Just In
Don't Miss
- Sports
ಐಪಿಎಲ್ 2021, CSK vs DC : ಪ್ರಿವ್ಯೂ, ಸಂಭಾವ್ಯ ತಂಡ, ನೇರ ಪ್ರಸಾರ, ಹವಾಮಾನ ವರದಿ, ಪಿಚ್ ರಿಪೋರ್ಟ್
- News
ಬೆಳಗಾವಿ: ಸಭೆಗೂ ಮುನ್ನ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ
- Automobiles
ಶೀಘ್ರದಲ್ಲೇ ಬಿಡುಗಡೆಯಾಗಲಿವೆ ಟಾಟಾ ಟಿಗೋರ್ ಮತ್ತು ಟಿಯಾಗೋ ಕಾರುಗಳ ಸಿಎನ್ಜಿ ವವರ್ಷನ್
- Finance
ತೈಲ ಬಳಕೆಯಲ್ಲಿ ದಾಖಲೆಯ ಕುಸಿತ: ಶೇಕಡಾ 9.1ರಷ್ಟು ಇಳಿಕೆ
- Education
Regional Commissioner office Belagavi Recruitment 2021: ಅಸಿಸ್ಟೆಂಟ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚೊಚ್ಚಲ ಪಂದ್ಯದಲ್ಲಿ ಗೆದ್ದ ಆರ್ಸಿಬಿ: ಮನೇದೇವ್ರು ಎಬಿಡಿ ಕೊಂಡಾಡಿದ ಸುನಿ
- Lifestyle
ನಿಮಗೆ ಬರುತ್ತಿರುವ ನಿರಂತರ ತಲೆನೋವು ಇವುಗಳ ಸೂಚನೆಯಾಗಿರಗಬಹುದು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಮತ್ತು ಮೊಟೊ G30: ಖರೀದಿಗೆ ಯಾವುದು ಬೆಸ್ಟ್?
ಜನಪ್ರಿಯ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿರುವುದು ಹೈಲೈಟ್ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ಮೊಟೊ G30 ಸ್ಮಾರ್ಟ್‌ಫೋನ್ ಸಹ ಬಜೆಟ್ ದರದಲ್ಲಿ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಆದರೆ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ ಆಯ್ಕೆ?
ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ನೂತನ ಗ್ಯಾಲಕ್ಸಿ M12 ಮತ್ತು ಮೊಟೊ G30 ಸ್ಮಾರ್ಟ್‌ಫೋನ್‌ಗಳು ಗ್ರಾಹಕ ಸ್ನೇಹಿ ಬೆಲೆಯನ್ನು ಹೊಂದಿರುವುದು ಮೊದಲ ಆಕರ್ಷಕ ಅನಿಸಿದೆ. ಹಾಗೆಯೇ ಈ ಎರಡು ಫೋನ್‌ಗಳು ಕ್ವಾಡ್ ಕ್ಯಾಮೆರಾ ರಚನೆ ಪಡೆದಿರುವುದು ಜೊತೆಗೆ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆಯನ್ನು ಹೊಂದಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿವೆ. ಈ ಎರಡು ಫೋನ್‌ಗಳ ಬಹುತೇಕ ಫೀಚರ್ಸ್‌ಗಳಲ್ಲಿ ಸಾಮ್ಯತೆ ಕಂಡು ಬಂದರು, ಭಿನ್ನತೆಗಳು ಇವೆ. ಹಾಗಾದರೇ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ? ಇವೆರಡು ಫೋನ್‌ಗಳ ಕಂಪ್ಲೀಟ್ ಫೀಚರ್ಸ್ ಮಾಹಿತಿ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ಭಿನ್ನತೆಗಳೆನು
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 90Hz ಆಗಿದೆ. ಅದೇ ರೀತಿ ಮೊಟೊ G30 ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.
ಪ್ರೊಸೆಸರ್ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.ಅದೇ ರೀತಿ ಮೊಟೊ G30 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ.
ಕ್ವಾಡ್ ಕ್ಯಾಮೆರಾ ಸ್ಪೆಷಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರ್ ಇದ್ದು, f/2.2 ಅಪರ್ಚರ್ ಸಾಮರ್ಥ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್ ಸ್ಕೈಲ್ ನಾಚ್ ಇದೆ. ಹಾಗೆಯೇ ಮೊಟೊ G30 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13ಎಂಪಿ ಸೆನ್ಸಾರ್‌ನಲ್ಲಿದೆ.
ಬ್ಯಾಟರಿ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 4G ನೆಟ್‌ವರ್ಕ್‌ನಲ್ಲಿ 58 ಗಂಟೆಗಳ ಟಾಕ್‌ಟೈಮ್ ಅನ್ನು ನೀಡಲಿದೆ. ಈ ಫೋನ್ 164.0x75.9x9.7mm ಸುತ್ತಳತೆಯನ್ನು ಪಡೆದಿದ್ದು, ಹಾಗೆಯೇ 221 ಗ್ರಾಂ ತೂಕವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ. ಹಾಗೆಯೇ ಮೊಟೊ G30 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.
ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 4 ಜಿಬಿ + 64 ಜಿಬಿ ವೇರಿಯಂಟ್ ಸ್ಟೋರೇಜ್‌ನ ಬೆಲೆಯು 10,999ರೂ. ಆಗಿದೆ. ಹಾಗೆಯೇ 6 ಜಿಬಿ + 128 ಜಿಬಿ ಸ್ಟೋರೇಜ್‌ನ ವೇರಿಯಂಟ್ ಬೆಲೆಯು 13,499ರೂ. ಆಗಿದೆ. ಮೊಟೊ G30 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆಯು ಭಾರತದಲ್ಲಿ 10,999ರೂ. ಆಗಿದೆ. ಇನ್ನು ಈ ಫೋನ್ ಡಾರ್ಕ್ ಪರ್ಲ್ ಮತ್ತು ಪ್ಯಾಸ್ಟಲ್ ಸ್ಕೈ ಕಲರ್ ಆಯ್ಕೆಗಳನ್ನು ಹೊಂದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999