ ಲುಕ್ ಮತ್ತು ಉತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಮತ್ತು 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 1380 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 8GB RAM + 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಭಾರತದಲ್ಲಿ Samsung Galaxy A26 ಲಾಂಚ್; ಬಜೆಟ್ ಬೆಲೆ, ವಿಶೇಷತೆಗಳೇನು?

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಮೊಬೈಲ್ ಬಜೆಟ್ ಸ್ನೇಹಿಯಾಗಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 27,100 ರೂ. ಬೆಲೆಯೊಂದಿಗೆ ಪ್ರಾರಂಭವಾಗುತ್ತದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 33,500 ರೂ. ಆಗಿದೆ. ಈ ಫೋನ್ ಕಪ್ಪು, ಪುದೀನ, ಪೀಚ್ ಪಿಂಕ್ ಮತ್ತು ಬಿಳಿ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್‌ 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಸಹ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಮೊಬೈಲ್ ಎಕ್ಸಿನೋಸ್ 1380 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 5 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಈ ಫೋನಿನಲ್ಲಿ ಮಾಲಿ 568 ಎಂಪಿ5 ಜಿಪಿಯು ಸಹ ಲಭ್ಯವಿದೆ. ಈ ಸ್ಯಾಮ್‌ಸಂಗ್ 5G ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ಓಎಸ್‌ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಇದು 6ನೇ ತಲೆಮಾರಿನ ಓಎಸ್ ಅಪ್‌ಗ್ರೇಡ್ ಮತ್ತು 6 ವರ್ಷಗಳ ಭದ್ರತಾ ನವೀಕರಣಗಳನ್ನು ಸಹ ಪಡೆಯುತ್ತದೆ.

ಸ್ಟೋರೇಜ್ ಆಯ್ಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಸ್ಮಾರ್ಟ್‌ಫೋನ್ ಮೂರು RAM ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ 6GB RAM ರೂಪಾಂತರವು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಹಾಗೆಯೇ 8GB RAM + 128GB ಮತ್ತು 256GB ಸ್ಟೋರೇಜ್‌ನೊಂದಿಗೆ ಬರುತ್ತದೆ. ಟಾಪ್ ವೇರಿಯಂಟ್ 8GB RAM + 256GB ಸ್ಟೋರೇಜ್‌ ಆಯ್ಕೆ ಹೊಂದಿದೆ.

ಭಾರತದಲ್ಲಿ Samsung Galaxy A26 ಲಾಂಚ್; ಬಜೆಟ್ ಬೆಲೆ, ವಿಶೇಷತೆಗಳೇನು?

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP67 ರೇಟಿಂಗ್ ಪಡೆದಿದೆ. ಈ 5G ಫೋನಿನಲ್ಲಿ ಸ್ಯಾಮ್‌ಸಂಗ್ ನಾಕ್ಸ್, ಯುಎಸ್‌ಬಿ ಟೈಪ್ ಸಿ ಆಡಿಯೋ ಮತ್ತು ಸ್ಟೀರಿಯೊ ಸ್ಪೀಕರ್‌ಗಳು ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಇದು 5GHz ವೈ-ಫೈ, ಬ್ಲೂಟೂತ್ 5.3 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy A26 5G with Samsung Exynos 1380 Launched in India: know Price Features and Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+