ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಫಸ್ಟ್‌ ಲುಕ್; ಅಗ್ಗದ ಬೆಲೆಯಲ್ಲಿ ಆಕರ್ಷಕ ಫೋನ್!

|

ದಕ್ಷಣಿ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಇದೊಂದು ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದ್ದರೂ, ಕೆಲವು ಫೀಚರ್ಸ್‌ಗಳಿಂದ ಆಕರ್ಷಕ ಅನಿಸಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಬಣ್ಣಗಳ ಆಯ್ಕೆ ಹಾಗೂ ವಿನ್ಯಾಸದಿಂದ ಈ ಫೋನ್ ಮತ್ತಷ್ಟು ಟ್ರೆಂಡಿ ಅನಿಸಿಕೊಂಡಿದೆ.

ಸ್ಮಾರ್ಟ್‌ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಮಾದರಿಯ ಫೋನ್‌ ಆಗಿದ್ದು, ಅಧಿಕ RAM ಆಯ್ಕೆಗಳನ್ನು ಒಳಗೊಂಡಿಲ್ಲ. 3GB RAM + 32GB ಮತ್ತು 4GB RAM + 64GB ಸಾಮರ್ಥ್ಯದ ಎರಡು ವೇರಿಯಂಟ್‌ ಮಾಡೆಲ್‌ಗಳನ್ನು ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು ಈ ಫೋನಿನಲ್ಲಿ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಇನ್ಫಿನಿಟಿ ವಿ ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಈ ಫೋನ್ ತನ್ನ ವರ್ಗದಲ್ಲಿ ಉತ್ತಮ ಡಿಸ್‌ಪ್ಲೇ ಹೊಂದಿದೆ ಎನ್ನಬಹುದು. ವಿಶಾಲ ಡಿಸ್‌ಪ್ಲೇಯು ವಿಡಿಯೋ ವೀಕ್ಷಣೆ ಹಾಗೂ ಗೇಮ್‌ ಆಡಲು ಪೂರಕ ಅನಿಸಲಿದೆ.

ಪ್ರೊಸೆಸರ್‌ ಕಾರ್ಯ ವೈಖರಿ

ಪ್ರೊಸೆಸರ್‌ ಕಾರ್ಯ ವೈಖರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ OneUI 2.5 ಬೆಂಬಲಿತ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವು ಇದೆ. ಜೊತೆಗೆ 3GB RAM + 32GB ಮತ್ತು 4GB RAM + 64GB ಸಾಮರ್ಥ್ಯದ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ. ಹಾಗೆಯೆ ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್ ಗೇಮಿಂಗ್‌ ಪೂರಕವಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇನ್ನು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಡೈನಾಮಿಕ್ ರೇಂಜ್ ಮಾಡೆಲ್‌ನ ಕ್ಯಾಮೆರಾ ಗುಣಮಟ್ಟ ಇಲ್ಲದಿದ್ದರೂ, ಅಗ್ಗದ ದರದಲ್ಲಿ ತೃಪ್ತಿಕರ ಕ್ಯಾಮೆರಾ ಹೊಂದಿದೆ ಎನ್ನಬಹುದಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ F02s ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಆರಾಮವಾಗಿ ಒಂದು ದಿನದ ಮಟ್ಟಿಗೆ ಬ್ಯಾಟರಿ ಬ್ಯಾಕ್‌ಅಪ್‌ ಒದಗಿಸಲಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವುದಕ್ಕೆ ಅವಕಾಶ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ 3GB RAM + 32GB ವೇರಿಯಂಟ್‌ ಮಾಡೆಲ್‌ ಬೆಲೆಯು 8,999ರೂ. ಬೆಲೆಯನ್ನು ಹೊಂದಿದೆ. ಇನ್ನು 4GB RAM + 64GB ವೇರಿಯಂಟ್‌ ಮಾಡೆಲ್‌ ಬೆಲೆಯು 9,999 ಆಗಿದೆ. ಆನ್‌ಲೈನ್‌ ತಾಣಗಳ ಮೂಲಕ ಗ್ರಾಹಕರು ಖರೀದಿಸಬಹುದಾಗಿದೆ.

Best Mobiles in India

English summary
Samsung Galaxy F02s First Look: Best Smartphone In Budget Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X