Samsung Galaxy A56 ಬೆಲೆ ಲೀಕ್; 256GB ಸ್ಟೋರೇಜ್.. 5000mah ಬ್ಯಾಟರಿ.. ಲಾಂಚ್ ಯಾವಾಗ?
ಸ್ಯಾಮ್‌ಸಂಗ್ ತನ್ನ ಅಭಿಮಾನಿಗಳಿಗೆ ಸರ್‌ಪ್ರೈಸ್ ಗಿಫ್ಟ್ ನೀಡಲು ಸಜ್ಜಾಗಿದೆ. ಕಂಪನಿಯು ಶೀಘ್ರದಲ್ಲೇ ತನ್ನ ಗ್ಯಾಲಕ್ಸಿ 'A' ಸರಣಿಯನ್ನು ಬಿಡುಗಡೆ ಮಾಡಲಿದೆ. ಹೌದು, ಈ ಹೊಸ ಸರಣಿಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 (Samsung Galaxy A56) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A36 (Samsung Galaxy A36) ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಕಳೆದ ಕೆಲವು ದಿನಗಳಿಂದ ಈ ಎರಡು ಮೊಬೈಲ್‌ಗಳ ಮಾಹಿತಿ ಸೋರಿಕೆಯಾಗುತ್ತಿದೆ. ಇದೀಗ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಫೋನಿನ ಫೀಚರ್ಸ್ ಮತ್ತು ಬೆಲೆಯನ್ನು ಸಹ ಬಹಿರಂಗಪಡಿಸಲಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದೆ. ಇದು ಆಕರ್ಷಕ ವಿನ್ಯಾಸ, ಉತ್ತಮ ಹಾರ್ಡ್‌ವೇರ್ ಮತ್ತು ಕ್ಲೀನ್ ಸಾಫ್ಟ್‌ವೇರ್ ಅನ್ನು ಹೊಂದಿದೆ. ಈ ಮೊಬೈಲ್‌ನ ಪ್ರಮುಖ ವಿವರಗಳನ್ನು ಆಂಡ್ರಾಯ್ಡ್ ಹೆಡ್‌ಲೈನ್‌ಗಳ ಮೂಲಕ ಬಹಿರಂಗಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ Exynos 1580 ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 256GB ಸ್ಟೋರೇಜ್, 120hz ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇ, 5000mah ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಬೆಲೆ (ಸೋರಿಕೆ)
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಫೋನಿನ ಬೆಲೆ ಸಹ ಸೋರಿಕೆಯಾಗಿದೆ. ಈ ಮೊಬೈಲ್ 47,200 ರೂ. ಬೆಲೆಯಲ್ಲಿ ಬಿಡುಗಡೆಯಾಗಲಿದೆ. ಇದು ಫೋನಿನ ಮೂಲ ಮಾದರಿಯ ಬೆಲೆಯಾಗಿದೆ. ಈ ಹಿಂದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A55 (Samsung Galaxy A55) ಸಹ ಇದೇ ಬೆಲೆಗೆ ಬಿಡುಗಡೆ ಮಾಡಲಾಗಿತ್ತು. ಇದರ ಆರಂಭಿಕ ಬೆಲೆ 39,999 ರೂ. ಆಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿಯೂ ಬಿಡುಗಡೆ ಮಾಡಲಾಗುತ್ತದೆ. ಪ್ರಸ್ತುತ ಬಿಡುಗಡೆಯ ಟೈಮ್‌ಲೈನ್‌ನಲ್ಲಿ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಆದರೆ, ಸ್ಯಾಮ್‌ಸಂಗ್ ಬಹುಶಃ ಮೊದಲ ತ್ರೈಮಾಸಿಕದಲ್ಲಿ ಈ ಬಗ್ಗೆ ಘೋಷಿಸುವ ನಿರೀಕ್ಷೆಯಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A55 ಅನ್ನು ಭಾರತದಲ್ಲಿ ಈ ವರ್ಷ (ಮಾರ್ಚ್ 2024) ಬಿಡುಗಡೆ ಮಾಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ವೈಶಿಷ್ಟ್ಯಗಳು (ಸೋರಿಕೆ)
ಡಿಸ್ಪ್ಲೇ ವಿವರ
ವರದಿಯ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಫೋನ್ ಪೂರ್ಣ ಹೆಚ್‌ಡಿ ಪ್ಲಸ್ 120Hz ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿರುವ ಸಾಧ್ಯತೆಯಿದೆ. ಇದು ಸ್ಯಾಮ್‌ಸಂಗ್ ಗ್ಯಾಲಕ್ಸಿ A55 ಫೋನಿನ ಸೂಪರ್ ಅಮೋಲೆಡ್ ಡಿಸ್ಪ್ಲೇಯಿಂದ ಅಪ್‌ಗ್ರೇಡ್ ಆಗಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಹೊಸ ಇನ್ ಹೌಸ್ Exynos 1580 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಫೋನ್ ಆಂಡ್ರಾಯ್ಡ್ 15 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A55 ಫೋನ್ Exynos 1480 ಪ್ರೊಸೆಸರ್ ಹೊಂದಿದೆ.

ಸ್ಟೋರೇಜ್ ಆಯ್ಕೆ
ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬರುವ ಸಾಧ್ಯತೆಯಿದೆ. ಈ ಫೋನ್ 8GB, 12GB RAM ಮತ್ತು 128GB, 256GB ಸ್ಟೋರೇಜ್ ಆಯ್ಕೆ ಒಳಗೊಂಡಿರುತ್ತದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರದೆ. ಜೊತೆಗೆ, 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಮೊಬೈಲ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಈ ಮೊಬೈಲ್ ಅಲ್ಯೂಮಿನಿಯಂ ಫ್ರೇಮ್ ಮತ್ತು ಗ್ಲಾಸ್ ಬ್ಯಾಕ್ ವಿನ್ಯಾಸವನ್ನು ಹೊಂದಿರುತ್ತದೆ.


Click it and Unblock the Notifications








