ಭಾರತದಲ್ಲಿ Samsung Galaxy A36 5G ಲಾಂಚ್; ಕ್ಯಾಮೆರಾ, ಬ್ಯಾಟರಿ ಎಲ್ಲಾ ಸೂಪರ್.. ಬೆಲೆ ಎಷ್ಟು ಗೊತ್ತಾ?
ಟೆಕ್ ದೈತ್ಯ ಸ್ಯಾಮ್‌ಸಂಗ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G (Samsung Galaxy A56 5G) ಫೋನಿನ ಜೊತೆಗೆ ಮತ್ತೊಂದು ಫೋನನ್ನು ಬಿಡುಗಡೆ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G (Samsung Galaxy A36 5G) ಹೆಸರಿನೊಂದಿಗೆ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದು ಮಧ್ಯಮ ಬಜೆಟ್‌ನ ಸ್ಯಾಮ್‌ಸಂಗ್ 5G ಫೋನ್ ಆಗಿದೆ. ಬನ್ನಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 3 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೆ 5000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಒಳಗೊಂಡಿದೆ. ಜೊತೆಗೆ 12GB RAM + 256GB ಸ್ಟೋರೇಜ್, 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನ್ 6GB RAM + 128GB ಸ್ಟೋರೇಜ್, 8GB RAM + 128GB ಸ್ಟೋರೇಜ್ ಮತ್ತು 12GB RAM + 256GB ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ ಆರಂಭಿಕ ಬೆಲೆ 35,000 ರೂ. ಆಗಿದೆ. ಈ ಸ್ಯಾಮ್‌ಸಂಗ್ 5G ಅವೆಸ್ಯೂಮ್ ಲ್ಯಾವೆಂಡರ್, ಅವೆಸ್ಯೂಮ್ ಬ್ಲಾಕ್, ಅವೆಸ್ಯೂಮ್ ವೈಟ್ ಮತ್ತು ಅವೆಸ್ಯೂಮ್ ಲೈಮ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 1080 x 2340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಸಹ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಸ್ಯಾಮ್‌ಸಂಗ್ 5G ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಫೋನಿನಲ್ಲಿ ಅಡ್ರಿನೊ 710 ಜಿಪಿಯು ಸಹ ಲಭ್ಯವಿದೆ.

ಸ್ಟೋರೇಜ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಸ್ಮಾರ್ಟ್‌ಫೋನ್ ಮೂರು RAM ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ 6GB RAM ರೂಪಾಂತರವು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಹಾಗೆಯೇ 8GB RAM + 128GB ಮತ್ತು 256GB ಸ್ಟೋರೇಜ್‌ನೊಂದಿಗೆ ಬರುತ್ತದೆ. ಟಾಪ್ ವೇರಿಯಂಟ್ 12GB RAM + 256GB ಸ್ಟೋರೇಜ್ ಆಯ್ಕೆ ಹೊಂದಿದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಸ್ಮಾರ್ಟ್‌ಫೋನ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಒಳಗೊಂಡಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನನ್ನು ಪೂರ್ಣ ಚಾರ್ಜ್ ಬಳಿಕ 29 ಗಂಟೆಗಳವರೆಗೆ ಬಳಸಬಹುದು. ಈ 5GHz ವೈ-ಫೈ, ಬ್ಲೂಟೂತ್ 5.3, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಆಡಿಯೋ ಮತ್ತು ಸ್ಟೀರಿಯೊ ಸ್ಪೀಕರ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








