ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನಿಗೆ ಮತ್ತೆ ಡಿಸ್ಕೌಂಟ್!..ಬೆಸ್ಟ್ ಆಫರ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಬಜೆಟ್ ಬೆಲೆಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಇದೀಗ ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಬೊಂಬಾಟ್ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಸಂತಸ ನೀಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ 4GB RAM + 128 GB ಸ್ಟೋರೇಜ್ ವೇರಿಯಂಟ್ ಅಮೆಜಾನ್ ತಾಣದಲ್ಲಿ ಈಗ 22% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಈ ಫೋನ್ ಅನ್ನು 17,990ರೂ. ಗಳ ಬದಲಿಗೆ ಖರೀದಿದಾರರು 13,990 ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಸಹ ಲಭ್ಯವಾಗಲಿವೆ.

ಇನ್ನು ಈ ಮೊಬೈಲ್ ಎಕ್ಸಿನೋಸ್ 1330 ಆಕ್ಟಾ ಕೋರ್ SoC ಪ್ರೊಸೆಸರ್ ಹೊಂದಿದ್ದು, 6000 mAh ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದಿದೆ. ಈ ಫೋನ್ 4GB RAM + 128 GB ವೇರಿಯಂಟ್ ಜೊತೆಗೆ 6GB RAM ಮತ್ತು 128 GB ಸ್ಟೋರೇಜ್ ಆಯ್ಕೆಯಲ್ಲಿಯೂ ಖರೀದಿಸಬಹುದಾಗಿದೆ. ಇನ್ನು ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಇದರೊಂದಿಗೆ ಈ ಫೋನ್ ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಕಲರ್‌ಗಳ ಆಯ್ಕೆ ಪಡೆದಿದೆ. 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಡಿಸ್‌ಪ್ಲೇ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್ ಅನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಪ್ರೊಸೆಸರ್ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಎಕ್ಸಿನೋಸ್ 1330 ಆಕ್ಟಾ ಕೋರ್ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್ ಅನ್ನು ಪಡೆದಿದೆ. ಹಾಗೆಯೇ 6 GB RAM ಮತ್ತು 128 GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಕ್ಯಾಮೆರಾ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಬ್ಯಾಟರಿ ಮತ್ತು ಇತರೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25 W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದರೊಂದಿಗೆ ಕರೆಗಳ ಸಮಯದಲ್ಲಿ ಬ್ಯಾಕ್‌ಗ್ರೌಂಡ್ ಶಬ್ದವನ್ನು ಕ್ಯಾನ್ಸಲ್ ಮಾಡುವುದಕ್ಕಾಗಿ ವಾಯ್ಸ್ ಫೋಕಸ್ ಫೀಚರ್ಸ್ ಅನ್ನು ಸೇರ್ಪಡೆ ಮಾಡಿದೆ. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದಿದೆ.


Click it and Unblock the Notifications








