ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಫಸ್ಟ್‌ ಲುಕ್; ಕಡಿಮೆ ದರದಲ್ಲಿ ಆಕರ್ಷಕ ಫೋನ್!

|

ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಇದರೊಂದಿಗೆ ಅಧಿಕ RAM ಹಾಗೂ ವೇಗದ ಪ್ರೊಸೆಸರ್‌ ಫೀಚರ್ಸ್‌ಗಳಿಂದಲೂ ಈ ಫೋನ್ ಮತ್ತಷ್ಟು ಟ್ರೆಂಡಿ ಅನಿಸಿಕೊಂಡಿದೆ.

ಗ್ಯಾಲಕ್ಸಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 4GB RAM ಮತ್ತು 6GB RAM ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು 64ಎಂಪಿ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಸ್ಕ್ರೀನ್ ರೆಸಲ್ಯೂಶನ್ ಅಧಿಕವಾಗಿದೆ. ಹಾಗಾದರೇ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಇನ್ಫಿನಿಟಿ-ಯು ಡಿಸ್‌ಪ್ಲೇಯನ್ನು ಹೊಂದಿದೆ. ಇದು 420 ನಿಟ್‌ ಬ್ರೈಟ್‌ನೆಶ್‌ ಅನ್ನು ಹೊಂದಿದ್ದು, ಉತ್ತಮ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯ ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ. ಹೈ ಎಂಡ್‌ ಗೇಮ್‌ಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ.

ಪ್ರೊಸೆಸರ್‌ ಕಾರ್ಯ ವೈಖರಿ

ಪ್ರೊಸೆಸರ್‌ ಕಾರ್ಯ ವೈಖರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಆಕ್ಟಾ-ಕೋರ್‌-ಎಕ್ಸಿನೋಸ್ 9611 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ. ವೇಗದ ಗೇಮಿಂಗ್‌ ಆಟಗಳಿಗೆ ಪೂರಕವಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದ್ದು, ಇದು 123 ಡಿಗ್ರಿಗಳಷ್ಟು ವೀಕ್ಷಣಾ ಕ್ಷೇತ್ರವನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಲೈವ್‌ ಫೋಕಸ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಮುಖ್ಯ ಕ್ಯಾಮೆರಾ ಟ್ರೆಂಡಿ ಆಗಿ ಕಾಣಿಸಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ F41 ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಚಾರ್ಜರ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ. ಜೊತೆಗೆ 3.5mm ಆಡಿಯೊ ಜ್ಯಾಕ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್‌ 6GB RAM + 64GB ಮಾದರಿಗೆ 15,499ರೂ. ಬೆಲೆಯನ್ನು ಹೊಂದಿದೆ. ಇನ್ನು 6GB RAM+ 128GB ಮಾದರಿಯ ಬೆಲೆ ರೂ. 16,499 ಆಗಿದೆ. ಆನ್‌ಲೈನ್‌ ತಾಣಗಳ ಮೂಲಕ ಗ್ರಾಹಕರು ಖರೀದಿಸಬಹುದಾಗಿದೆ.

Best Mobiles in India

English summary
Galaxy F41 packs in a standard unibody plastic design with glancing edges and a somewhat glossy finish.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X