Home
ಮೊಬೈಲ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಫಸ್ಟ್ ಲುಕ್‌: ಬಜೆಟ್‌ ದರದಲ್ಲಿ ಜಬರ್ದಸ್ತ್ ಫೋನ್!

ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ಲಸ್‌ ಪಾಯಿಂಟ್ ಆಗಿದೆ. ಇದರೊಂದಿಗೆ ಸ್ಪೀಡ್‌ ಪ್ರೊಸೆಸರ್‌ ಮತ್ತು ಡಿಸೈನ್‌ನಂತಹ ಫೀಚರ್ಸ್‌ಗಳಿಂದಲೂ ಈ ಫೋನ್ ಹೆಚ್ಚು ಆಕರ್ಷಿಸಿದೆ.

ಗ್ಯಾಲಕ್ಸಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನ್ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 6GB + 128GB ಸ್ಟೋರೇಜ್ ಮತ್ತು 8GB + 128GB ವೇರಿಯಂಟ್‌ ಆಯ್ಕೆ ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು 64ಎಂಪಿ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಸ್ಕ್ರೀನ್ ರೆಸಲ್ಯೂಶನ್ ಸಹ ಉತ್ತಮವಾಗಿದೆ. ಇನ್ನು 6GB + 128GB ವೇರಿಯಂಟ್ ಬೆಲೆಯು 19,499ರೂ. ಆಗಿದೆ. ಹಾಗೆಯೇ 8GB + 128GB ವೇರಿಯಂಟ್‌ ಬೆಲೆಯು 21,499ರೂ. ಗಳಾಗಿದೆ. ಈ ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿದ್ದು, 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ sAMOLED ಮಾದರಿಯಲ್ಲಿದೆ. ವಿಡಿಯೊ ವೀಕ್ಷಣೆಗೆ ಪೂರಕವಾಗಿದ್ದು, ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ. ಹೈ ಎಂಡ್‌ ಗೇಮ್‌ಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಹಾಗೂ 480fps ಸ್ಲೋ ಮೋಷನ್ ರೆಕಾರ್ಡಿಂಗ್ ಆಯ್ಕೆಗಳಿವೆ. ಈ ವರ್ಗದಲ್ಲಿ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳಾಗಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 10 ಓಎಸ್‌, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಕೊನೆಯ ಮಾತು

ಕೊನೆಯ ಮಾತು

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಬೆಸ್ಟ್ ಫೋನ್ ಆಗಿ ಬಿಂಬಿತವಾಗುತ್ತದೆ. ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಮತ್ತು ಬ್ಯಾಟರಿ ಫೀಚರ್ಸ್‌ಗಳು ಹೆಚ್ಚಿನ ಗ್ರಾಹಕರನ್ನು ಸೆಳೆಯುವಂತಿವೆ. ಒಟ್ಟಾರೇ ಬಜೆಟ್ ಬೆಲೆಯಲ್ಲಿ ಒಂದು ಉತ್ತಮ ಫೋನ್ ಹೊಂದಬೇಕು ಎನ್ನುವವರು ಈ ಫೋನ್ ಖರೀದಿಸಬಹುದಾಗಿದೆ.

Best Mobiles in India

English summary
The smartphone comes with a 64MP quad camera set up at the back, 6000mAh battery Features are plus points.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+