ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ವಿಮರ್ಶೆ: ಬಜೆಟ್ ಬೆಲೆಯಲ್ಲಿ ಆಕರ್ಷಕ ಫೋನ್!
ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, 6,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಇದರೊಂದಿಗೆ ವೇಗದ ಪ್ರೊಸೆಸರ್ ಮತ್ತು ಆಕರ್ಷಕ ಡಿಸೈನ್‌ನಂತಹ ಫೀಚರ್ಸ್‌ಗಳಿಂದಲೂ ಈ ಫೋನ್ ಹೆಚ್ಚು ಸದ್ದಿನಲ್ಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನ್ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ವೇರಿಯಂಟ್ ಆಯ್ಕೆ ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು 48ಎಂಪಿ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಸ್ಕ್ರೀನ್ ರೆಸಲ್ಯೂಶನ್ ಸಹ ಉತ್ತಮವಾಗಿದೆ. ಈ ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿದ್ದು, 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು ಇನ್‌ಫಿನಿಟಿ ಸೂಪರ್ AMOLED ಮಾದರಿಯಲ್ಲಿದೆ. ವಿಡಿಯೊ ವೀಕ್ಷಣೆಗೆ ಪೂರಕವಾಗಿದ್ದು, ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯವನ್ನು ಪಡೆದಿದೆ. ಹೈ ಎಂಡ್ ಗೇಮ್‌ಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ.

ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಸಹ ಈ ಫೋನ್ ಪಡೆದಿದೆ. 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಟ್ರಿಪಲ್ ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಮತ್ತು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಫೋಟೊ ಎಡಿಟಿಂಗ್ ಹಲವು ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನಿನ ಪ್ರಮುಖ ಆಕರ್ಷಣೆ ಅಂದರೇ ಅದುವೇ 6,000mAh ಬ್ಯಾಟರಿ ಆಗಿದೆ. ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 14499ರೂ. ಆಗಿದೆ. ಹಾಗೆಯೇ 6GB RAM + 128GB ವೇರಿಯಂಟ್ ಬೆಲೆಯು 16,499ರೂ. ಆಗಿದೆ. ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ.

ಕೊನೆಯ ಮಾತು
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಬೆಸ್ಟ್ ಫೋನ್ ಆಗಿ ಬಿಂಬಿತವಾಗುತ್ತದೆ. ಆದ್ರೆ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ನೀಡಿದ್ದರೇ ಈ ಫೋನಿನ ಡಿಮ್ಯಾಂಡ್ ಇನ್ನಷ್ಟು ಹೆಚ್ಚಾಗುತ್ತಿತ್ತು. ಬಜೆಟ್ ಬೆಲೆಯಲ್ಲಿ ಒಂದು ಉತ್ತಮ ಫೋನ್ ಹೊಂದಬೇಕು ಎನ್ನುವವರು ಈ ಫೋನ್ ಖರೀದಿಸಬಹುದಾಗಿದೆ.


Click it and Unblock the Notifications








