Home
ಮೊಬೈಲ್

Samsung Galaxy F06 5G vs Lava Blaze 3 5G: ಯಾವುದು ಉತ್ತಮ? ಬೆಲೆ, ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್ ಭಾರತದಲ್ಲಿ ತನ್ನ ಅತ್ಯಂತ ಕೈಗೆಟುಕುವ 5G ಫೋನನ್ನು ಬಿಡುಗಡೆ ಮಾಡಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G (Samsung Galaxy F06 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಇದು 12,000 ರೂ.ಗಳಿಗಿಂತ ಕಡಿಮೆ ಬೆಲೆಯ ವಿಭಾಗದಲ್ಲಿ ಬರುತ್ತದೆ. ಕಂಪನಿಯ ಈ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೊಬೈಲ್ ಸೊಗಸಾದ ವಿನ್ಯಾಸ, ಶಕ್ತಿಶಾಲಿ ಪ್ರೊಸೆಸರ್, ಇತ್ತೀಚಿನ ಆಂಡ್ರಾಯ್ಡ್ ಓಎಸ್ ಮತ್ತು ಇನ್ನಿತರ ವಿಶೇಷತೆಗಳನ್ನು ಹೊಂದಿದೆ. ಇದು ಮಾರುಕಟ್ಟೆಯಲ್ಲಿ ಲಭ್ಯವಿರುವ ಈ ಬೆಲೆ ವಿಭಾಗದ ಫೋನ್‌ಗಳಿಗೆ ನೇರ ಪೈಪೋಟಿ ನೀಡುತ್ತಿದೆ.

ವಿವಶೇಷವೆಂದರೆ, ಲಾವಾ ಬ್ಲೇಜ್ 3 5G (Lava Blaze 3 5G) ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಯಂತೆಯೇ ಬಹುತೇಕ ವೈಶಿಷ್ಟ್ಯಗಳನ್ನು ಹೊಂದಿದೆ. ನೀವು ದೀರ್ಘ ನವೀಕರಣಗಳೊಂದಿಗೆ ಬಜೆಟ್ ಬೆಲೆಯಲ್ಲಿ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಬಯಸಿದರೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಉತ್ತಮ ಆಯ್ಕೆಯಾಗಿದೆ. ಸ್ವಲ್ಪ ಸುಗಮವಾದ ಡಿಸ್ಪ್ಲೇಯೊಂದಿಗೆ ಸ್ಟಾಕ್ ಆಂಡ್ರಾಯ್ಡ್ ಅನುಭವವನ್ನು ಬಯಸುವವರು ಲಾವಾ ಬ್ಲೇಜ್ 3 5G ಅನ್ನು ಖರೀದಿಸಬಹುದು. ಹಾಗಾದರೆ, ಇಲ್ಲಿರುವ ಎದುರಾಗುವ ಪ್ರಶ್ನೆ, ಎರಡರಲ್ಲಿ ಯಾವುದು ಉತ್ತಮ? ನಿಮ್ಮ ಈ ಗೊಂದಲಕ್ಕೆ ಇಲ್ಲಿದೆ ಉತ್ತರ. ನಾವು ಎರಡೂ ಮೊಬೈಲ್‌ಗಳ ವ್ಯತ್ಯಾಸಗಳ ಬಗ್ಗೆ ತಿಳಿಸಿದ್ದೇವೆ.

Samsung Galaxy F06 vs Lava Blaze 3: ಯಾವುದು ಉತ್ತಮ? ಬೆಲೆ, ಫೀಚರ್ಸ್‌ ನೋಡಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G vs ಲಾವಾ ಬ್ಲೇಜ್ 3 5G ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಫೋನಿನ 4GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 10,999 ರೂ. ನಿಂದ ಪ್ರಾರಂಭವಾಗುತ್ತದೆ. 6GB RAM + 128GB ಸ್ಟೋರೇಜ್ ವೇರಿಯಂಟ್ 11,499 ರೂ.ಗೆ ಲಭ್ಯವಿದೆ. ಕಂಪನಿಯು ಈ ಫೋನಿನ ಖರೀದಿ ಮೇಲೆ ಬ್ಯಾಂಕ್ ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದೆ. ನೀವು ಮೂಲ ರೂಪಾಂತರವನ್ನು 9,499 ರೂ. ಮತ್ತು ಟಾಪ್ ಎಂಡ್ ರೂಪಾಂತರವನ್ನು 10,999 ರೂ.ಗೆ ಖರೀದಿಸಬಹುದು. ಲಾವಾ ಬ್ಲೇಜ್ 3 5G ಫೊನ್ ಒಂದೇ ರೂಪಾಂತರದೊಂದಿಗೆ ಬರುತ್ತದೆ. ಇದರ ಬೆಲೆ 11,499 ರೂ. ಆಗಿದೆ. ನೀವು ರಿಯಾಯಿತಿಯೊಂದಿಗೆ 9,999 ರೂ. ಬೆಲೆಗೆ ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G vs ಲಾವಾ ಬ್ಲೇಜ್ 3 5G ಡಿಸ್ಪ್ಲೇ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಮೊಬೈಲ್ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 720 x 1600 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 60Hz ರಿಫ್ರೆಶ್ ದರ ಮತ್ತು 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಲಾವಾ ಬ್ಲೇಜ್ 3 5G ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ ಬಾಗಿದ ಡಿಸ್ಪ್ಲೇ ಹೊಂದಿದೆ. ಇದು 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದು 90Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G vs ಲಾವಾ ಬ್ಲೇಜ್ 3 5G ಪ್ರೊಸೆಸರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 15 ಆಧಾರಿತ One UI 7.0 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ARM ಮಾಲಿ G57 MC2 ಜಿಪಿಯು ಹೊಂದಿದೆ. ಇದು 6GB RAM ಮತ್ತು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್‌ ನಾಲ್ಕು ವರ್ಷಗಳ ಓಎಸ್ ಮತ್ತು ನಾಲ್ಕು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.

ಲಾವಾ ಬ್ಲೇಜ್ 3 5G ಸಹ ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ. ಈ 5G ಮೊಬೈಲ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು ಒಂದೇ ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ನೀವು 6GB RAM + 128GB ಸ್ಟೋರೇಜ್ ರೂಪಾಂತರದಲ್ಲಿ ಕೊಳ್ಳಬಹುದು. ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಬಳಸಿ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು. ಇದು ಆಂಡ್ರಾಯ್ಡ್ 15ಗೆ ಅಪ್‌ಗ್ರೇಡ್ ಮತ್ತು ಎರಡು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.

Samsung Galaxy F06 vs Lava Blaze 3: ಯಾವುದು ಉತ್ತಮ? ಬೆಲೆ, ಫೀಚರ್ಸ್‌ ನೋಡಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G vs ಲಾವಾ ಬ್ಲೇಜ್ 3 5G ಕ್ಯಾಮೆರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಇದೆ. ಲಾವಾ ಬ್ಲೇಜ್ 3 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ಎಐ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಇದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಹೊಸ ವೈಬ್ ಲೈಟ್ ವೈಶಿಷ್ಟ್ಯ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G vs ಲಾವಾ ಬ್ಲೇಜ್ 3 5G ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G vs ಲಾವಾ ಬ್ಲೇಜ್ 3 5G ಫೋನಿನ ಬ್ಯಾಟರಿ ಬಗ್ಗೆ ಹೇಳುವುದಾದರೆ, ಇದು 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಲಾವಾ ಬ್ಲೇಜ್ 3 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.

Best Mobiles in India

English summary
Samsung Galaxy F06 5G vs Lava Blaze 3 5G comparison: Which Smartphone is Better?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+