ಸದ್ಯ ಬಜೆಟ್‌ ಬೆಲೆಯಲ್ಲಿ ಈ ಫೋನ್‌ಗಳೆ ಬೆಸ್ಟ್ ಆಯ್ಕೆ!

|

ಪ್ರಸ್ತುತ ಸ್ಮಾರ್ಟ್‌ಫೋನ್ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ನಡೆಯುತ್ತಿದ್ದು, ಬಜೆಟ್‌ ಫೋನ್‌ಗಳಲ್ಲಿಯೂ ಅತ್ಯುತ್ತಮ ಅಪ್‌ಡೇಟ್‌ ಫೀಚರ್ಸ್‌ಗಳನ್ನು ಕಾಣಬಹುದಾಗಿದೆ. ಮುಖ್ಯವಾಗಿ ಕ್ಯಾಮೆರಾ, ಪ್ರೊಸೆಸರ್, ಬ್ಯಾಟರಿ, ಡಿಸೈನ್‌ಗಳಲ್ಲಿ ಸಂಪೂರ್ಣ ಹೊಸತನಗಳು ಸೇರಿಕೊಳ್ಳುತ್ತಿವೆ. ಅದರಲ್ಲಿಯೂ ಇತ್ತೀಚಿನ ಫೋನ್‌ಗಳಲ್ಲಿ 48ಎಂಪಿ ಕ್ಯಾಮೆರಾ ಕಾಮನ್ ಆಗಿ ಹೋಗಿದೆ. ಜೊತೆಗೆ ಭಿಗ್ ಬ್ಯಾಟರಿ ಸಾಥ ಪ್ರಮುಖ ಆಕರ್ಷಣೆ ಆಗಿದೆ.

ಬಜೆಟ್ ಪ್ರೈಸ್‌ಟ್ಯಾಗ್‌

ಹೌದು, ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳಲ್ಲಿ ಉತ್ತಮ ಫೀಚರ್ಸ್‌ಗಳು ಇರುವುದರಿಂದ ಗ್ರಾಹಕರು ಈ ಫೋನ್‌ಗಳನ್ನು ಖರೀದಿಸಲು ಮುಂದಾಗುತ್ತಾರೆ. ವೇಗದ ಪ್ರೊಸೆಸರ್, ದೀರ್ಘಬಾಳಿಕೆಯ ಬ್ಯಾಟರಿ, ಮತ್ತು ಗುಣಮಟ್ಟದ ಸೆಲ್ಫಿ ಕ್ಯಾಮೆರಾಗಳಂತ ಸೌಲಭ್ಯಗಳು ಪ್ಲಸ್‌ ಪಾಯಿಂಟ್ ಆಗಿವೆ. ಸದ್ಯ 15,000ರೂ ಒಳಗೆ ಲಭ್ಯ ಇರುವ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡ ಸ್ಮಾರ್ಟ್‌ಫೋನ್ ಖರೀದಿಸುವ ಪ್ಲ್ಯಾನ್ ಇದ್ರೆ ಇಲ್ಲಿವೆ ನೋಡಿ ಬೆಸ್ಟ್ ಆಯ್ಕೆಗಳು.

ಗ್ಯಾಲಕ್ಸಿ M21 - ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಗ್ಯಾಲಕ್ಸಿ M21 - ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಗ್ಯಾಲಕ್ಸಿ M21 - ಕ್ಯಾಮೆರಾ ಮತ್ತು ಬ್ಯಾಟರಿ

ಗ್ಯಾಲಕ್ಸಿ M21 - ಕ್ಯಾಮೆರಾ ಮತ್ತು ಬ್ಯಾಟರಿ

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ. 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಆರಂಭಿಕ ಬೆಲೆಯು 12,999ರೂ. ಆಗಿದೆ.

ರೆಡ್ಮಿ ನೋಟ್ 9 ಪ್ರೊ - ಡಿಸ್‌ಪ್ಲೇ + ಪ್ರೊಸೆಸರ್

ರೆಡ್ಮಿ ನೋಟ್ 9 ಪ್ರೊ - ಡಿಸ್‌ಪ್ಲೇ + ಪ್ರೊಸೆಸರ್

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್‌ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ರೆಡ್ಮಿ ನೋಟ್ 9 ಪ್ರೊ - ಕ್ಯಾಮೆರಾ + ಬ್ಯಾಟರಿ

ರೆಡ್ಮಿ ನೋಟ್ 9 ಪ್ರೊ - ಕ್ಯಾಮೆರಾ + ಬ್ಯಾಟರಿ

ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಆರಂಭಿಕ ಬೆಲೆಯು 12,999ರೂ. ಆಗಿದೆ.

Best Mobiles in India

English summary
Samsung Galaxy M21 And Xiaomi Redmi Note 9 Pro Best Budget Smartphones To Buy.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X