Home
ಮೊಬೈಲ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 VS ಗ್ಯಾಲಕ್ಸಿ A12 VS ಗ್ಯಾಲಕ್ಸಿ F12: ಯಾವುದು ಬೆಸ್ಟ್‌?

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗೆ ಬಜೆಟ್‌ ದರದ ಬೆಲೆಯಲ್ಲಿ ಭರ್ಜರಿ ಫೀಚರ್ಸ್‌ ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಮುಖ್ಯವಾಗಿ ಬಜೆಟ್‌ ಪ್ರೈಸ್‌ನಲ್ಲಿ ಶಿಯೋಮಿ ಸೇರಿದಂತೆ ಇತರೆ ಮೊಬೈಲ್‌ ಕಂಪನಿಗಳಿಗೆ ಪೆಟ್ಟು ನೀಡಿದೆ. ಕಂಪನಿಯು ಗ್ಯಾಲಕ್ಸಿ M, ಗ್ಯಾಲಕ್ಸಿ F ಮತ್ತು ಗ್ಯಾಲಕ್ಸಿ A ಸರಣಿಯಲ್ಲಿ ಆಕರ್ಷಕ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಗ್ಯಾಲಕ್ಸಿ M12, ಗ್ಯಾಲಕ್ಸಿ A12 ಮತ್ತು ಗ್ಯಾಲಕ್ಸಿ F12 ಫೋನ್‌ಗಳು ಬಹುತೇಕ ಫೋನ್‌ ಪ್ರಿಯರ ಗಮನ ಸೆಳೆದಿವೆ. ಈ ಮೂರು ಬಜೆಟ್‌ ಫೋನ್‌ಗಳಲ್ಲಿ ಯಾವುದು ಬೆಸ್ಟ್‌?

ಬಜೆಟ್‌

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ನೂತನ ಗ್ಯಾಲಕ್ಸಿ M12, ಗ್ಯಾಲಕ್ಸಿ A12 ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಪ್ರೈಸ್‌ ಟ್ಯಾಗ್‌ ಹೊಂದಿರುವುದು ಮೊದಲ ಆಕರ್ಷಕ ಅನಿಸಿದೆ. ಹಾಗೆಯೇ ಈ ಮೂರು ಫೋನ್‌ಗಳು ಅತ್ಯುತ್ತ ಕ್ಯಾಮೆರಾ, ಬಿಗ್ ಬ್ಯಾಟರಿ ಬ್ಯಾಕ್‌ಅಪ್, ವೇಗದ ಪ್ರೊಸೆಸರ್‌ ಹಾಗೂ ಆಕರ್ಷಕ ಡಿಸೈನ್‌ಗಳಿಂದ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿವೆ. ಗ್ಯಾಲಕ್ಸಿ M12, ಗ್ಯಾಲಕ್ಸಿ A12 ಮತ್ತು ಗ್ಯಾಲಕ್ಸಿ F12 ಈ ಮೂರು ಫೋನ್‌ಗಳು ಒಂದೇ ರೀತಿಯಂತೆ ಕಂಡು ಬಂದರೂ ಇವುಗಳ ನಡುವೆ ಭಿನ್ನತೆಗಳು ಇವೆ. ಹಾಗಾದರೇ ಈ ಮೂರು ಫೋನ್‌ಗಳ ಭಿನ್ನತೆಗಳೆನು?..ಖರೀದಿಗೆ ಯಾವುದು ಬೆಸ್ಟ್‌ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸದ ಭಿನ್ನತೆಗಳೆನು

ಡಿಸ್‌ಪ್ಲೇ ವಿನ್ಯಾಸದ ಭಿನ್ನತೆಗಳೆನು

ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಅದೇ ರೀತಿ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ ವಿಭಾಗದಲ್ಲಿ ಈ ಮೂರು ಮಾಡೆಲ್‌ಗಳು ಬಹುತೇಕ ಸಾಮ್ಯತೆ ಪಡೆದಿವೆ.

ಪ್ರೊಸೆಸರ್ ಕಾರ್ಯ ಹೇಗೆ

ಪ್ರೊಸೆಸರ್ ಕಾರ್ಯ ಹೇಗೆ

ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಹೊಂದಿದೆ. ಹಾಗೆಯೇ ಗ್ಯಾಲಕ್ಸಿ F12 ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ. ಇನ್ನು ಗ್ಯಾಲಕ್ಸಿ A12 ಫೋನ್ ಆಕ್ಟಾ-ಕೋರ್‌ ಮೀಡಿಯಾ ಟೆಕ್‌ ಹಿಲಿಯೊ P35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM+64GB ಮತ್ತು 4GB RAM +128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಪ್ರೊಸೆಸರ್‌ಗಳಲ್ಲಿ ಭಿನ್ನತೆ ಕಾಣಬಹುದು.

ಕ್ವಾಡ್ ಕ್ಯಾಮೆರಾ ಸ್ಪೆಷಲ್

ಕ್ವಾಡ್ ಕ್ಯಾಮೆರಾ ಸ್ಪೆಷಲ್

ಗ್ಯಾಲಕ್ಸಿ M12 ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು 5 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದೆ. ಹಾಗೆಯೇ ಗ್ಯಾಲಕ್ಸಿ F12 ಫೋನ್‌ ಕ್ವಾಡ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು 5 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದೆ. ಇನ್ನು ಗ್ಯಾಲಕ್ಸಿ A12 ಫೋನ್‌ ಕ್ವಾಡ್ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ

ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಗ್ಯಾಲಕ್ಸಿ A12 ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಬ್ಯಾಟರಿ ವಿಭಾಗದಲ್ಲಿ ಗ್ಯಾಲಕ್ಸಿ A12 ಫೋನ್‌ ಭಿನ್ನವಾಗಿ ಕಾಣಿಸುತ್ತದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ M12, ಗ್ಯಾಲಕ್ಸಿ A12 ಮತ್ತು ಗ್ಯಾಲಕ್ಸಿ F12 ಫೋನ್‌ ಬಜೆಟ್‌ ಪ್ರೈಸ್‌ ಹೊಂದಿದ್ದು, ಆರಂಭಿಕ ವೇರಿಯಂಟ್‌ ಫೋನ್ 14,000ರೂ.ಗಳ ಒಳಗೆ ಲಭ್ಯ ಇವೆ. ಈ ಮೂರು ಫೋನ್‌ಗಳ ಪೈಕಿ ಗ್ಯಾಲಕ್ಸಿ A12 ಫೋನ್ ಬೆಲೆಯು ಸ್ವಲ್ಪ ಹೆಚ್ಚು ಆಗಿದೆ.

Best Mobiles in India

English summary
Samsung Galaxy M12 VS Galaxy F12 VS Galaxy A12: Which One Best To Buy.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+