Home
ಮೊಬೈಲ್

ಜಸ್ಟ್ 9,499 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ.. ಇಂದು ಹೊಸ Samsung 5G ಫೋನ್ ಸೇಲ್

ಸ್ಯಾಮ್‌ಸಂಗ್ ಇತ್ತೀಚೆಗೆ ಭಾರತದಲ್ಲಿ ಎರಡೂ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G (Samsung Galaxy M06 5G) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G (Samsung Galaxy M16 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಸೊಗಸಾದ ವಿನ್ಯಾಸ ಮತ್ತು ಉತ್ತಮ ವೈಶಿಷ್ಟ್ಯಗಳನ್ನು ಹೊಂದಿವೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಮೊಬೈಲ್ ಇಂದಿನಿಂದ (ಮಾರ್ಚ್ 7) ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.74 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಜ್ಜಾಗಿದೆ.

ಇಂದು Samsung Galaxy M06 ಸೇಲ್; ಜಸ್ಟ್ 9,499 ರೂ.! ವಿಶೇಷತೆಗಳೇನು?

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಫೋನಿನ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 9,999 ರೂ. ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ರೂಪಾಂತರನ್ನು 11,499 ರೂ.ಗೆ ಬಿಡುಗಡೆಯಾಗಿದೆ. ಕಂಪನಿಯು ಈ ಮೊಬೈಲ್ ಖರೀದಿ ಮೇಲೆ 500 ರೂ.ಗಳ ಬ್ಯಾಂಕ್ ರಿಯಾಯಿತಿ ಘೋಷಿಸಿದೆ.

ನೀವು ಡಿಸ್ಕೌಂಟ್ ಬಳಿಕ ಈ ಫೋನನ್ನು 9,499 ರೂ. ಮತ್ತು 10,999 ರೂ.ಗೆ ಖರೀದಿಸಬಹುದು. ಈ ಮೊಬೈಲ್ ಇಂದಿನಿಂದ (ಮಾರ್ಚ್ 7) ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್ ಮತ್ತು ಜನಪ್ರಿಯ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು ಸೇಜ್ ಗ್ರೀನ್ (Sage Green) ಮತ್ತು ಬ್ಲೇಜಿಂಗ್ ಬ್ಲಾಕ್ (Blazing Black) ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಮೊಬೈಲ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ವಾಟರ್‌ಡ್ರಾಪ್ ನಾಚ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇ 90Hz ರಿಫ್ರೆಶ್ ದರ, 800 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಸ್ಮಾರ್ಟ್‌ಫೋನ್ ಸುರಕ್ಷತೆಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7.0 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದು 4 ಆಂಡ್ರಾಯ್ಡ್ ಓಎಸ್ ನವೀಕರಣಗಳನ್ನು ಹಾಗೂ 4 ವರ್ಷಗಳವರೆಗೆ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.

ಇಂದು Samsung Galaxy M06 ಸೇಲ್; ಜಸ್ಟ್ 9,499 ರೂ.! ವಿಶೇಷತೆಗಳೇನು?

ಸ್ಟೋರೇಜ್ ಆಯ್ಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಫೋನ್ 4GB ಮತ್ತು 6GB RAM ನೊಂದಿಗೆ ಬಿಡುಗಡೆಯಾಗಿದೆ. ಇದು ವಿಸ್ತೃತ RAM ತಂತ್ರಜ್ಞಾನವನ್ನು ಹೊಂದಿದೆ. ನೀವು 8GB ಮತ್ತು 12GB RAM ವರೆಗೆ ಬಳಸಬಹುದು. ಈ ಮೊಬೈಲ್ 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್ ಲೈಟ್‌ನೊಂದಿಗೆ ಬರುತ್ತದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M06 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೊನಿನಲ್ಲಿ 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 12 5G ಬ್ಯಾಂಡ್‌ಗಳನ್ನು ಹೊಂದಿದೆ. ಇದು ಉತ್ತಮ 5G ನೆಟ್‌ವರ್ಕ್ ಮತ್ತು ವೇಗದ ಇಂಟರ್ನೆಟ್ ಒದಗಿಸುತ್ತದೆ.

Best Mobiles in India

English summary
Samsung Galaxy M06 5G First Sale Start in india Today via Flipkart: check price, offers, specification and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+