ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಫಸ್ಟ್‌ ಲುಕ್: ಬೆಸ್ಟ್‌ ಮೀಡ್‌ರೇಂಜ್ ಫೋನ್!

|

ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಭಾರತೀಯ ಮಾರುಕಟ್ಟೆಗೆ ಹೊಸದಾಗಿ ಗ್ಯಾಲಕ್ಸಿ A51 ಫೋನ್ ಬಿಡುಗಡೆ ಮಾಡಿದೆ. ಈ ಫೋನ್ ಸ್ಮಾರ್ಟ್‌ಫೋನ್ 48ಎಂಪಿ ಕ್ಯಾಮೆರಾ, ಫಿಂಗರ್‌ಪ್ರಿಂಟ್ ಸೆನ್ಸಾರ್, 4,000mAh ಬ್ಯಾಟರಿ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ.

ಸ್ಯಾಮಸಂಗ್ ಗ್ಯಾಲಕ್ಸಿ A51

ಸದ್ಯ ಸ್ಯಾಮಸಂಗ್ ಗ್ಯಾಲಕ್ಸಿ A51 ಸ್ಮಾರ್ಟ್‌ಫೋನ್ ಪ್ರಮುಖ ಇ-ಕಾಮರ್ಸ್‌ ತಾಣಗಳಲ್ಲಿ, ಅಧಿಕೃತ ಸ್ಯಾಮ್‌ಸಂಗ್ ತಾಣದಲ್ಲಿ, ಸ್ಯಾಮ್ಸಂಗ್ ಓಪೆರಾ ಹೌಸ್‌ ಹಾಗೂ ಆಫ್‌ಲೈನ್ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯಲಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 23,999ರೂ. ಆಗಿದ್ದು, ಬ್ಲ್ಯಾಕ್‌, ವೈಟ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ ಹೊಂದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳೆ ಕಾರ್ಯವೈಖರಿ ಏನು ಎನ್ನುವುದನ್ನು ಮುಂದೆ ತಿಳಿಯೋಣ.

ಆಕರ್ಷಕ ಡಿಸ್‌ಪ್ಲೇ ಮತ್ತು ಡಿಸೈನ್

ಆಕರ್ಷಕ ಡಿಸ್‌ಪ್ಲೇ ಮತ್ತು ಡಿಸೈನ್

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಪ್ರಖರತೆ ಉತ್ತಮವಾಗಿದೆ. ಡಿಸ್‌ಪ್ಲೇಯು ಸೂಪರ್ AMOLED ಇನ್‌ಫಿನಿಟಿ-O ಮಾದರಿಯಲ್ಲಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಡಿಸ್‌ಪ್ಲೇಯಲ್ಲಿಯೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ. ತನ್ನ ವರ್ಗದ ಫೋನ್‌ಗಳಿಗೆ ಪೈಫೋಟಿ ನೀಡುವ ಅಂಶಗಳನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ ಹೇಗಿದೆ

ಪ್ರೊಸೆಸರ್ ಕಾರ್ಯ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ 2.3GHz ವೇಗದಲ್ಲಿ Exynos 9611 ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ವೇಗದ ಪ್ರೊಸೆಸರ್ ಮಲ್ಟಿಟಾಸ್ಕ್ ಕೆಲಸಗಳನ್ನು ನಿಭಾಯಿಸಬಲ್ಲದು. ಇನ್ನು ಈ ಫೋನ್ 4GB RAM + 128GB ಮತ್ತು 8GB RAM+128GB ಆಯ್ಕೆಯ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಕ್ಯಾಮೆರಾ ವಿಶೇಷತೆ ಏನು

ಕ್ಯಾಮೆರಾ ವಿಶೇಷತೆ ಏನು

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಹೊಂದಿದ್ದು, ಗುಣಮಟ್ಟದ ಫೋಟೊ ಮೂಡಿಬರಲು ನೆರವಾಗಲಿದೆ. ಉಳಿದಂತೆ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್ ಹೇಗಿದೆ

ಬ್ಯಾಟರಿ ಲೈಫ್ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನ ಬ್ಯಾಟರಿ ಸಾಮರ್ಥ್ಯವು 4,000mAh ಆಗಿದ್ದು, ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕಡಿಮೆ ಎಂದರೂ ಒಂದು ದಿನ ಬ್ಯಾಟರಿ ಬ್ಯಾಕ್‌ಅಪ್ ಒದಗಿಸಬಲ್ಲ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಯುಎಸ್‌ಬಿ ಸಿ ಪೋರ್ಟ್‌, ವೈಫೈ, ಬ್ಲೂಟೂತ್, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

English summary
Samsung has gone aggressive in the mid-range smartphone segment by launching new devices consistently. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X