ಸ್ಯಾಮ್‌ಸಂಗ್ ಹೊಸ ಪ್ರಯತ್ನ: ಹಾನರ್, ನೋಕಿಯಾ ಮತ್ತು ಶಿಯೋಮಿಗೆ ಸೆಡ್ಡು..!

|

ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಮಾರ್ಟ್‌ಫೋನ್ ಮಾರಾಟ ಮಾಡುವ ಕಂಪನಿ ಎನ್ನುವ ಪಟ್ಟವನ್ನು ಕಳೆದುಕೊಂಡ ಸ್ಯಾಮ್‌ಸಂಗ್, ಮತ್ತೆ ಮಾರುಕಟ್ಟೆಯಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಮತ್ತೆ ಮಾರುಕಟ್ಟೆಯಲ್ಲಿ ತನ್ನ ಹವಾ ಹೆಚ್ಚು ಮಾಡಲು ಮುಂದಾಗಿದೆ. ಇದಕ್ಕಾಗಿಯೇ ಹೊಸದೊಂದು ಅಸ್ತ್ರವನ್ನು ಸಿದ್ಧಪಡಿಸಿದೆ.

ಸ್ಯಾಮ್‌ಸಂಗ್ ಹೊಸ ಪ್ರಯತ್ನ: ಹಾನರ್, ನೋಕಿಯಾ ಮತ್ತು ಶಿಯೋಮಿಗೆ ಸೆಡ್ಡು..!

ಮಾರುಕಟ್ಟೆಯಲ್ಲಿ ಹಾನರ್, ಶಿಯೋಮಿ ಮತ್ತು ನೋಕಿಯಾ ಕಂಪನಿಗಳು ಮಧ್ಯಮ ಸರಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಮುಂದಾಗಿದೆ. ಇದೇ ಮಾದರಿಯಲ್ಲಿ ಸ್ಯಾಮ್‌ಸಂಗ್ ಸಹ ಮಧ್ಯಮ ಸರಣಿಯಲ್ಲಿ ಬೊಂಬಾಟ್ ಸ್ಮಾರ್ಟ್‌ಫೋನ್‌ವೊಂದನ್ನು ನಿರ್ಮಿಸಲು ಮುಂದಾಗಿದೆ.

6GB RAM:

6GB RAM:

ಅನ್‌ಟಂಟು ಬೆಂಚ್ ಮಾರ್ಕ್‌ನಲ್ಲಿ ಕಾಣಿಸಿಕೊಂಡಿರುವ ಸ್ಯಾಮ್‌ಸಂಗ್ ನೂತನ ಫೋನ್‌ ಅನ್ನು ಸ್ಯಾಮ್‌ಸಂಗ್ ಗ್ಯಾಲೆಕ್ಸಿ C10 ಪ್ಲಸ್ ಎಂದು ಗುರುತಿಸಲಾಗಿದ್ದು, ಈ ಸ್ಮಾರ್ಟ್‌ಫೋನಿನಲ್ಲಿ 6GB RAM ಮತ್ತು 64 GB ಇಂಟರ್ನಲ್ ಮೆಮೊರಿಯನ್ನು ಹೊಂದಿದೆ ಎನ್ನಲಾಗಿದೆ.

ವೇಗದ ಪ್ರೋಸೆಸರ್:

ವೇಗದ ಪ್ರೋಸೆಸರ್:

ಇದಲ್ಲದೇ ಸ್ಯಾಮ್‌ಸಂಗ್ ಗ್ಯಾಲೆಕ್ಸಿ C10 ಪ್ಲಸ್ ಎಂದು ಗುರುತಿಸಿರುವ ಈ ಸ್ಮಾರ್ಟ್‌ಫೋನ್‌ನಲ್ಲಿ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 660 ಪ್ರೋಸೆಸರ್ ಅನ್ನು ಕಾಣಬಹುದಾಗಿದ್ದು, ಇದು ವೇಗದ ಕಾರ್ಯಚರಣೆಗೆ ಸಹಾಯಕಾರಿಯಾಗಿದೆ.

ಫುಲ್‌ ಸ್ಕ್ರಿನ್ ಡಿಸ್‌ಪ್ಲೇ ಇಲ್ಲ:

ಫುಲ್‌ ಸ್ಕ್ರಿನ್ ಡಿಸ್‌ಪ್ಲೇ ಇಲ್ಲ:

ಸ್ಯಾಮ್‌ಸಂಗ್ ಗ್ಯಾಲೆಕ್ಸಿ C10 ಪ್ಲಸ್ ಸ್ಮಾರ್ಟ್‌ಫೋನಿನಲ್ಲಿ ಫುಲ್‌ ಸ್ಕ್ರಿನ್ ಡಿಸ್‌ಪ್ಲೇ (18:9) ಯನ್ನು ಅಳವಡಿಸಿಲ್ಲ ಎನ್ನಲಾಗಿದೆ. ಸಾಮಾನ್ಯ 16:9 ಅನುಪಾದ ಡಿಸ್‌ಪ್ಲೇಯನ್ನು ಈ ಫೋನಿನಲ್ಲಿ ಕಾಣಬಹುದಾಗಿದೆ.

ಡ್ಯುಯಲ್ ಕ್ಯಾಮೆರಾ:

ಡ್ಯುಯಲ್ ಕ್ಯಾಮೆರಾ:

ಸ್ಯಾಮ್‌ಸಂಗ್ ಗ್ಯಾಲೆಕ್ಸಿ C10 ಪ್ಲಸ್ ಸ್ಮಾರ್ಟ್‌ಫೋನಿನಲ್ಲಿ ಡ್ಯುಯಲ್ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಆದರೆ ಕ್ಯಾಮೆರಾ ಲೈನ್ಸ್ ಕುರಿತಂತೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ ಎನ್ನಲಾಗಿದೆ.

Best Mobiles in India

English summary
Samsung Galaxy C10 Plus shows up on AnTuTu. to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X