ಹೊಸ Samsung Galaxy A56 5G ಲಾಂಚ್; 50MP ಟ್ರಿಪಲ್ ಕ್ಯಾಮೆರಾ.. 5000mAh ಬ್ಯಾಟರಿ.. ಬೆಲೆ ಎಷ್ಟು ಗೊತ್ತಾ?
ಸ್ಯಾಮ್‌ಸಂಗ್ ಸದ್ದಿಲ್ಲದೆ ಮತ್ತೊಂದು ಹೊಸ ಮೊಬೈಲ್ ಬಿಡುಗಡೆ ಮಾಡಿದೆ. ಇದು ಕೈಗೆಟುಕುವ ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G (Samsung Galaxy A56 5G) ಫೋನ್ ಅಧಿಕೃತವಾಗಿ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಟೆಕ್ ಕ್ಷೇತ್ರದಲ್ಲಿ ಬಹಳ ದಿನಗಳಿಂದ ಸುದ್ದಿಯಾಗಿದ್ದ ಈ ಮೊಬೈಲ್ ಈಗ ಗ್ರಾಹಕರ ಕೈ ಸೇರಿದೆ. ಇದು ಸೊಗಸಾದ ಲುಕ್ ಮತ್ತು ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ, ಈ ಹೊಸ ಸ್ಯಾಮ್‌ಸಂಗ್ 5G ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಹೊಸ ಸ್ಯಾಮ್‌ಸಂಗ್ ಫೋನ್ ಕಂಪನಿಯ ಪ್ರೀಮಿಯಂ ಮೊಬೈಲ್ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅನ್ನು ಹೋಲುತ್ತದೆ. ಈ ಫೋನ್ ಮೂರು ಬಣ್ಣಗಳಲ್ಲಿ ಬಿಡುಗಡೆಯಾಗಿದೆ. ನೀವು ಗ್ರ್ಯಾಫೈಟ್, ಆಲಿವ್ ಮತ್ತು ಲೈಟ್‌ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು. ಈ ಸ್ಯಾಮ್‌ಸಂಗ್ ಫೋನ್ 12GB RAM ಹೊಂದಿದೆ. ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 1580 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ ಲೋಹದ ಬಾಡಿ ಹೊಂದಿದೆ. ಮುಂಭಾಗ ಮತ್ತು ಹಿಂಭಾಗ ಎರಡರಲ್ಲೂ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ಇದೆ. ಈ ಫೋನ್ IP67 ರೇಟಿಂಗ್ ಸಹ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 1,080 x 2,340 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಸ್ಮಾರ್ಟ್‌ಫೋನ್ ಕಂಪನಿಯ ಸ್ವಂತ Exynos 1580 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಸ್ಮಾರ್ಟ್‌ಫೋನ್ AMD Xclipse 540 ಜಿಪಿಯು ಸಹ ಹೊಂದಿದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನಿನಲ್ಲಿ ಐ ಕೇರ್ ಸ್ಕ್ರೀನ್ ಬಳಸಲಾಗಿದೆ. ಈ ಮೊಬೈಲ್ 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಆಡಿಯೋ ಮತ್ತು ಸ್ಟೀರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5GHz ವೈ-ಫೈ, ಬ್ಲೂಟೂತ್ 5.3 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಮೊಬೈಲ್ ಅವೆಸ್ಯೂಮ್ ಲೈಟ್‌ಗ್ರೇ, ಅವೆಸ್ಯೂಮ್ ಗ್ರ್ಯಾಫೈಟ್, ಅವೆಸ್ಯೂಮ್ ಆಲಿವ್ ಮತ್ತು ಅವೆಸ್ಯೂಮ್ ಪಿಂಕ್ ಬಣ್ಣಗಳಲ್ಲಿ ಮಾರಾಟವಾಗಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 43,735 ರೂ.ಗೆ ಬಿಡುಗಡೆ ಮಾಡಲಾಗಿದೆ. ಹಾಗೆಯೇ 8GB + 256GB ಸ್ಟೋರೇಜ್ ಮಾದರಿಯನ್ನು 48,000 ರೂ.ಗೆ ಪರಿಚಯಿಸಲಾಗಿದೆ.


Click it and Unblock the Notifications








