Home
ಮೊಬೈಲ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 VS ರೆಡ್ಮಿ ನೋಟ್ 10: ಯಾವುದು ಉತ್ತಮ ಆಯ್ಕೆ?

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ರಚನೆ ಪಡೆದಿರುವುದು ಹೈಲೈಟ್‌ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ ಸಹ ಬಜೆಟ್ ದರದಲ್ಲಿ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಆದರೆ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ ಆಯ್ಕೆ?

ಪ್ರೈಸ್‌

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ನೂತನ ಗ್ಯಾಲಕ್ಸಿ F22 ಮತ್ತು ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಪ್ರೈಸ್‌ ಟ್ಯಾಗ್‌ ಹೊಂದಿರುವುದು ಮೊದಲ ಆಕರ್ಷಕ ಅನಿಸಿದೆ. ಹಾಗೆಯೇ ಈ ಎರಡು ಫೋನ್‌ಗಳು ಕ್ವಾಡ್‌ ಕ್ಯಾಮೆರಾ ರಚನೆ ಪಡೆದಿರುವುದು ಜೊತೆಗೆ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆಯನ್ನು ಹೊಂದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಗುರುತಿಸಿಕೊಂಡಿದೆ. ಈ ಎರಡು ಫೋನ್‌ಗಳ ಬಹುತೇಕ ಫೀಚರ್ಸ್‌ಗಳಲ್ಲಿ ಸಾಮ್ಯತೆ ಕಂಡು ಬಂದರು, ಇವೆರಡರ ಮಧ್ಯೆ ಭಿನ್ನತೆಗಳು ಇವೆ. ಹಾಗಾದರೇ ಈ ಎರಡು ಫೋನ್‌ಗಳಲ್ಲಿ ಖರೀದಿಗೆ ಯಾವುದು ಉತ್ತಮ? ಇವೆರಡು ಫೋನ್‌ಗಳ ಕಂಪ್ಲೀಟ್‌ ಫೀಚರ್ಸ್‌ ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸದ ಭಿನ್ನತೆಗಳೆನು

ಡಿಸ್‌ಪ್ಲೇ ವಿನ್ಯಾಸದ ಭಿನ್ನತೆಗಳೆನು

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 700x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಸ್ಯಾಮೋಲ್ಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಅದೇ ರೀತಿ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ.

ಪ್ರೊಸೆಸರ್ ಕಾರ್ಯ ಹೇಗೆ

ಪ್ರೊಸೆಸರ್ ಕಾರ್ಯ ಹೇಗೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಫೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಒನ್ ಯುಐ 3.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ. ಹಾಗೆಯೇ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ವಾಡ್ ಕ್ಯಾಮೆರಾ ಸ್ಪೆಷಲ್

ಕ್ವಾಡ್ ಕ್ಯಾಮೆರಾ ಸ್ಪೆಷಲ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಆದಾಗ್ಯೂ, ಸ್ಯಾಮ್‌ಸಂಗ್ ಬಾಕ್ಸ್ ಒಳಗೆ 15W ಚಾರ್ಜರ್ ಅನ್ನು ಬಂಡಲ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ಬ್ಲೂಟೂತ್ ವಿ 5, ಎನ್ಎಫ್‌ಸಿ ಯನ್ನು ಹೊಂದಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್ಲಾಕ್ ಬೆಂಬಲವಿದೆ. ಇದು ಸ್ಯಾಮ್‌ಸಂಗ್ ಪೇ ಮಿನಿ ಅನ್ನು ಬೆಂಬಲಿಸುತ್ತದೆ. ಅದೇ ರೀತಿ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ v5.0, ಇನ್ಫ್ರಾರೆಡ್ (ಐಆರ್), ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM + 64GB ಶೇಖರಣಾ ಮಾದರಿಗೆ 12,499ರೂ ಬೆಲೆಯನ್ನು ಹೊಂದಿದೆ. ಇದಲ್ಲದೆ 6GB RAM+ 128GB ಸಂಗ್ರಹ ಸಂರಚನೆಗೆ 14,499 ರೂ. ಬೆಲೆಯನ್ನು ಪಡೆದುಕೊಂಡಿದೆ. ಮೊದಲ ಮಾರಾಟ ಜುಲೈ 13 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ನಡೆಯಲಿದೆ. ಇನ್ನು ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 4GB RAM + 64 GB ಸ್ಟೋರೇಜ್ ರೂಪಾಂತರಕ್ಕೆ 11,999 ರೂ ಬೆಲೆಯನ್ನು ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 13,999 ರೂ.ಬೆಲೆಯನ್ನು ಹೊಂದಿದೆ.

Best Mobiles in India

English summary
Both devices feature AMOLED panels, but there is an odd gain and loss theory here since the Samsung offers 90Hz refresh rate support.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+