Home
ಮೊಬೈಲ್

ಮಾರುಕಟ್ಟೆ ಶೇಕ್! ಅಬ್ಬರಿಸಲು ಬಂತು Samsung Galaxy M16 5G ಫೋನ್; ಕೇವಲ 11,999 ರೂ.! ಅದ್ಭುತ ಫೀಚರ್ಸ್

ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G (Samsung Galaxy M16 5G) ಸ್ಮಾರ್ಟ್‌ಫೋನ್ ಇಂದು ಭಾರತದಲ್ಲಿ ಬಿಡುಗಡೆಯಾಗಿದೆ. ಈ ಮೊಬೈಲ್ ಹೊಸ ಲುಕ್ ಮತ್ತು ದೊಡ್ಡ ಬ್ಯಾಟರಿ ಸೇರಿದಂತೆ ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಟೆಕ್ ದೈತ್ಯ ಸ್ಯಾಮ್‌ಸಂಗ್ ಈಗಾಗಲೇ Galaxy M ಸರಣಿಯಲ್ಲಿ ಹಲವು ಬಜೆಟ್ ಬೆಲೆಯ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಅದರಂತೆಯೇ ಈ ಫೋನನ್ನು ದೇಶೀಯ ಮಾರುಕಟ್ಟೆಗೆ ಪರಿಚಯಿಸಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಮೊಬೈಲ್‌ ಕೇವಲ ಒಂದೇ ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.7 ಇಂಚಿನ ಅಲೋಲೆಡ್ ಡಿಸ್ಪ್ಲೇ ಹೊಂದಿದೆ. ಜೊತೆಗೆ 4GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಭಾರತದಲ್ಲಿ Samsung Galaxy M16 ಲಾಂಚ್; ಕೇವಲ 11,999 ರೂ.! ಅದ್ಭುತ ಫೀಚರ್ಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಫೋನನ್ನು 11,999 ರೂ.ಗಳ ಆರಂಭಿಕ ಮತ್ತು ಆಫರ್ ಬೆಲೆಗೆ ಬಿಡುಗಡೆ ಮಾಡಲಾಗಿದೆ. ಇದು ಫೋನಿನ 4GB + 128GB ಸ್ಟೋರೇಜ್ ರೂಪಾಂತರದ ಬೆಲೆ ಆಗಿದೆ. ಈ ಫೋನ್ ಇದೇ ಮಾರ್ಚ್ 5 ರಂದು ಮಧ್ಯಾಹ್ನ 12 ಗಂಟೆಯಿಂದ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಫೋನ್ ಖರೀದಿಸುವ ಗ್ರಾಹಕರಿಗೆ ಸ್ಯಾಮ್‌ಸಂಗ್ ಬೊಂಬಾಟ್ ಆಫರ್ ಘೋಷಿಸಿದೆ. ಈ ಫೋನ್ ಅಮೆಜಾನ್, ಕಂಪನಿಯ ಅಧಿಕೃತ ವೆಬ್‌ಸೈಟ್ (samsung.com) ಮತ್ತು ಆಯ್ದ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ನೀವು ಥಂಡರ್ ಬ್ಲ್ಯಾಕ್, ಮಿಂಟ್ ಗ್ರೀನ್ ಮತ್ತು ಬ್ಲಶ್ ಪಿಂಕ್ ಬಣ್ಣಗಳಲ್ಲಿ ಆರ್ಡರ್ ಮಾಡಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಮೊಬೈಲ್‌ 6.7 ಇಂಚಿನ ಸೂಪರ್ ಅಲೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇಯು ಫುಲ್ ಹೆಚ್‌ಡಿ ಪ್ಲಸ್ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುತ್ತದೆ. ಈ ಫೋನ್ ನಯವಾದ ವಿನ್ಯಾಸದೊಂದಿಗೆ ಬರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಗ್ರಾಫಿಕ್ಸ್‌ಗಾಗಿ ಈ ಮೊಬೈಲ್‌, ARM ಮಾಲಿ G57 MC2 ಜಿಪಿಯು ಸಹ ಹೊಂದಿದೆ. ಇದು 4GB RAM + 128GB ಆಂತರಿಕ ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 5 ಮೆಗಾಪಿಕ್ಸೆಲ್ ದ್ವಿತೀಯ (ಅಲ್ಟ್ರಾ ವೈಡ್) ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ (ಮ್ಯಾಕ್ರೋ) ಕ್ಯಾಮೆರಾ ಹೊಂದಿದೆ. ಇದಲ್ಲದೆ, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ M16 5G ಫೋನ್‌ 2.4GHz ಮತ್ತು 5GHz ಡ್ಯುಯಲ್ ಬ್ಯಾಂಡ್ ವೈ-ಫೈ, ವೈ-ಫೈ ಡೈರೆಕ್ಟ್, ಡ್ಯುಯಲ್ ಸಿಮ್ ಸೇರಿದಂತೆ ಹಲವು ಕನೆಕ್ಟಿವಿಟಿ ಸೌಲಭ್ಯಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5 ವರ್ಷಗಳ ಭದ್ರತಾ ನವೀಕರಣಗಳು ಮತ್ತು 4 ಪ್ರಮುಖ ಓಎಸ್ ಅಪ್‌ಗ್ರೇಡ್‌ಗಳನ್ನು ಪಡೆಯುತ್ತದೆ ಎಂದು ಸ್ಯಾಮ್‌ಸಂಗ್ ಹೇಳಿದೆ.

Best Mobiles in India

English summary
Samsung Galaxy M16 5G with 5000mAh battery launched in India: Check Price, Specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+