ಮಾರುಕಟ್ಟೆಯಲ್ಲಿ ಸಂಚಲನ! ಜಸ್ಟ್ 9,499 ರೂ.. ಹೊಸ Samsung 5G ಫೋನ್ ಲಾಂಚ್.. ಜಬರ್ದಸ್ತ್ ಫೀಚರ್ಸ್
ಸ್ಯಾಮ್‌ಸಂಗ್ ಅಗ್ಗದ ಬೆಲೆಯಲ್ಲಿ ಹೊಸ 5G ಫೋನನ್ನು ಬಿಡುಗಡೆ ಮಾಡಿದೆ. ಇದು 10 ಸಾವಿರ ಬಜೆಟ್‌ನಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್ ಆಗಿದೆ. ಹೌದು, ಸ್ಯಾಮ್‌ಸಂಗ್ ತನ್ನ 'F' ಸರಣಿಯ ಹೊಸ ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಅನಾವರಣಗೊಳಿಸಿದೆ. ಇದು ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G (Samsung Galaxy F06 5G) ಹೆಸರಿನೊಂದಿಗೆ ಭಾರತಕ್ಕೆ ಎಂಟ್ರಿ ಕೊಟ್ಟಿದೆ. ಕಂಪನಿಯು ತನ್ನ ಗ್ರಾಹಕರಿಗೆ ಅಗ್ಗದ ಬೆಲೆಯಲ್ಲಿ ಈ ಫೋನನ್ನು ಲಭ್ಯಗೊಳಿಸಿದೆ. ಬನ್ನಿ, ಈ ಫೋನ್ ಯಾವೆಲ್ಲಾ ವಿಶೇಷತೆಗಳನ್ನು ಹೊಂದಿದೆ ಎನ್ನುವುದನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.74 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 25W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಫೋನಿ ಬೆಲೆ ಮತ್ತು ಲಭ್ಯತೆ ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ 4GB RAM + 128GB ಸ್ಟೋರೇಜ್ ವೇರಿಯಂಟ್ 9,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆಯಾಗಿದೆ. 6GB RAM + 128GB ಸ್ಟೋರೇಜ್ ರೂಪಾಂತರವನ್ನು 11,499 ರೂ.ಗೆ ಪರಿಚಯಿಸಲಾಗಿದೆ. ಕಂಪನಿಯು, ಆರಂಭಿಕ ಮಾರಾಟದಲ್ಲಿ ಈ ಫೋನಿನ ಮೇಲೆ 500 ರೂ. ರಿಯಾಯಿತಿ ನೀಡಲಿದೆ. ಈ ಡಿಸ್ಕೌಂಟ್ ಬಳಿಕ ಎರಡು ರೂಪಾಂತರಗಳ ಬೆಲೆ ಕ್ರಮವಾಗಿ 9,499 ರೂ. ಮತ್ತು 10,999 ರೂ.ಗೆ ಇಳಿಕೆಯಾಗಲಿದೆ. ಈ ಅಗ್ಗದ ಫೋನನ್ನು ಬಹಾಮಾ ನೀಲಿ ಮತ್ತು ಲಿಟ್ ವೈಲೆಟ್ ಬಣ್ಣಗಳಲ್ಲಿ ಖರೀದಿಸಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಸ್ಮಾರ್ಟ್‌ಫೋನ್ 6.74 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ವಾಟರ್‌ಡ್ರಾಪ್ ನಾಚ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಶ್ರೇಣಿಯಲ್ಲಿರುವ ಹೆಚ್ಚಿನ ಫೋನ್‌ಗಳು ಪಂಚ್ ಹೋಲ್ ಡಿಸ್ಪ್ಲೇನೊಂದಿಗೆ ಬರುತ್ತವೆ.ಆದರೆ, ಈ ಸ್ಯಾಮ್‌ಸಂಗ್ ಫೋನಿನಲ್ಲಿ ಅದು ಮಿಸ್ ಆಗಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಮೊಬೈಲ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದರೊಂದಿಗೆ 4 ವರ್ಷಗಳ ಭದ್ರತಾ ಅಪ್‌ಗ್ರೇಡ್ ಸಹ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್ 4 ಲಕ್ಷಕ್ಕೂ ಹೆಚ್ಚು AnTuTU ಸ್ಕೋರ್ ಪಡೆಯಲಿದೆ ಎಂದು ಕಂಪನಿ ಹೇಳಿದೆ.
RAM ಮತ್ತು ಸ್ಟೋರೇಜ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ 4GB ಮತ್ತು 6GB RAM ಹೊಂದಿದೆ. ಈ ಫೋನಿನ ಮೂಲ ರೂಪಾಂತರವು 4GB RAM ನೊಂದಿಗೆ ಬರುತ್ತದೆ. 4GB RAM ಮಾದರಿಯು 4GB ವರ್ಚುವಲ್ RAM ಮತ್ತು 6GB RAM ಮಾದರಿಯು 6GB ವರ್ಚುವಲ್ RAM ಹೊಂದಿದೆ. ಈ ಫೋನಿನಲ್ಲಿ 128GB ಸ್ಟೋರೇಜ್ ಆಯ್ಕೆ ಒದಗಿಸಲಾಗಿದೆ.

ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್ ಲೈಟ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೊನ್, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಸ್ಮಾರ್ಟ್‌ಫೋನ್ 25W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಈ 25W ಚಾರ್ಜರ್ ಫೋನ್ ಬಾಕ್ಸ್‌ನಲ್ಲಿ ಲಭ್ಯವಿರುವುದಿಲ್ಲ. ಈ ಮೊಬೈಲ್‌ನಲ್ಲಿ ಯುಎಸ್‌ಬಿ ಟೈಪ್ ಸಿ ಪೋರ್ಟ್ ಒದಗಿಸಲಾಗುವುದು.
ಇತರೆ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಫೋನ್ 2 5G ಬ್ಯಾಂಡ್‌ಗಳೊಂದಿಗೆ ಬರುತ್ತದೆ. ನೀವು ಜಿಯೋ ಮತ್ತು ಏರ್‌ಟೆಲ್ ಜೊತೆಗೆ Vi ನೆಟ್‌ವರ್ಕ್‌ನಲ್ಲಿ ಸುಲಭವಾಗಿ ಬಳಸಬಹುದು. ಡೇಟಾವನ್ನು ಮತ್ತೊಂದು ಫೋನಿಗೆ ವರ್ಗಾಯಿಸಲು ಇದರಲ್ಲಿ ಕ್ವಿಕ್ ಶೇರ್ ವೈಶಿಷ್ಟ್ಯ ನೀಡಲಾಗಿದೆ. ಈ ಫೋನ್ ಅನ್‌ಲಾಕ್ ಮತ್ತು ಭದ್ರತೆಗಾಗಿ ಸೈಡ್ ಫ್ರೇಮ್‌ನಲ್ಲಿ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ.


Click it and Unblock the Notifications








