Home
ಮೊಬೈಲ್

Samsung: ಸೆ.20ಕ್ಕೆ ಹೊಸ ಫೋನ್ ಸೇಲ್: 8 ಸಾವಿರಕ್ಕಿಂತ ಕಡಿಮೆ ಬೆಲೆಗೆ ಲಭ್ಯ!

ಸ್ಯಾಮ್‌ಸಂಗ್ ಕಂಪನಿಯು ತನ್ನ 'F' ಸರಣಿಯಲ್ಲಿ ಹೊಸ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಮೊಬೈಲ್. ಈ ಫೋನನ್ನು ಅಗ್ಗದ ಬೆಲೆಗೆ ಪರಿಚಯಿಸಲಾಗಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 20 ರಿಂದ ಇ ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟ ಪ್ರಾರಂಭಿಸಲಿದೆ. ಈ ಹೊಸ ಫೋನಿನ ಬೆಲೆ, ಆಫರ್‌ಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ ಬನ್ನಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನ್ ಹಿಂಭಾಗದ ಫಲಕವು ಪ್ಲಾಸ್ಟಿಕ್‌ನಿಂದ ಮಾಡಲ್ಪಟ್ಟಿದೆ. ಮತ್ತು ಚರ್ಮದ ಮಾದರಿಯ ವಿನ್ಯಾಸವನ್ನು ಕಾಣಬಹುದು. ಇದು 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನಿನಲ್ಲಿ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಇದೆ. 50 ಮೆಗಾಪಿಕ್ಸೆಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ, 5000mAh ಸಾಮರ್ಥ್ಯದ ಬ್ಯಾಟರಿ, 25W ವೇಗದ ಚಾರ್ಜಿಂಗ್ ಸೇರಿದಂತೆ ಕಡಿಮೆ ಬಜೆಟ್‌ನಲ್ಲಿ ಹಲವು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Samsung: ಸೆ.20ಕ್ಕೆ ಹೊಸ ಫೋನ್ ಸೇಲ್: 8 ಸಾವಿರಕ್ಕಿಂತ ಕಡಿಮೆ ಬೆಲೆ.. ಹೇಗಿದೆ?

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಬೆಲೆ ಮತ್ತು ಲಭ್ಯತೆ

ಕಂಪನಿಯು ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನನ್ನು ಕೇವಲ 4GB ಮತ್ತು 64GB ಸ್ಟೋರೇಜ್‌ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ಭಾರತದಲ್ಲಿ ಇದರ ಬೆಲೆ ಕೇವಲ 7,999 ರೂ. ಆಗಿದೆ. ಈ ಫೋನ್ ಟ್ವಿಲೈಟ್ ಬ್ಲೂ ಬಣ್ಣದಲ್ಲಿ ಲಭ್ಯವಿರುತ್ತದೆ. ಮತ್ತು ಸೆಪ್ಟೆಂಬರ್ 20 ರಿಂದ ಫ್ಲಿಪ್‌ಕಾರ್ಟ್, ಸ್ಯಾಮ್‌ಸಂಗ್ ವೆಬ್‌ಸೈಟ್ ಮತ್ತು ರಿಟೇಲ್ ಸ್ಟೋರ್‌ಗಳಲ್ಲಿ ಮಾರಾಟವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ: ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನ್ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್, ಹೆಚ್‌ಡಿ ಪ್ಲಸ್ ಎಲ್‌ಸಿಡಿ ಸ್ಕ್ರೀನ್, 60Hz ರಿಫ್ರೆಶ್ ರೇಟ್ ಒಳಗೊಂಡಿದೆ. ಎಲ್ಲಾ ವಯಸ್ಸಿನ ಪ್ರವೇಶ ಮಟ್ಟದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಇದನ್ನು ವಿನ್ಯಾಸಗೊಳಿಸಲಾಗಿದೆ.

ಪ್ರೊಸೆಸರ್: ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನಿನಲ್ಲಿ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಅನ್ನು ಒದಗಿಸಿದೆ. ಇದು RAM ಪ್ಲಸ್ ವೈಶಿಷ್ಟ್ಯದೊಂದಿಗೆ 8GB RAM ಅನ್ನು ಹೊಂದಿದೆ. ಈ RAM ಪ್ಲಸ್ ತಂತ್ರಜ್ಞಾನವು ಬಳಕೆದಾರರಿಗೆ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ವರ್ಚುವಲ್ RAM ಅನ್ನು ಸೇರಿಸಲು ಅನುಮತಿಸುತ್ತದೆ. ಇದು 64 GB ಇಂಟರ್ನಲ್ ಸ್ಟೋರೇಜ್‌ ಒಳಗೊಂಡಿದೆ. ಇದಲ್ಲದೆ, ಸ್ಟೋರೇಜ್ ಅನ್ನು ಮತ್ತಷ್ಟು ಹೆಚ್ಚಿಸಲು 1TB ವರೆಗೆ ವಿಸ್ತರಿಸಬಹುದಾದ ಬೆಂಬಲವೂ ಲಭ್ಯವಿದೆ.

ಕ್ಯಾಮೆರಾ: ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್ ಹೊಂದಿದೆ. ಜೊತೆಗೆ, 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಿಂಗ್ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಬ್ರೌಸಿಂಗ್, ಗೇಮಿಂಗ್ ಮತ್ತು ಬಿಂಜ್ ವೀಕ್ಷಣೆಯ ದೀರ್ಘ ಅವಧಿಗಳನ್ನು ಸುಲಭಗೊಳಿಸುತ್ತದೆ. ಈ ದೊಡ್ಡ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ಕಡಿಮೆ ಸಮಯದಲ್ಲಿ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ.

ಆಪರೇಟಿಂಗ್ ಸಿಸ್ಟಮ್: ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನ್ ಇತ್ತೀಚಿನ ಆಂಡ್ರಾಯ್ಡ್ 14 ನೊಂದಿಗೆ ಬರುತ್ತದೆ. ಕಂಪನಿಯು ಎರಡು ವರ್ಷಗಳ OS ನವೀಕರಣಗಳನ್ನು ಮತ್ತು ನಾಲ್ಕು ವರ್ಷಗಳ ಭದ್ರತಾ ನವೀಕರಣಗಳನ್ನು ನೀಡುತ್ತದೆ.

ಇತರೆ ವೈಶಿಷ್ಟ್ಯಗಳು: ಈ ಮೊಬೈಲ್ ಭದ್ರತೆಗಾಗಿ ಫೇಸ್ ಅನ್ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, 3.5 ಎಂಎಂ ಆಡಿಯೋ ಜಾಕ್ ಇದೆ. ಜೊತೆಗೆ, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ C ಪೋರ್ಟ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy F05 goes sale on September 20 via Flipkart: Price, Offer, Specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+