Home
ಮೊಬೈಲ್

Samsung: ಧೂಳೆಬ್ಬಿಸಲು ಬರ್ತಿವೆ ಮತ್ತೆರೆಡು ಫೋನ್; ರಾಶಿ ಫೀಚರ್ಸ್.. ಬೆಲೆ ಸೋರಿಕೆ.. ಯಾವಾಗ ಬಿಡುಗಡೆ?

ಸ್ಯಾಮ್‌ಸಂಗ್ ಶೀಘ್ರದಲ್ಲೇ ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಅವುಗಳೇ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 (Samsung Galaxy A56) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A36 (Samsung Galaxy A36) ಸ್ಮಾರ್ಟ್‌ಫೋನ್‌ಗಳು. ಹೌದು, ಸ್ಯಾಮ್‌ಸಂಗ್ ತನ್ನ 'Galaxy A25 ಸರಣಿ'ಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ Samsung Galaxy S25, Samsung Galaxy S25+ ಮತ್ತು Samsung Galaxy S25 Ultra ಮೊಬೈಲ್‌ಗಳು ಮಾರುಕಟ್ಟೆಗೆ ಎಂಟ್ರಿಕೊಟ್ಟಿವೆ. ಇದೀಗ, ಮತ್ತೆರಡು ಹೊಸ ಫೋನ್‌ಗಳು ಭಾರತಕ್ಕೆ ಬರಲಿವೆ. ಬನ್ನಿ, ಮುಂಬರುವ ಈ ಫೋನ್‌ಗಳ ವಿಶೇಷತೆಗಳನ್ನು ತಿಳಿಯೋಣ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A36 ಫೋನ್‌ಗಳ ಲಾಂಚ್ ಟೈಮ್‌ಲೈನ್ ಅನ್ನು ಬಹಿರಂಗಪಡಿಸಲಾಗಿದೆ. ಈ ಎರಡು ಫೋನ್‌ಗಳು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿವೆ. ಈ ಮೊಬೈಲ್‌ಗಳು ಭಾರತ ಸೇರಿದಂತೆ ಇತರೆ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಿರುತ್ತವೆ. ಈ ಎರಡೂ ಮೊಬೈಲ್‌ಗಳು 2025ರ ಮೊದಲ ತ್ರೈಮಾಸಿಕ ಅಂತ್ಯಕ್ಕೂ ಮೊದದೇ ಮಾರುಕಟ್ಟೆಯಲ್ಲಿ ಲಗ್ಗೆ ಇಡಲಿವೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಶೀಘ್ರದಲ್ಲೇ Samsung Galaxy A56 ಮತ್ತು Galaxy A36 ಲಾಂಚ್; ಬೆಲೆ ಸೋರಿಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ವೈಶಿಷ್ಟ್ಯಗಳು (ನಿರೀಕ್ಷಿತ)

ಡಿಸ್ಪ್ಲೇ ವಿವರ

ವರದಿಯ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಸ್ಮಾರ್ಟ್‌ಫೋನ್‌ ಅಲ್ಯೂಮಿನಿಯಂ ಫ್ರೇಮ್ ಮತ್ತು ಗ್ಲಾಸ್ ಬ್ಯಾಕ್ ವಿನ್ಯಾಸ ಹೊಂದಿರುತ್ತದೆ. ಈ ಫೋನಿನ ಡಿಸ್ಪ್ಲೇ ವಿವರ ಬಹಿರಂಗಪಡಿಸಿಲ್ಲ. ಆದರೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಪೂರ್ಣ ಎಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿರಬಹುದು. ಇದು 120Hz ರಿಫ್ರೆಶ್‌ ದರದೊಂದಿಗೆ ಬರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಸ್ಯಾಮ್‌ಸಂಗ್‌ನ Exynos 1580 ಪ್ರೊಸೆಸರ್‌ನಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಈ ಫೋನ್ ಇತ್ತೀಚಿನ ಆಂಡ್ರಾಯ್ಡ್‌ 15 ಆಧಾರಿತ OneUI 7 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಲಾಗಿದೆ.

ಸ್ಟೋರೇಜ್ ಆಯ್ಕೆ

ಮಾಹಿತಿಯ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಫೋನನ್ನು ಭಾರತದಲ್ಲಿ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಫೋನ್ 8GB RAM ಮತ್ತು 12GB RAM ಅನ್ನು ಹೊಂದಿರುತ್ತದೆ. ಜೊತೆಗೆ 128GB ಮತ್ತು 256GB ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ.

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇರುತ್ತದೆ. ಜೊತೆಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಅನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಬಹುದು. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನಿನಲ್ಲಿ 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ವೈ-ಫೈ, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿರಲಿದೆ.

ಗ್ಯಾಲಕ್ಸಿ A56 ಮತ್ತು ಗ್ಯಾಲಕ್ಸಿ A36 ಬೆಲೆ (ನಿರೀಕ್ಷಿತ)

ವರದಿಯ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 39,000 ರೂ.ಗೆ ಬಿಡುಗಡೆಯಾಗಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A36 ಮೊಬೈಲ್ ಕೈಗೆಟುಕುವ ಬೆಲೆಯಲ್ಲಿ ಬರುತ್ತದೆ. ಅಂದರೆ 30,999 ರೂ.ಗೆ ಈ ಫೋನನ್ನು ಮಾರುಕಟ್ಟೆಗೆ ಪರಿಚಯಿಸುವ ಸಾಧ್ಯತೆಯಿದೆ. ಆದರೆ, ಕಂಪನಿಯು ಬೆಲೆಯ ಬಗ್ಗೆ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.

Best Mobiles in India

English summary
Samsung Galaxy A56 and Samsung Galaxy A36 launch timeline tipped: Check expected price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+