Home
ಮೊಬೈಲ್

ಈ ಅವಕಾಶ ಬಿಡಬೇಡಿ! 6000mAh ಬ್ಯಾಟರಿ.. 50MP ಕ್ಯಾಮೆರಾ.. Samsung 5G ಫೋನಿಗೆ ಬಂಪರ್ ಆಫರ್

ಸ್ಯಾಮ್‌ಸಂಗ್ ಪ್ರಿಯರಿಗೆ ಫ್ಲಿಪ್‌ಕಾರ್ಟ್ ಒಳ್ಳೆಯ ಸುದ್ದಿ ನೀಡಿದೆ. ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G (Samsung Galaxy F15 5G) ಫೋನಿಗೆ ಬೆಲೆಯನ್ನು ಮತ್ತಷ್ಟು ಇಳಿಕೆ ಮಾಡಿದೆ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಈ ಮೊಬೈಲ್ ಶೇ.21 ರಷ್ಟು ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ನೀವು 12,500 ರೂ.ಗಿಂತ ಕಡಿಮೆ ಬೆಲೆಯಲ್ಲಿ ಈ ಫೋನನ್ನು ನಿಮ್ಮದಾಗಿಸಿಕೊಳ್ಳಬಹುದು. ಬನ್ನಿ, ಈ ಫೋನಿನ ಮೂಲ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6000mAh ಬಿಗ್ ಬ್ಯಾಟರಿಯನ್ನು ಹೊಂದಿದೆ. ಈ ಫೋನಿನಲ್ಲಿ 6.5 ಇಂಚಿನ ಡಿಸ್ಪ್ಲೇ ಇದೆ. ಜೊತೆಗೆ,4GB RAM + 128GB ಸ್ಟೋರೇಜ್‌ ಮತ್ತು 25W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ಫೀಚರ್ಸ್ ಒಳಗೊಂಡಿದೆಫ್ಲಿಪ್‌ಕಾರ್ಟ್‌ನಲ್ಲಿ ಯಾವೆಲ್ಲಾ ಆಫರ್‌ಗಳು ಲಭ್ಯವಿದೆ ಎಂದು ತಿಳಿಯಲು ಮುಂದೆ ಓದಿ.

ಬಂಪರ್ ಆಫರ್! 6000mAh ಬ್ಯಾಟರಿ, 50MP ಕ್ಯಾಮೆರಾ.. ಕಡಿಮೆ ಬೆಲೆಗೆ Samsung ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಬೆಲೆ ಮತ್ತು ಆಫರ್‌ಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನಿನ 4GB RAM + 128GB ಸ್ಟೋರೇಜ್‌ ರೂಪಾಂತರದ ಮೇಲೆ ಶೇ. 21ರಷ್ಟು ರಿಯಾಯಿತಿ ಲಭ್ಯವಿದೆ. ಇದರ ಬೆಲೆ 12,499 ರೂ. ಆಗಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ, ಶೇ.5 ರಷ್ಟು (ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ) ಕ್ಯಾಶ್‌ಬ್ಯಾಕ್ ಸಿಗುತ್ತದೆ. ಈ ಮೂಲಕ ನೀವು ಕಡಿಮೆ ಬೆಲೆಗೆ ಈ ಫೋನನ್ನು ಕೊಳ್ಳಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಫುಲ್ ಎಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2,340 x 1,080 ಪಿಕ್ಸೆಲ್‌ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 90Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಪ್ರೊಸೆಸರ್ ಯಾವುದು

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಈ ಫೋನ್ ಆಂಡ್ರಾಯ್ಡ್‌ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಬಳಕೆದಾರರು ಗೇಮಿಂಗ್ ಆಪ್‌ಗಳನ್ನು ಯಾವುದೇ ಕಿರಿಕಿರಿ ಇಲ್ಲದೆ ಬಳಸಬಹುದು. ಈ ಫೋನ್ 4GB RAM + 128GB ಸ್ಟೋರೇಜ್‌ ಹೊಂದಿದೆ. ನೀವು, ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಬಂಪರ್ ಆಫರ್! 6000mAh ಬ್ಯಾಟರಿ, 50MP ಕ್ಯಾಮೆರಾ.. ಕಡಿಮೆ ಬೆಲೆಗೆ Samsung ಫೋನ್

ಮೂರು ಕ್ಯಾಮೆರಾಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದು ಎಲ್ಇಡಿ ಫ್ಲ್ಯಾಷ್ ಮತ್ತು ವಿವಿಧ ಕ್ಯಾಮೆರಾ ವೈಶಿಷ್ಟ್ಯಗಳನ್ನು ಸಹ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಅದ್ಭುತ ಬ್ಯಾಟರಿ ಬ್ಯಾಕಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್ 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಇದು 13 5G ಬ್ಯಾಂಡ್‌ಗಳ ಬೆಂಬಲ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, ಡ್ಯುಯಲ್ 4G VoltE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

Best Mobiles in India

English summary
Samsung Galaxy F15 5G Available With 25 percent discount on Flipkart sale: check new price, offers, specification and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+