ಹೊಸ Samsung Galaxy A56 ಖರೀದಿಗೆ ಲಭ್ಯ; ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು.. ಬೆಲೆ, ಆಫರ್ ಏನಿದೆ?
ಸ್ಯಾಮ್‌ಸಂಗ್ ಇತ್ತೀಚೆಗೆ ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G (Samsung Galaxy A56 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಂದಹಾಗೆ, ಈ ಮೊಬೈಲ್ ಪ್ರಸ್ತುತ, ಭಾರತದಲ್ಲಿ ಖರೀದಿಗೆ ಲಭ್ಯವಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G (Samsung Galaxy A36 5G) ಜೊತೆಗೆ ಲಾಂಚ್ ಆಗಿತ್ತು. ಇದು ಸೈಲಿಶ್ ಲುಕ್ ಮತ್ತು ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಹೊಸ ಸ್ಯಾಮ್‌ಸಂಗ್ 5G ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳು ಇಲ್ಲಿವೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನ್ ಮೂರು ಬಣ್ಣಗಳಲ್ಲಿ ಬಿಡುಗಡೆಯಾಗಿದೆ. ನೀವು ಗ್ರ್ಯಾಫೈಟ್, ಆಲಿವ್ ಮತ್ತು ಲೈಟ್‌ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು. ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 1580 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ ಲೋಹದ ಬಾಡಿ ಹೊಂದಿದೆ. ಮುಂಭಾಗ ಮತ್ತು ಹಿಂಭಾಗ ಎರಡರಲ್ಲೂ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ಇದೆ. ಈ ಸ್ಯಾಮ್‌ಸಂಗ್ ಫೋನ್ 12GB RAM ಹೊಂದಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು IP67 ರೇಟಿಂಗ್ ಸಹ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಬೆಲೆ ಮತ್ತು ಆಫರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 41,999 ರೂ.ಗೆ ಬಿಡುಗಡೆ ಮಾಡಲಾಗಿದೆ. 8GB RAM + 256GB ಸ್ಟೋರೇಜ್ ಮಾದರಿಯ ಬೆಲೆ 44,999 ರೂ. ಆಗಿದೆ. ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ 47,999 ರೂ.ಗೆ ಲಭ್ಯವಿದೆ. ಈ ಮೊಬೈಲ್ ಕಂಪನಿಯ ಅಧಿಕೃತ ವೆಬ್‌ಸೈಟ್ (Samsung.com), ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಾದ ಫ್ಲಿಪ್‌ಕಾರ್ಟ್ (Flipkart), ಅಮೆಜಾನ್ (Amazon) ಮತ್ತು ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟವಾಗಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1,080 x 2,340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಮೊಬೈಲ್ Exynos 1580 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಗ್ರಾಫಿಕ್ಸ್‌ಗಾಗಿ, AMD Xclipse 540 ಜಿಪಿಯು ಸಹ ಹೊಂದಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬೊಂಬಾಟ್ ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನಿನಲ್ಲಿ ಐ ಕೇರ್ ಸ್ಕ್ರೀನ್ ಬಳಸಲಾಗಿದೆ. ಈ ಮೊಬೈಲ್ 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಆಡಿಯೋ ಮತ್ತು ಸ್ಟೀರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ವೈ-ಫೈ, ಬ್ಲೂಟೂತ್ 5.3 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








