ಚೀನಾ ಕಂಪನಿಗಳಿಗೆ ಮಾರಕವಾಗಲಿದೆ ಸ್ಯಾಮ್‌ಸಂಗ್‌ನ ಡ್ಯುಯಲ್ ಕ್ಯಾಮೆರಾ ಸ್ಮಾರ್ಟ್‌ಫೋನ್!
ಇದು ಕಡಿಮೆ ಬೆಲೆಗೆ ದೊರೆಯುತ್ತಿರುವ ಚೀನಾ ಸ್ಮಾರ್ಟ್‌ಫೋನ್‌ಗಳಿಗೆ ಮಾರಕವಾಗಲಿದ್ದು, ಈ ಫೋನ್ ಈಗಾಗಲೇ ಥೈಲೆಂಡ್ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿದ್ದು,
ಸ್ಯಾಮ್‌ಸಂಗ್ ಗ್ಯಾಲೆಕ್ಸಿ ಸರಣಿಯ ಮತ್ತೊಂದು ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಕಡಿಮೆ ಬೆಲೆಗೆ ದೊರೆಯುತ್ತಿರುವ ಚೀನಾ ಸ್ಮಾರ್ಟ್‌ಫೋನ್‌ಗಳಿಗೆ ಮಾರಕವಾಗಲಿದ್ದು, ಈ ಫೋನ್ ಈಗಾಗಲೇ ಥೈಲೆಂಡ್ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿದ್ದು, ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದೆ.

ಓದಿರಿ: ಜಿಯೋ ಎಫೆಕ್ಟ್: ವೊಡಾಫೋನ್ ಕೊಟ್ಟ ನಂಬಲಾಗದ ಆಫರ್ ಇದು..!!
ಸ್ಯಾಮ್‌ಸಂಗ್ ಗ್ಯಾಲೆಕ್ಸಿ J7+ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ರೂ. 24,800 ಗಳಿಗೆ ಮಾರಾಟವಾಗಲಿದ್ದು, ಸೆಪ್ಟಂಬರ್ 15 ರಿಂದ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದ್ದು, ಇದರಲ್ಲಿ ಡ್ಯುಯಲ್ ಆಪ್ ಗಳನ್ನು ಬಳಕೆ ಮಾಡಿಕೊಳ್ಳುವ ಅವಕಾಶವನ್ನು ನೀಡಲಾಗಿದೆ.

5.5 ಇಂಚಿನ ಡಿಸ್ ಪ್ಲೇ:
ಸ್ಯಾಮ್‌ಸಂಗ್ ಗ್ಯಾಲೆಕ್ಸಿ J7+ ಸ್ಮಾರ್ಟ್‌ಫೋನಿನಲ್ಲಿ 5.5 ಇಂಚಿನ FHD ಅಮೊಲೈಡ್‌ನ ಡಿಸ್‌ಪ್ಲೇ ಇದೆ. ಗೇಮ್ ಆಡಲು ಮತ್ತು ವಿಡಿಯೋ ನೋಡಲು ಇದು ಉತ್ತಮವಾಗಿರಲಿದೆ.

ವೇಗದ ಪ್ರೋಸೆಸರ್:
ಸ್ಯಾಮ್‌ಸಂಗ್ ಗ್ಯಾಲೆಕ್ಸಿ J7+ ಸ್ಮಾರ್ಟ್‌ಫೋನಿನಲ್ಲಿ 4GB RAM ಅಳವಡಿಸಲಾಗಿದೆ. ಇದರೊಂದಿಗೆ 2.4GHz ಹೆಲಿಯೋ ಆಕ್ಟಾ ಕೋರ್ ಪ್ರೋಸೆಸರ್ ಇದೆ. ಇದಲ್ಲದೇ 32GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದು. ಅಲ್ಲದೇ 256 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್:
ಸ್ಯಾಮ್‌ಸಂಗ್ ಗ್ಯಾಲೆಕ್ಸಿ J7+ ಸ್ಮಾರ್ಟ್‌ಫೋನಿನ ಹಿಂಭಾಗದಲ್ಲಿ 13MP + 5 MP ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದು. ಇದರೊಂದಿಗೆ LED ಫ್ಲಾಷ್ ಲೈಟ್ ಸಹ ನೀಡಲಾಗಿದೆ. ಮುಂಭಾಗದಲ್ಲಿ 16 MP ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದರೊಂದಿಗೆ LED ಫ್ಲಾಷ್ ನೀಡಲಾಗಿದೆ.

ದೊಡ್ಡ ಬ್ಯಾಟರಿ:
ಸ್ಯಾಮ್‌ಸಂಗ್ ಗ್ಯಾಲೆಕ್ಸಿ J7+ ಸ್ಮಾರ್ಟ್‌ಫೋನಿನಲ್ಲಿ 3000mAh ಬ್ಯಾಟರಿಯನ್ನು ಕಾಣಬಹುದಾಗಿದೆ. ಇದು ಹೆಚ್ಚಿನ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ದೀರ್ಘಕಾಲದ ವಿಡಿಯೋ ವೀಕ್ಷಣೆಗೆ ಇದು ಸಹಾಯಕಾರಿಯಾಗಿದೆ.

ಮಲ್ಟಿ ವಿಂಡೋ ಆಯ್ಕೆ:
ಮಲ್ಟಿ ವಿಂಡೋ ಆಯ್ಕೆಯನ್ನು ನೀಡಲಾಗಿದ್ದು, ಇವುಗಳಲ್ಲಿ ಡ್ಯುಯಲ್ ಆಪ್ ಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಎರಡು ವ್ಯಾಟ್ಸಪ್ ಹಾಕಿಕೊಳ್ಳಬಹುದಾಗಿದೆ. ಇದರೊಂದಿಗೆ 4G VoLTE, Wi-Fi ಸೇರಿದಂತೆ ಹಲವು ಆಯ್ಕೆಗಳನ್ನು ನೀಡಲಾಗಿದೆ.


Click it and Unblock the Notifications








