Home
ಮೊಬೈಲ್

ಅಗ್ಗದ Samsung 5G ಫೋನ್ ಬಿಡುಗಡೆ; ಬೆಲೆ ಎಷ್ಟು? ಏನೆಲ್ಲಾ ವಿಶೇಷತೆಗಳಿವೆ?

ಟೆಕ್ ದೈತ್ಯ ಸ್ಯಾಮ್‌ಸಂಗ್ ಮತ್ತೊಂದು ಹೊಸ ಮೊಬೈಲ್ ಬಿಡುಗಡೆ ಮಾಡಿದೆ. ಇದನ್ನು ಕಳೆದ ವರ್ಷ ಮಾರ್ಚ್‌ನಲ್ಲಿ ಬಿಡುಗಡೆಯಾಗಿದ್ದ Samsung Galaxy F15 5G ಫೋನಿನ ​​ಉತ್ತರಾಧಿಕಾರಿಯಾಗಿ ಪರಿಚಯಿಸಲಾಗಿದೆ. ಹೌದು, ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G (Samsung Galaxy F16 5G) ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆಯಾಗಿದೆ. ಇದು 15,000 ರೂ. ಬಜೆಟ್‌ನಲ್ಲಿ ಬರುತ್ತದೆ. ಈ ಫೋನಿನ ಎಂಟ್ರಿಗೆ ಎದುರಾಳಿಗಳಿಗೆ ನಡುಕ ಉಂಟಾಗಿದೆ. ಈ ಹೊಸ ಗ್ಯಾಲಕ್ಸಿ F16 5G ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಮೊಬೈಲ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 8GB RAM, 128GB ಸ್ಟೋರೇಜ್, 5,000mAh ಬ್ಯಾಟರಿ ಮತ್ತು 25W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಅಗ್ಗದ Samsung 5G ಫೋನ್ ಬಿಡುಗಡೆ; ಬೆಲೆ ಎಷ್ಟು? ಏನೆಲ್ಲಾ ವಿಶೇಷತೆಗಳಿವೆ?

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಬೆಲೆ ಮತ್ತು ಲಭ್ಯತೆ

4GB RAM 128GB ಸ್ಟೋರೇಜ್ ಬೆಲೆ = 13,499 ರೂ.
6GB RAM 128GB ಸ್ಟೋರೇಜ್ ಬೆಲೆ = 14,999 ರೂ.
8GB RAM 128GB ಸ್ಟೋರೇಜ್ ಬೆಲೆ = 16,499 ರೂ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಫೋನಿನ ಬೆಲೆ ಎಲ್ಲಾ ಆಫರ್‌ಗಳನ್ನು ಒಳಗೊಂಡಂತೆ 11,499 ರೂ.ಗಳಿಂದ ಪ್ರಾರಂಭವಾಗುತ್ತದೆ. ಇದು ಮಾರ್ಚ್ 13 ರಂದು ಮಧ್ಯಾಹ್ನ 12 ಗಂಟೆಗೆ ತನ್ನ ಮೊದಲ ಮಾರಾಟ ಪ್ರಾರಂಬಿಸಲಿದೆ. ನೀವು ಫ್ಲಿಪ್‌ಕಾರ್ಟ್‌ ಮೂಲಕ ಈ ಮೊಬೈಲ್ ಕೊಳ್ಳಬಹುದು. ಇದು ಹ್ಯಾಂಡ್‌ಸೆಟ್ ಬ್ಲಿಂಗ್ ಬ್ಲ್ಯಾಕ್, ಗ್ಲಾಮ್ ಗ್ರೀನ್ ಮತ್ತು ವೈಬಿಂಗ್ ಬ್ಲೂ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 x 2,340 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 90Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ One UI 7 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದು ಆರು ಓಎಸ್ ಅಪ್‌ಗ್ರೇಡ್‌ಗಳು ಮತ್ತು ಆರು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.

ಸ್ಟೋರೇಜ್ ಆಯ್ಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಫೋನ್ 8GB ವರೆಗೆ RAM ನೊಂದಿಗೆ ಬಿಡುಗಡೆಯಾಗಿದೆ. ಇದರೊಂದಿಗೆ 128GB ಆಂತರಿಕ ಸ್ಟೋರೇಜ್ ಒಳೊಂಡಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1.5TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಅಗ್ಗದ Samsung 5G ಫೋನ್ ಬಿಡುಗಡೆ; ಬೆಲೆ ಎಷ್ಟು? ಏನೆಲ್ಲಾ ವಿಶೇಷತೆಗಳಿವೆ?

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಸ್ಮಾರ್ಟ್‌ಫೋನ್‌ ಅದ್ಭುತ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ (ಮ್ಯಾಕ್ರೋ) ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, QZSS ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂದಿದೆ.

Best Mobiles in India

English summary
Samsung Galaxy F16 5G With MediaTek Dimensity 6300 SoC Launched in India: check Price, offers, Specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+