Home
ಮೊಬೈಲ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫಸ್ಟ್‌ ಲುಕ್: ಬಜೆಟ್‌ ಬೆಲೆಗೆ ಬೊಂಬಾಟ್ ಫೋನ್‌!

ದಕ್ಷಿಣ ಕೊರಿಯಾ ಟೆಕ್‌ ದೈತ್ಯ ಸ್ಯಾಮ್‌ಸಂಗ್ ಈಗಾಗಲೇ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಕೆಲವು ಭಿನ್ನ ಶ್ರೇಣಿಯ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಹಾಗೆಯೇ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಸಹ ಈಗ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಅಟ್ರ್ಯಾಕ್ಟ್‌ ಮಾಡಿದೆ. ಮುಖ್ಯವಾಗಿ ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಮತ್ತು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರೊಂದಿಗೆ ಬಜೆಟ್‌ ಪ್ರೈಸ್‌ ಟ್ಯಾಗ್‌ ಹೊಂದಿದೆ.

ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಸಂಸ್ಥೆಯ ನೂತನ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಹಾಗೂ 6 GB RAM ಮತ್ತು 128GB ಸ್ಟೋರೇಜ್‌ನ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಸ್ಕ್ರೀನ್ ರೆಸಲ್ಯೂಶನ್ ಸಹ ಆಕರ್ಷಕವಾಗಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ ಬ್ರೈಟ್‌ನೆಸ್‌ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಸಹ ಬೆಂಬಲಿಸುತ್ತದೆ. ಕಣ್ಣಿನ ಸುರಕ್ಷತೆಗಾಗಿ ಐ ಕಂಫರ್ಟ್‌ ಶೀಲ್ಡ್‌ ಆಯ್ಕೆ ನೀಡಲಾಗಿದೆ. ಬಿಸಿಲಿನಲ್ಲಿಯೂ ಡಿಸ್‌ಪ್ಲೇ ಉತ್ತಮವಾಗಿ ಕಾಣಿಸುತ್ತದೆ.

ಪ್ರೊಸೆಸರ್‌ ಬಲ ಯಾವುದು

ಪ್ರೊಸೆಸರ್‌ ಬಲ ಯಾವುದು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 4GB RAM ಮತ್ತು 64GB ಹಾಗೂ 6 GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಹೆಚ್ಚುವರಿ ಮೆಮೊರಿಗಾಗಿ ಬಾಹ್ಯ ಎಸ್‌ಡಿ ಕಾರ್ಡ್‌ ಮೂಲಕ ವಿಸ್ತರಿಸುವ ಅವಕಾಶ ನೀಡಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಕ್ವಾಡ್-ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಫೋಟೊಗಳು ಉತ್ತಮವಾಗಿ ಮೂಡಿಬರುತ್ತವೆ. ಮಂದ ಬೆಳಕಿನಲ್ಲಿಯೂ ಉತ್ತಮ ಗುಣಮಟ್ಟದ ಫೋಟೊ ಸೆರೆಹಿಡಿಯಬಹುದಾಗಿದೆ.

ಬ್ಯಾಟರಿ ಮತ್ತು ಇತರೆ ಆಯ್ಕೆಗಳು

ಬ್ಯಾಟರಿ ಮತ್ತು ಇತರೆ ಆಯ್ಕೆಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLte, ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ. ಐ ಕಂಫರ್ಟ್‌ ಶೀಲ್ಡ್‌ ಆಯ್ಕೆ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 14,999ರೂ. ಹಾಗೂ 6 GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 16,999ರೂ. ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಪ್ಪು, ಬಿಳಿ ಮತ್ತು ನೀಲಿ ಸೇರಿದಂತೆ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಪ್ರಮುಖ ಆಫ್‌ಲೈನ್ ಹಾಗೂ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಗಳಲ್ಲಿ ಖರೀದಿಗೆ ಲಭ್ಯವಿದೆ.

Best Mobiles in India

English summary
Samsung Galaxy M32 First Look: Best Camera Smartphone At Budget Price Tag.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+